Karnataka Weather: ರಾಜ್ಯದ ಕೆಲವೇ ಕಡೆ ಮಾತ್ರ ಸಾಧಾರಣ ಮಳೆಯಾಗುವ ಮುನ್ಸೂಚನೆ

ಕರ್ನಾಟಕ, ಆಗಸ್ಟ್‌, 14: ಜುಲೈ ತಿಂಗಳಿನಲ್ಲಿ ಭಾರೀ ಮಳೆ ಸುರಿದ ಹಿನ್ನೆಲೆ ರಾಜ್ಯದ ಬಹುತೇಕ ಜಲಾಶಯಗಳು, ಕೆರೆಗಳು, ನದಿಗಳು ಅಪಾಯದ ಮಟ್ಟ ಮೀರಿ ಹರಿದಿದ್ದವು. ಆದರೆ ಆಗಸ್ಟ್‌ನಲ್ಲಿ ಮಳೆಯೇ ಇಲ್ಲದಂತಾಗಿದ್ದು, ಇದರಿಂದ ಹಲವು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಇಂದು ರಾಜ್ಯದ ಹಲವೆಡ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು ಪಡೆದಿದ್ದು, ಭಾನುವಾರ (ಆಗಸ್ಟ್‌ 14) ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಮಾತ್ರ ಮಳೆರಾಯ ತಂಪೆರೆದಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

Karnataka Weather: Rainfall forecast in many parts of the state on August 14

ಇಂದು (ಸೋಮವಾರ, ಆಗಸ್ಟ್‌ 14) ಸಂಜೆ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆ, ಹಾಗೆಯೇ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೂ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.

ಹಿಮಾಚಲದಲ್ಲಿ ಅಬ್ಬರದ ಮಳೆ

ಹಾಗೆಯೇ ಮತ್ತೊಂದೆಡೆ ದೇಶದ ಹಲವು ರಾಜ್ಯಗಳಲ್ಲಿ ಇಂದು ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಹಿಮಾಚಲ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಉತ್ತರಾಖಂಡದಲ್ಲಿ ಅಬ್ಬರದ ಮಳೆಯಾಗಲಿದೆ ಎಂದು ತಿಳಿಸಿದೆ.

ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡದಲ್ಲಿ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೆಯೇ ಇಂದು ಕೂಡ ಭಾರೀ ಮಳೆಯಾಗುವ ಸಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ ಹಿನ್ನೆಲೆ ಇಲ್ಲಿನ ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+