Karnataka weather: ಫೆಬ್ರವರಿ ಅಂತ್ಯದಲ್ಲಿ ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಕರ್ನಾಟಕ, ಫೆಬ್ರವರಿ, 11: ಚಳಿಯ ನಡುವೆಯು ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಫೆಬ್ರವರಿ ಅಂತ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯದಲ್ಲಿ ಬಿಸಿಲಿನ ಕಾವು ಹೆಚ್ಚಾಗಿಯೇ ಇದೆ. ಇನ್ನು ಫೆಬ್ರವರಿ ಅಂತ್ಯದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಬ್ರವರಿ ಆರಂಭದಿಂದ ರಾಜ್ಯದಲ್ಲಿ ಬಿರಿ ಬಿಸಿಲು ಶುರುವಾಗಿದೆ. ಇನ್ನು ಫೆಬ್ರವರಿ ಅಂತ್ಯದ ವೇಳೆಗೆ ತಾಪಾಮಾನ ಹೆಚ್ಚಳ ಆಗುವ ಮುನ್ಸೂಚನೆ ಇದೆ ಆದರೂ ಈ ನಡುವೆಯೇ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ನೀಡಿದೆ. ಅದರಲ್ಲೂ ಮಾರ್ಚ್ ಆರಂಭದಲ್ಲಿ ಬೆಂಗಳೂರಿನಲ್ಲಿ ಅಬ್ಬರದ ಮಳೆಯಾಗಿದೆ ಎನ್ನುವ ಮುನ್ಸೂಚನೆ ಇದೆ.

ಫೆಬ್ರವರಿಯಲ್ಲಿ ಬೆಂಗಳೂರು ನಗರದಲ್ಲಿ ಸರಾಸರಿ ಗರಿಷ್ಠ ತಾಪಮಾನವು 30.9 ಡಿಗ್ರಿ ಸೆಲ್ಸಿಯಸ್ ಆಗಿದೆ. ಈ ತಾಪಮಾನವು 2005ರಲ್ಲಿ ಕಂಡುಬಂದಂತಹ 35.9 ಡಿಗ್ರಿಗಳ ಸಾರ್ವಕಾಲಿಕ ದಾಖಲೆಯನ್ನು ಮುರಿದಂತಾಗಲಿದೆ. ಇನ್ನು ಬೆಂಗಳೂರಿನಲ್ಲಿ ಗಾಳಿ ಮತ್ತು ಮಳೆ ಕೊರತೆಯಿಂದಾಗಿ ತಾಪಮಾನ ಏರಿಕೆಗೆ ಕಾರಣವಾಗಿದೆ ಎಂದು ಅಂದಾಜಿಸಲಾಗಿದೆ. ಫೆಬ್ರವರಿಯಲ್ಲಿ ನಗರದಲ್ಲಿ 7.1 ಮಿಲಿ ಮೀಟರ್ ಮಳೆ ಆಗಬೇಕಿತ್ತು.












Click it and Unblock the Notifications