Karnataka Weather: ಮುಂದಿನ 3 ದಿನ ರಾಜ್ಯದ ಈ ಭಾಗದಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ದಾಖಲು ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿ ಮಾಯವಾಗಿದ್ದು, ಹಲವೆಡೆ ಮಳೆಯಾಗುತ್ತಿದೆ. ಮತ್ತೊಂದೆಡೆ ಬೇಸಿಗೆಗೂ ಮುನ್ನ ತಾಪಮಾನ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ. ಹಾಗೆಯೇ ಮುಂದಿನ ಹಲವು ದಿನಗಳಲ್ಲಿ ಈ ಭಾಗಗಳಲ್ಲಿ ದಾಖಲೆ ಮಟ್ಟದ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮಾರ್ಚ್ 2) ಬೆಳಗ್ಗೆ ತುಸು ಚಳಿ ಪ್ರಮಾಣ ಇದ್ದು, ಮಧ್ಯಾಹ್ನದ ವೇಳೆಗೆ ರಣ ಬಿಸಿಲು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ. ಹಾಗೆಯೇ ಇನ್ನುಳಿದ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ತಪಾಮಾನದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೇಸಿಗೆಗೂ ಮುನ್ನವೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರಿಕೆ ಆಗುತ್ತಲೇ ಇದೆ. ಇಂದು (ಮಾರ್ಚ್ 02) ಕೂಡ ರಾಜ್ಯದ ಹಲವೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗಗಳಲ್ಲಿ ಈಗಾಗಲೇ ತಾಪಮಾನ ಹೆಚ್ಚಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಈ ಭಾಗದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ತಿಳಿಸಿದೆ.
ಪ್ರತಿವರ್ಷವೂ ಸಹ ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ ಹೆಚ್ಚಾಗಲಿದೆ. ಆದರೆ ಈ ಬಾರಿ ಮಾತ್ರ ಕರವಳಿ ಕರ್ನಾಟಕ ಜಿಲ್ಲೆಗಳಲ್ಲಿ ದಾಖಲೆ ಮಟ್ಟದಲ್ಲಿ ಬಿಸಿಲು ದಾಖಲಾಗುತ್ತಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಈ ಭಾಗದಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ನಡುವೆಯೂ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯದೆ ಎಂದು ಮುನ್ಸೂಚನೆ ನೀಡಿದೆ.
ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಗದಗ, ಬೆಳಗಾವಿ, ಬಾಗಲಕೋಟೆಯಲ್ಲಿ ತಾಪಮಾನವು ವಾಡಿಕೆಗಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 42-45 ಡಿಗ್ರಿ ಸೆಲ್ಸ್‌ಯಸ್‌ವರೆಗೆಗೆ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ವಾಡಿಕೆಗಿಂತ ಹೆಚ್ಚು ತಾಪಮಾನ ದಾಖಲಾಗಲಿದೆ ಎನ್ನುವ ಮುನ್ಸೂಚನೆ ಇದೆ. ಆದ್ದರಿಂದ ಮಧ್ಯಹ್ನ 3 ಗಂಟೆವರೆಗೂ ಬಿಸಿಲಿಗೆ ಬರಬೇಡಿ ಎಂದು ಹವಾಮಾನ ಇಲಾಖೆ ಜನರಿಗೆ ಎಚ್ಚರಿಕೆ ನೀಡಿದೆ.
ಮುಂದಿನ 2 ತಿಂಗಳು ರಾಜ್ಯದ ಬಹುತೇಜ ಜಿಲ್ಲೆಳಲ್ಲಿ ಇದೇ ರೀತಿಯ ವಾತಾವರಣ ಇಲಿದೆ. ಬಳಿಕ ಮುಂಗಾರು ಮಳೆ ಆರ್ಭಟಿಸಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ 2024ರಲ್ಲಿ ರಾಜ್ಯಕ್ಕೆ ಜೂನ್ ತಿಂಗಳ ಆರಂಭದಲ್ಲೇ ಮುಂಗಾರು ಎಂಟ್ರಿ ಕೊಟ್ಟ ಪರಿಣಾಮ ಬಹುತೇಕ ಜಿಲ್ಲೆಗಳಲ್ಲಿ ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ತುಂಬಿ ಹರಿದಿದ್ದವು. ಇದೀಗ 2025ರಲ್ಲೂ ಕೂಡ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಇದೆ. ಅಲ್ಲದೆ, ಈ ಬಗ್ಗೆ ಹಲವು ಸ್ವಾಮಿಜಿಗಳು ಕೂಡ ಭವಿಷ್ಯಗಳನ್ನು ನುಡಿದಿದ್ದಾರೆ. ಈ ಭವಿಷ್ಯಗಳನ್ನು ನಿಜವಾಗಲಿವೆಯೇ ಎಂದು ಕಾದುನೋಡಬೇಕಿದೆ.












Click it and Unblock the Notifications