Karnataka Rain: ಈ ಜಿಲ್ಲೆಗಳಲ್ಲಿ ನಾಲ್ಕು ದಿನ ರಣಮಳೆ, ರೆಡ್ ಅಲರ್ಟ್ ಘೋಷಣೆ!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗಿದೆ. ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಇನ್ನೂ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯಲಿದ್ದು, ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹೇಳಿದೆ. ಶುಕ್ರವಾರವು ಕೂಡ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಮುಂದಿನ ಐದು ದಿನಗಳ ಕಾಲ ಗರಿಷ್ಠ ಉಷ್ಣಾಂಶವು 3ರಿಂದ 4 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಮಧ್ಯ ಮಹಾರಾಷ್ಟ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಇದೆ. ಪೂರ್ವ ದಿಕ್ಕಿನಲ್ಲಿರುವ ಒಂದು ತಗ್ಗು ದಕ್ಷಿಣ ಒಳನಾಡಿನಿಂದ ನೈಋತ್ಯ ಮಧ್ಯಪ್ರದೇಶದವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಇರುತ್ತದೆ. ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಒಡಿಶಾದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್ಮುಖ ವಾಯುಮಾರ್ಗದ ಪರಿಚಲನೆ ಇರುತ್ತದೆ. ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿ ಮೇಲ್ಮುಖ ವಾಯುಮಾರ್ಗದ ಪರಿಚಲನೆ ಇದೆ. ಈ ಹಿನ್ನೆಲೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ.

ರಾಜ್ಯದ ವಿವಿಧೆಡೆ ಗುರುವಾರ ಭಾರಿ ಮಳೆಯಾದ ಹಿನ್ನೆಲೆ ಒಂಬತ್ತು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಎಂಟು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿತ್ತು. ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದೆಲ್ಲೆಡೆ ಗುಡುಗು ಸಹಿತ ಮಳೆಯಾಗಲಿದೆ. ಒಟ್ಟಾರೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮೂಲಕ ರೌದ್ರಾವತಾರ ತಾಳಲಿದೆ.
ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ಕಿ.ಮೀ ನಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಕಲಬುರಗಿ, ಬೀದರ್, ಗದಗ ಜಿಲ್ಲೆಗಳಲ್ಲಿ ಗಂಟೆಗೆ 50 ಕಿ.ಮೀನಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಈ ಜಿಲ್ಲೆಗಳಲ್ಲೂ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸೂಚನೆ ನೀಡಿದೆ.

ಬೆಂಗಳೂರು ನಗರ ಹಾಗು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಿ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್‌ನಿಂದ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣವೇ ಇರಲಿದೆ.












Click it and Unblock the Notifications