ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ನು ನಾಲ್ಕೈದು ದಿನ ಮಳೆಯಲ್ಲಿ ಮಿಂದೇಳಬೇಕಿದೆ ಕರ್ನಾಟಕ

|
Google Oneindia Kannada News

ಬೆಂಗಳೂರು, ಅ. 26: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದ ಕಾರಣ ಆರಂಭವಾದ ಮಳೆ ಇನ್ನೂ ನಾಲ್ಕೈದು ದಿನಗಳ ಕಾಲ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಅಕ್ಟೋಬರ್ 30ರವರೆಗೆ ಹಲವೆಡೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮಳೆ ಕ್ಷೀಣವಾಗಲಿದ್ದು, ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆ ಒಂದೆರಡು ದಿನ ಸುರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದರು.

ಗದಗ, ಬಾಗಲಕೋಟೆ, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದ್ದು, ಬೆಂಗಳೂರಿನಲ್ಲಿ ಹಾಕಿದ್ದ ಯೆಲ್ಲೋ ಅಲರ್ಟ್ ಇನ್ನೂ ಹಿಂತೆಗೆದುಕೊಳ್ಳಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಮಳೆಯಗುವ ನಿರೀಕ್ಷೆಯಾಗಿದೆ.

Karnataka Weather report and forecast as on October 26

ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಮಳೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಇಟ್ಕುಳಿ ಎಂಬಲ್ಲಿ72ಮಿ.ಮೀ ಸುರಿದಿದೆ, ಬೆಂಗಳೂರು ದಕ್ಷಿಣ ವಿಭಾಗದ ದೊಡ್ದಬಿದರಕಲ್ಲುವಿನಲ್ಲಿ 32.5 ಮಿ.ಮೀ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ.

Recommended Video

ಇನ್ನೂ ಜಾಸ್ತಿ ಆಗತ್ತೆ ಈರುಳ್ಳಿ ಬೆಲೆ | Indian Onion is stronger than American Dollar | Oneindia Kannada

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಗುಡುಗು ಸಹಿತ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

English summary
Karnataka and Bengaluru Weather report and forecast as on October 26 data provided by IMD.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X