Get Updates
Get notified of breaking news, exclusive insights, and must-see stories!

Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ

ರಾಜ್ಯದಲ್ಲಿ ಏಪ್ರಿಲ್ ತಿಂಗಳು ಸಾಮಾನ್ಯವಾಗಿ ಸುಡುಬಿಸಿಲಿನಿಂದ ಕೂಡಿರುತ್ತದೆ. ಆದರೆ ಈ ಬಾರಿ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬರುತ್ತಿವೆ. ಭಾರತೀಯ ಹವಾಮಾನ ಇಲಾಖೆ (IMD)ಯ ವರದಿಯ ಪ್ರಕಾರ, ಏಪ್ರಿಲ್ ತಿಂಗಳಿನಲ್ಲಿ ಭಾರತದಾದ್ಯಂತ ಗುಡುಗು ಸಹಿತ ಮಳೆ ಮತ್ತು ಮೋಡ ಕವಿದ ವಾತಾವರಣ ಹೆಚ್ಚಾಗಿ ಕಂಡುಬರಲಿದೆ. ಇದಕ್ಕೆ ಮುಖ್ಯ ಕಾರಣ ಪಾಶ್ಚಿಮಾತ್ಯ ಮಾರುತಗಳ (Western disturbances) ಪ್ರಭಾವ. ಇದರ ಪರಿಣಾಮವಾಗಿ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದರೂ, ಹಗಲಿನ ತಾಪಮಾನದಲ್ಲಿ ಭಾರಿ ಇಳಿಕೆ ಕಂಡುಬಂದಿಲ್ಲ. ಸೆಕೆಯ ವಾತಾವರಣ ಮುಂದುವರಿಯಲಿದೆ.

ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹವಾಮಾನ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಉಳಿದ ಕರಾವಳಿ ಭಾಗಗಳಲ್ಲಿ ಹೆಚ್ಚಾಗಿ ಒಣ ಹವಾಮಾನ ಮುಂದುವರಿಯಲಿದೆ.

Karnataka Weather

ಇನ್ನು ಉತ್ತರ ಒಳನಾಡಿನ ಬಗ್ಗೆ ಗಮನ ಹರಿಸುವುದಾದರೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಯಾದಗಿರಿ, ರಾಯಚೂರು, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿ.ಮೀ ಇರಲಿದ್ದು, ಬಿರುಗಾಳಿ ಜೊತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ಭಾಗದ ರೈತರು ಬೆಳೆಗಳ ರಕ್ಷಣೆಗೆ ತಕ್ಕ ಕ್ರಮ ಕೈಗೊಳ್ಳುವುದು ಸೂಕ್ತ.

ದಕ್ಷಿಣ ಒಳನಾಡಿನ ಹವಾಮಾನ

ದಕ್ಷಿಣ ಒಳನಾಡಿನ ಮಲೆನಾಡು ಹಾಗೂ ಇತರ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ. ಹವಾಮಾನ ಇಲಾಖೆಯು ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಇಂದಿನಿಂದ ಏಪ್ರಿಲ್ 4 ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಬಗ್ಗೆ ಯೆಲ್ಲೋ ಅಲರ್ಟ್‌ ನೀಡಿದೆ.

ಬೆಂಗಳೂರು ಹವಾಮಾನ ವರದಿ

ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಬೆಳಗಿನ ಜಾವದಿಂದ ಮಧ್ಯಾಹ್ನದವರೆಗೆ ಬಿಸಿಲಿನ ಧಗೆ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಕೆಲವು ಭಾಗಗಳಲ್ಲಿ ಹಗುರವಾದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ನಗರದಲ್ಲಿ ಇಂದು ಗರಿಷ್ಠ ತಾಪಮಾನವು 34.3°C ಮತ್ತು ಕನಿಷ್ಠ ತಾಪಮಾನವು 22.1°C ರ ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ. ಗಾಳಿಯ ವೇಗವು ಸುಮಾರು 16 ಕಿ.ಮೀ ಇರಲಿದ್ದು, ತೇವಾಂಶವು ಶೇ. 60-69 ರಷ್ಟಿರಲಿದೆ. ಹಗಲಿನ ವೇಳೆಯಲ್ಲಿ ಸೂರ್ಯನ(UV) ಕಿರಣಗಳ ಸೂಚ್ಯಂಕವು ಹೆಚ್ಚಿರುವುದರಿಂದ, ಮಧ್ಯಾಹ್ನ ಹೊರಗಡೆ ಹೋಗುವಾಗ ಸನ್ ಗ್ಲಾಸ್ ಹಾಗೂ ಛತ್ರಿ ಬಳಸುವುದು ಹಿತಕರ.

Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ

ಮುಂದಿನ ವಾರದವರೆಗೂ ರಾಜ್ಯದಲ್ಲಿ ಇದೇ ರೀತಿಯ ಮಿಶ್ರ ಹವಾಮಾನ ಮುಂದುವರಿಯಲಿದೆ ಎಂದು ಅಂದಾಜಿಸಲಾಗಿದೆ. ಒಂದು ಕಡೆ ಬಿಸಿಲಿನ ತಾಪ, ಮತ್ತೊಂದು ಕಡೆ ಸಂಜೆಯಾಗುತ್ತಿದ್ದಂತೆ ತಂಪಾದ ಗಾಳಿ ಹಾಗೂ ಮಳೆ ಸುರಿಯಲಿದೆ. ಹವಾಮಾನದಲ್ಲಿನ ಈ ಹಠಾತ್ ಬದಲಾವಣೆಗಳಿಂದಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹುಮುಖ್ಯ. ಜ್ವರ, ಶೀತದಂತಹ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಕುಡಿಯುವ ನೀರಿನ ಬಗ್ಗೆ ಎಚ್ಚರವಿರಲಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+