Karnataka Weather: ಇಂದು 29 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಬಿರುಗಾಳಿ ಸಹಿತ ಗುಡುಗು-ಮಳೆ ಎಚ್ಚರಿಕೆ

ಬೇಸಿಗೆಯ ಬಿರುಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡ ಜನತೆಗೆ ವರುಣ ದೇವ ತಂಪೆರೆಯುತ್ತಿದ್ದಾನೆ. ಆದರೆ ಕೇವಲ ಮಳೆ ಮಾತ್ರ ಬರುತ್ತಿಲ್ಲ, ಇದರ ಜೊತೆಗೆ ಗುಡುಗು, ಸಿಡಿಲು ಮತ್ತು ಬಿರುಗಾಳಿಯು ಬೀಸುತ್ತಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಅಧಿಕೃತ ವರದಿಯ ಪ್ರಕಾರ, ಇಂದು (ಏಪ್ರಿಲ್ 30) ಬೆಂಗಳೂರು ಸೇರಿದಂತೆ ರಾಜ್ಯದ ಬರೋಬ್ಬರಿ 29 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಬೆಳಗಾವಿ ಮತ್ತು ಬೀದರ್ ಹೊರತುಪಡಿಸಿ, ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಇಂದು ವರುಣನ ಆರ್ಭಟ ಜೋರಾಗಿರಲಿದೆ. ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆ ಬಿರುಗಾಳಿ ಮತ್ತು ಆಲಿಕಲ್ಲು ಮಳೆ ಬೀಳುವ ಮುನ್ಸೂಚನೆ ಕೂಡ ನೀಡಲಾಗಿದೆ.

Karnataka Weather

ಬಿಸಿಲು ಮತ್ತು ಮಳೆಯ ಕಣ್ಣಾಮುಚ್ಚಾಲೆ

ಒಂದೆಡೆ ಸಂಜೆ ಮಳೆಯಾಗುವ ನಿರೀಕ್ಷೆ ಇದ್ದರೂ, ಹಗಲಿನಲ್ಲಿ ತಾಪಮಾನದ ಪ್ರಮಾಣವೇನೂ ಕಡಿಮೆಯಾಗಿಲ್ಲ. ಉತ್ತರ ಒಳನಾಡು ಮತ್ತು ರಾಜ್ಯದ ಇತರೆ ಭಾಗಗಳಲ್ಲಿ ತಾಪಮಾನ ಸುಮಾರು 40 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನವು 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ವರದಿಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಹೆಚ್ಚಾಗಿರುವುದು ಬಿಸಿಲಿನ ಝಳವನ್ನು ಸೂಚಿಸುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣಾಂಶದ ಜೊತೆಗೆ ತೇವಾಂಶವೂ ಅಧಿಕವಾಗಿರುವುದರಿಂದ ಸೆಕೆ ಹೆಚ್ಚಿರಲಿದೆ.

ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಸಿದ್ದ ಆಲಿಕಲ್ಲು ಮಳೆ

ನಿನ್ನೆ ಸುರಿದ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯು ಸಿಲಿಕಾನ್ ಸಿಟಿಯಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಬೋರಿಂಗ್‌ ಆಸ್ಪತ್ರೆಯ ಬಳಿ ಕಾಪೌಂಡ್‌ ಗೋಡೆ ಕುಸಿದು 7 ಮಂದಿ ಸಾವನಪ್ಪಿರುವ ಘಟನೆ ನಡೆದಿದೆ. ನಗರದ ಹಲವೆಡೆ ರಸ್ತೆಗೆ ಮರಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೆ ಬಿಜಿಎಸ್ ಫ್ಲೈಓವರ್ ಸೇರಿದಂತೆ ಹಲವೆಡೆ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಮುಂಬರುವ ದಿನಗಳಲ್ಲೂ ಮಳೆಯ ಆರ್ಭಟ ಮುಂದುವರಿಯುವ ಸೂಚನೆ ಇರುವುದರಿಂದ ಬಿಬಿಎಂಪಿ ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

Bengaluru Weather: ನಗರದಲ್ಲಿ 2 ಗಂಟೆಗಳಲ್ಲಿ 7.7 ಸೆಂಟಿ ಮೀ ಮಳೆ ದಾಖಲು; ಮೇ 1ರತನಕ ಭಾರೀ ಮಳೆ
Bengaluru Weather: ನಗರದಲ್ಲಿ 2 ಗಂಟೆಗಳಲ್ಲಿ 7.7 ಸೆಂಟಿ ಮೀ ಮಳೆ ದಾಖಲು; ಮೇ 1ರತನಕ ಭಾರೀ ಮಳೆ

ಮುಂದಿನ ಮೂರು ದಿನಗಳ ಮುನ್ಸೂಚನೆ

ಹವಾಮಾನ ಇಲಾಖೆಯ ವರದಿಯಂತೆ ಮೇ 1 ರಂದು ಕಲಬುರಗಿ, ಯಾದಗಿರಿ, ರಾಯಚೂರು, ತುಮಕೂರು, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಅದೇ ರೀತಿ ಮೇ 2 ಮತ್ತು 3 ರಂದು ಕೂಡ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+