Karnataka Weather: ಬೆಂಗಳೂರಿಗರೇ ಮನೆಯಿಂದ ಆಚೆ ಹೋಗ್ತಿದ್ದೀರಾ? ಹಾಗಾದ್ರೆ ಇಂದಿನ ಹವಮಾನದ ಬಗ್ಗೆ ತಿಳಿದಿರಲಿ

ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮುಂಗಾರು ಮಳೆ ಈಗ ಕೊಂಚ ಬಿಡುವು ನೀಡಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯ ಪ್ರಕಾರ, ಇಂದು ಅಂದರೆ ಆಗಸ್ಟ್ 28ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಕಂಡುಬರುವ ಸಾಧ್ಯತೆಯಿದೆ.

ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಒಳನಾಡಿನಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ.

Karnataka Weather

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಇಂದು ಕೂಡ ಭಾಗಶಃ ಮೋಡಕವಿದ ವಾತಾವರಣ ಮುಂದುವರಿಯಲಿದೆ. ಕರಾವಳಿ ಕರ್ನಾಟಕದ ಒಂದಿಷ್ಟು ಬೇರೆ ಬೇರೆ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಮತ್ತು ರಭಸ ಹೆಚ್ಚಿರಲಿದ್ದು, ವಾತಾವರಣದಲ್ಲಿ ಶೇ. 80ಕ್ಕೂ ಹೆಚ್ಚು ತೇವಾಂಶ ಇರಲಿದೆ.

ಮೀನುಗಾರರು ಕಡಲಿಗೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇಲ್ಲಿನ ಗರಿಷ್ಠ ತಾಪಮಾನ 28°C ರಿಂದ 29°C ಹಾಗೂ ಕನಿಷ್ಠ ತಾಪಮಾನ 24°C ದಾಖಲಾಗುವ ನಿರೀಕ್ಷೆ ಇದೆ.

ಬೆಂಗಳೂರು ಹವಾಮಾನ: ಮೋಡ ಮುಸುಕಿದ ವಾತಾವರಣ, ಸಂಜೆ ಮಳೆ ಸಾಧ್ಯತೆ

ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಗ್ರಾಮಾಂತರ ಪ್ರದೇಶಗಳಲ್ಲಿ ಇಂದು ಹಗಲಿನ ವೇಳೆಯಲ್ಲಿ ಭಾಗಶಃ ಮೋಡಕವಿದ ಹಾಗೂ ಆಗಾಗ ಬಿಸಿಲಿನಿಂದ ಕೂಡಿದ ವಾತಾವರಣ ಇರಲಿದೆ. ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.

ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ತುಂತುರು ಅಥವಾ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಇದರೊಂದಿಗೆ ಪಶ್ಚಿಮ ದಿಕ್ಕಿನಿಂದ ತಣ್ಣನೆಯ ಗಾಳಿ ಬೀಸಲಿದೆ.

ಇನ್ನೂ ಮಲೆನಾಡು ಭಾಗಗಳಾದ ಕೊಡಗು, ಚಿಕ್ಕಮಗಳೂರು, ಮತ್ತು ಹಾಸನ ಜಿಲ್ಲೆಗಳಲ್ಲಿ ಕಳೆದ ವಾರ ಸುರಿದಿದ್ದ ಭಾರಿ ಮಳೆ ಈಗ ಸಂಪೂರ್ಣವಾಗಿ ತಗ್ಗಿದೆ. ಇಂದು ಈ ಜಿಲ್ಲೆಗಳ ಕೆಲವು ಪ್ರತ್ಯೇಕ ಸ್ಥಳಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ತಂಪಾದ ಗಾಳಿ ಮತ್ತು ಮಂಜು ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 24°C-26°C ಇರಲಿದೆ. ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಇಳಿಮುಖವಾಗಿದ್ದು, ಇಂದು ಬಹುತೇಕ ಬಿಸಿಲು ಮತ್ತು ಒಣ ಹವಾಮಾನ ಇರಲಿದೆ.

ಉತ್ತರ ಒಳನಾಡಿಗೆ ಒಣ ಹವಾಮಾನ ಮತ್ತು ಬಿರುಗಾಳಿ ಎಚ್ಚರಿಕೆ

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಂಪೂರ್ಣವಾಗಿ ಒಣ ಹವಾಮಾನವಿರಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೀದರ್ ಮತ್ತು ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ವರೆಗೆ ತಲುಪುವ ಸಾಧ್ಯತೆಯಿದೆ. ಆದರೆ, ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಿಂಚು ಮತ್ತು ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕರು ಗಾಳಿಯ ತೀವ್ರತೆಯ ಬಗ್ಗೆ ಎಚ್ಚರ ವಹಿಸುವುದು ಸೂಕ್ತ.

ಒಟ್ಟಿನಲ್ಲಿ, ಆಗಸ್ಟ್ 28ರಂದು ಕರ್ನಾಟಕದಲ್ಲಿ ಮುಂಗಾರಿನ ಅಬ್ಬರ ಕಡಿಮೆಯಾಗಿದ್ದು, ಕರಾವಳಿ ಮತ್ತು ಮಲೆನಾಡಿನ ಕೆಲವೆಡೆ ಮಾತ್ರ ಹಗುರ ಮಳೆಯಾಗಲಿದೆ. ಉಳಿದಂತೆ ಇಡೀ ರಾಜ್ಯದಲ್ಲಿ ಬಿಸಿಲು ಮತ್ತು ಮೋಡದ ಕಣ್ಣಾಮುಚ್ಚಾಲೆ ಆಟದೊಂದಿಗೆ ಒಣ ಹವಾಮಾನ ಮುಂದುವರಿಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+