Karnataka Weather: ರಾಜ್ಯಾದ್ಯಂತ ಮುಂದುವರಿದ ಮುಂಗಾರು ಅಬ್ಬರ; ಕರಾವಳಿ, ಒಳನಾಡಿನಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಮುಂದುವರಿದಿದ್ದು, ಆಗಸ್ಟ್ 21ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನ ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ವಿಶೇಷವಾಗಿ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಹಲವೆಡೆ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ರವಾನಿಸಿದ್ದು, ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

Karnataka Weather

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಶುಕ್ರವಾರವೂ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಚದುರಿದಂತೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ತೀವ್ರತೆ ಹೆಚ್ಚಿರಲಿದ್ದು, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರವಾಗಿ ಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಿರಲಿದ್ದು, ಮಳೆ ಮತ್ತು ಬಿರುಗಾಳಿ ಇರುವ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಹೆಚ್ಚಿರಲಿದೆ. ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಬಗ್ಗೆ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನಲ್ಲೂ ಮುಂದಿನ ಒಂದೆರಡು ದಿನಗಳ ಕಾಲ ಚದುರಿದಂತೆ ತುಂತುರು ಅಥವಾ ಸಾಧಾರಣ ಮಳೆಯಾಗಲಿದೆ. ರೈತರು ಹಾಗೂ ಸಾರ್ವಜನಿಕರು ಸಿಡಿಲು ಮತ್ತು ಮಿಂಚಿನ ಬಗ್ಗೆ ಎಚ್ಚರ ವಹಿಸುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ (KSNDMC) ಸೂಚಿಸಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?

ಇನ್ನು ರಾಜಧಾನಿ ಬೆಂಗಳೂರಿನ ಹವಾಮಾನದ ಬಗ್ಗೆ ಹೇಳುವುದಾದರೆ, ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಆಗಾಗ ಸಾಧಾರಣ ಮಳೆ ಹಾಗೂ ಹೆಚ್ಚಿನ ಭಾಗಗಳಲ್ಲಿ ದಿನವಿಡೀ ತುಂತುರು ಮಳೆ ಸುರಿಯುವ ಸಾಧ್ಯತೆ ಇದೆ. ತಾಪಮಾನವು ಗರಿಷ್ಠ 29-30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21-22 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ವಾಹನ ಸವಾರರು ಜಾರುವ ರಸ್ತೆಗಳಲ್ಲಿ ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಈ ವರ್ಷ ಮುಂಗಾರು ವಿಳಂಬವಾಗಿ ಆರಂಭವಾದರೂ, ಆಗಸ್ಟ್ ತಿಂಗಳಿನಲ್ಲಿ ಉತ್ತಮ ಮಳೆಯಾಗುತ್ತಿರುವುದು ಜಲಾಶಯಗಳ ನೀರಿನ ಮಟ್ಟ ಹೆಚ್ಚಲು ಕಾರಣವಾಗಿದೆ. ಕರಾವಳಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಸ್ವಲ್ಪಮಟ್ಟಿಗೆ ಅಸ್ತವ್ಯಸ್ತಗೊಂಡಿದ್ದರೂ, ಕೃಷಿ ಚಟುವಟಿಕೆಗಳಿಗೆ ಭಾರಿ ಅನುಕೂಲವಾಗಿದೆ.

ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ನದಿಗಳು ಮೈದುಂಬಿ ಹರಿಯುತ್ತಿವೆ. ಜಲಪಾತಗಳು ಕಳೆಗಟ್ಟಿದ್ದು, ಪ್ರವಾಸಿಗರನ್ನು ಸೆಳೆಯುತ್ತಿವೆ. ಆದರೆ, ಮಳೆಯ ತೀವ್ರತೆ ಹೆಚ್ಚಿರುವ ಕಾರಣ ಪ್ರವಾಸಿಗರು ನದಿ, ಜಲಪಾತಗಳ ಸಮೀಪ ತೆರಳದಂತೆ ಸ್ಥಳೀಯ ಆಡಳಿತಗಳು ಸೂಚನೆ ನೀಡಿವೆ.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದ್ದು , ಕೃಷಿ ಕಾರ್ಯಗಳಿಗೆ ಈ ಮಳೆ ಮರುಜೀವ ನೀಡಿದೆ. ಹವಾಮಾನ ಇಲಾಖೆಯ ವರದಿಗಳ ಪ್ರಕಾರ , ಮುಂದಿನ ವಾರಾಂತ್ಯದವರೆಗೂ ರಾಜ್ಯದ ವಿವಿಧೆಡೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮಳೆಯಿಂದಾಗಿ ತಂಪಾದ ವಾತಾವರಣ ನಿರ್ಮಾಣವಾಗಿದೆ. ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಚಳಿಯ ಅನುಭವವಾಗುತ್ತಿದ್ದು, ಬೆಳಗಿನ ಜಾವವೂ ಮಂಜು ಕವಿದ ವಾತಾವರಣ ಕಂಡುಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+