Karnataka Weather report: ಜಿಲ್ಲಾವಾರು ಏಪ್ರಿಲ್‌ 23ರ ಹವಾಮಾನ ವರದಿ, ಇಲ್ಲಿದೆ ವಿವರ

ಕರ್ನಾಟಕ, ಏಪ್ರಿಲ್‌, 23: ರಾಜ್ಯದ ಹಲವೆಡೆ ಬಿರುಬಿಸಿಲಿನ ನಡುವೆಯೂ ಮಳೆರಾಯ ಈಗಾಗಲೇ ಅಬ್ಬರಿಸಿ ಬೊಬ್ಬೆರೆದಿದ್ದು, ಜನರ ಮುಖದಲ್ಲಿ ಮಂದಹಾಸ ಮೂಡಿಸಿದ್ದಾನೆ. ಹಾಗೆಯೆ ಭಾನುವಾರವೂ (ಏಪ್ರಿಲ್‌ 23) ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಚಾಮರಾಜನಗರ ಮತ್ತು ಕೋಲಾರದಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಷ್ಟೇ ಅಲ್ಲದೆ ರಾಜ್ಯದ ಕೆಲವೆಡೆ ಬಿಸಿಲಿನ ತಾಪಮಾನವೂ ಹೆಚ್ಚಾಗಲಿದೆ ಎಂದು ತಿಳಿಸಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ. ಬಳ್ಳಾರಿ, ರಾಯಚೂರು ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ.

Karnataka Weather report: District wise weather report of april 23, know detail

ಅದರಲ್ಲೂ ಬಿಸಿಲಿನ ನಾಡು ಎಂದೇ ಹೆಸರುವಾಸಿ ಆಗಿರುವ ರಾಯಚೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಲೇ ಇದೆ. ಇಲ್ಲಿನ ಜನ ಬಿಸಿಲಿನ ಬೇಗೆಗೆ ಬೆಂದು ಹೋಗಿದ್ದು, ಮಳೆಗಾಗಿ ಆಕಾಶದತ್ತ ಮುಖ ಮಾಡಿದ್ದಾರೆ. ಹಾಗಾದರೆ ರಾಜ್ಯದ ಜಿಲ್ಲಾವಾರು ತಾಪಮಾನ ಹೇಗಿದೆ ಎಂದು ಇಲ್ಲಿ ತಿಳಿಯಿರಿ.

ಜಿಲ್ಲಾವಾರು ಗರಿಷ್ಠ, ಕನಿಷ್ಠ ತಾಪಮಾನ

1. ಬೆಂಗಳೂರು: 32-21
2. ಮಂಗಳೂರು: 34-26
3. ಶಿವಮೊಗ್ಗ: 38-20
4. ಬೆಳಗಾವಿ: 36-19
5. ಮೈಸೂರು: 34-22
6. ಮಂಡ್ಯ: 35-22
7. ಮಡಿಕೇರಿ: 32-16
8. ರಾಮನಗರ: 34-22
9. ಹಾಸನ: 34-19
10. ಚಾಮರಾಜನಗರ: 33-22

11. ಚಿಕ್ಕಬಳ್ಳಾಪುರ: 34-21
12. ಕೋಲಾರ: 32-21
13. ತುಮಕೂರು: 34-21
14. ಉಡುಪಿ: 34-26
15. ಕಾರವಾರ: 34-24
16. ಚಿಕ್ಕಮಗಳೂರು: 34-18
17. ದಾವಣಗೆರೆ: 37-21
18. ಹುಬ್ಬಳ್ಳಿ: 37-20
19. ಚಿತ್ರದುರ್ಗ: 36-21
20. ಹಾವೇರಿ: 38-21

21. ಬಳ್ಳಾರಿ: 39-24
22. ಗದಗ: 37-22
23. ಕೊಪ್ಪಳ: 38-23
24. ರಾಯಚೂರು: 39-24
25. ಯಾದಗಿರಿ: 39-25
26. ವಿಜಯಪುರ: 37-24
27. ಬೀದರ್: 36-23
28. ಕಲಬುರಗಿ: 39-24
29. ಬಾಗಲಕೋಟೆ: 38-23

ಹಲೆವೆಡೆ ಸಾಧಾರಣ ಮಳೆ ಸಾಧ್ಯತೆ

ಇನ್ನು ಇಂದು ಕೂಡ ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಆಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ ಹಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಈಗಾಗಲೇ ಮಳೆ ಆಗಿದೆ.

Karnataka Weather report: District wise weather report of april 23, know detail

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಆಗಲಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ವಾಡಿಕೆಗಿಂತ 2ರಿಂದ 3 ಡಿಗ್ರಿ ಹಚ್ಚಾಗಿರಲಿದೆ. ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್‌ನಲ್ಲಿ ಗುಡುಗು, ಮಿಂಚು ಸಹಿತ ಹಗುರ ಮಳೆ ಆಗಲಿದೆ.

ಧಾರವಾಡ, ಹಾವೇರಿಯಲ್ಲಿ ಸಾಧಾರಣ ಮಳೆ ಆಗಲಿದೆ. ಗದಗ, ಕೊಪ್ಪಳ, ವಿಜಯಪುರದಲ್ಲಿ ಒಣಹವೆ ಇರಲಿದೆ. ಕಲಬುರಗಿ, ರಾಯಚೂರು, ಯಾದಗಿರಿಗಳಲ್ಲಿ ಹಗುರ/ ಸಾಧಾರಣ ಮಳೆ ಆಗಲಿದೆ. ವಿಜಯಪುರದಲ್ಲಿ ಒಣಹವೆಯ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಅಲ್ಲಲ್ಲಿ ಏಪ್ರಿಲ್‌ 25ರವರೆಗೆ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆ ಆಗುವ ಸಾಧ್ಯತೆ ಇದೆ. ಇಂದು ಹಲವೆಡೆ ಸಾಮಾನ್ಯಕ್ಕಿಂತ ಉಷ್ಣಾಂಶವು 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಅಲ್ಲದೆ ಬಳ್ಳಾರಿಯಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆ ಇರಲಿದೆ. ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಮಾನ್ಯ ಮಳೆ, ಚಾಮರಾಜನಗರದಲ್ಲಿ ಹಗುರ ಸಾಧಾರಣ ಮಳೆ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ, ಹಾಸನದಲ್ಲಿ ಸಾಧಾರಣ ಮಳೆ ಆಗಲಿದೆ ಎನ್ನುವ ಮುನ್ಸೂಚನೆ ನೀಡಿದೆ.

ಕೊಡಗು, ಕೋಲಾರ, ಮಂಡ್ಯ, ರಾಮನಗರ, ಮೈಸೂರಿನಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಆಗಲಿದೆ. ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಇರಲಿದೆ. ವಿಜಯನಗರದಲ್ಲಿ ಸಧಾರಣ ಮಳೆ ಆಗಲಿದೆ. ಹಾಗೆಯೆ ಏಪ್ರಿಲ್‌ 25ರವರೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆ ಆಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಉಷ್ಣಾಂಶವು 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+