Karnataka Weather: ರಾಜ್ಯದಲ್ಲಿಂದು ಭಾರಿ ಮಳೆ; 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಎಲ್ಲೆಲ್ಲಿ ?

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಜುಲೈ ತಿಂಗಳ ಅಂತ್ಯದವರೆಗೂ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನ ಭಾರತೀಯ ಹವಾಮಾನ ಇಲಾಖೆ ನೀಡಿದೆ ನೋಡಿ. ಆಗ್ನೇಯ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಸುತ್ತಮುತ್ತ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡಿವೆ. ಇದರ ಪರಿಣಾಮವಾಗಿ ದೇಶದ ಪಶ್ಚಿಮ ಹಾಗೂ ದಕ್ಷಿಣ ಭಾಗಗಳಲ್ಲಿ ಮಳೆ ಹೆಚ್ಚಾಗಿದೆ.

ವಿಶೇಷವಾಗಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಲಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ವರದಿಗಳ ಪ್ರಕಾರ, ಇಂದು ಅಂದರೆ ಜುಲೈ 25 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

Karnataka Weather

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ನೀಡಿದೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಕಾರಣದಿಂದಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತಗಳು ಜುಲೈ 25 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿವೆ. ಕರಾವಳಿ ಭಾಗದಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಅಲೆಗಳ ಅಬ್ಬರವೂ ಹೆಚ್ಚಾಗಲಿರುವ ಕಾರಣ ಕಡಲತೀರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಇನ್ನೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿಯೂ ವರುಣನ ಆರ್ಭಟ ಗುರುವಾರದಿಂದಲೇ ಜೋರಾಗಿದೆ. ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿರುವುದರಿಂದ ಜಲಪಾತಗಳು ಹಾಗೂ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುವ ಸಾಧ್ಯತೆ ಇದೆ. ಕಾವೇರಿ, ತುಂಗಾ, ಭದ್ರಾ ನದಿಗಳ ಒಳಹರಿವು ಹೆಚ್ಚಾಗಿದ್ದು, ಜಲಾಶಯಗಳ ನೀರಿನ ಮಟ್ಟ ಭಾರಿ ಏರಿಕೆ ಕಂಡಿದೆ.

ಇನ್ನುಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗದಲ್ಲಿಯೂ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರಿನ ಹವಾಮಾನದ ಬಗ್ಗೆ ಗಮನಹರಿಸುವುದಾದರೆ, ನಗರದಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡಕವಿದ ತಂಪು ವಾತಾವರಣ ಮುಂದುವರೆಯಲಿದೆ. ದಿನದ ಬಹುಪಾಲು ಸಮಯ ತಂಪಾದ ಮೇಲ್ಮೈ ಗಾಳಿ ಬೀಸಲಿದ್ದು, ಅಲ್ಲಲ್ಲಿ ಸಾಧಾರಣದಿಂದ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದ್ದು, ಒಟ್ಟಿನಲ್ಲಿ ನಗರದ ಜನತೆಗೆ ಮಲೆನಾಡಿನ ಚಳಿಯ ಅನುಭವವಾಗಲಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ಪ್ರಮುಖವಾಗಿ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ತುಂತುರು ಮಳೆಯಾಗುವ ನಿರೀಕ್ಷೆ ಇದೆ.

ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಮುಂಗಾರು ಮಳೆ ಸಾಕಷ್ಟು ಸಕ್ರಿಯವಾಗಿರಲಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಅಪಾಯವಿರುವುದರಿಂದ ಮತ್ತು ಚರಂಡಿಗಳು ಉಕ್ಕಿ ಹರಿಯುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಗುಡ್ಡಗಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಮಣ್ಣು ಸಡಿಲಗೊಂಡು ಭೂಕುಸಿತದ ಭೀತಿ ಇರುವುದರಿಂದ ವಾಹನ ಸವಾರರು ರಾತ್ರಿ ವೇಳೆ ಆ ಮಾರ್ಗಗಳಲ್ಲಿ ಪ್ರಯಾಣಿಸುವಾಗ ತೀವ್ರ ಎಚ್ಚರಿಕೆ ವಹಿಸುವುದು ಸೂಕ್ತ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+