ಗರಿಷ್ಠ ತಾಪಮಾನದಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಕಲಬುರಗಿ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 20 : ಕಾದ ಕಾವಲಿಯಂತಾಗಿರುವ ಕಲಬುರಗಿ ಹಲವಾರು ದಿನಗಳಿಂದ ತನ್ನ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಗರಿಷ್ಠ 43.6 ಡಿಗ್ರಿ ಸೆಲ್ಶಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.

ಕರ್ನಾಟಕದ ಹಲವು ಪ್ರದೇಶಗಳಲ್ಲಿ ಒಣಹವೆ ಮುಂದುವರಿದಿದ್ದರೂ ಬುಧವಾರ ಕೆಲವು ಜಿಲ್ಲೆಗಳಲ್ಲಿ ಅಲ್ಪ ಮಳೆ ಸುರಿದು ತಂಪೆರೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೈಸೂರು ಜಿಲ್ಲೆಯ ಸರಗೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ, ರಾಮನಗರ ಜಿಲ್ಲೆಯ ಕನಕಪುರದಲ್ಲಿ ತಲಾ 1 ಸೆಂ.ಮೀ. ಮಳೆ ಸುರಿದಿದೆ.[ಭೀಕರ ಬಿಸಿಲು : ಇತರ ನಗರಗಳೊಂದಿಗೆ ಕಲಬುರಗಿ ಪೈಪೋಟಿ]

Karnataka weather report : Kalaburagi registers maximum temperature

ಬೆಂಗಳೂರಿನಲ್ಲಿ ಬೆಳಗಿನ ಜಾವ ಮತ್ತು ಸಾಯಂಕಾಲ ಮೋಡ ಕವಿದ ವಾತಾವರಣ ಇರುತ್ತದೆಯಾದರೂ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಯಾವುದೇ ಮಳೆಯಾಗಿಲ್ಲ. ಆದರೆ, ಹಗಲಿನ ಹೊತ್ತು ಎಂದಿನಂತೆ ರಣಬಿಸಿಲು ನಾಗರಿಕರನ್ನು ದಹಿಸುತ್ತಿದೆ. ಬೆಂಗಳೂರಿನಲ್ಲಿ ಬುಧವಾರ 34 ಡಿಗ್ರಿ ತಾಪಮಾನ ದಾಖಲಾಗಿದೆ.[ಮುಂಗಾರು ಮುನ್ಸೂಚನೆ, ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ]

ಮುಂದಿನ 5 ದಿನಗಳ ಕಾಲ ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಭಾಗದಲ್ಲಿ ಅಲ್ಪ ಮಳೆಯಾಗಬಹುದು ಎಂದು ಅಂದಾಜಿಸಿದ್ದಾರೆ. ಸಂಜೆಯ ವೇಳೆ ಜೋರಾಗಿ ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka weather report : Kalaburagi has registered maximum temperature of 43.6 degree celcius. Meteorological department has predicted that coastal and south interior Karnataka may receive isolated rain in next 5 days.
Please Wait while comments are loading...