Karnataka Weather : ರಾಜ್ಯದಲ್ಲಿ ಮತ್ತೆ ಶುರುವಾಯ್ತು ವರುಣನ ಅಬ್ಬರ; ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಪ್ರಮಾಣ ಸದ್ಯಕ್ಕೆ ದುರ್ಬಲವಾಗಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಬಲವಾದ ಗಾಳಿ ಬೀಸಲಿದ್ದು, ಜಾಗರೂಕರಾಗಿರಲು ಸೂಚಿಸಲಾಗಿದೆ. ಇಂದಿನಿಂದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ವರ್ಷಧಾರೆಯಾಗಲಿದ್ದು, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯೊಂದಿಗೆ ವೇಗದ ಗಾಳಿ ಬೀಸಲಿದೆ.

Karnataka Weather Report Karnataka Rains Return Heavy Rain Alert for These Districts

ಕರಾವಳಿ ಕರ್ನಾಟಕ ಹಾಗೂ ಕಾಸರಗೋಡು ಸುತ್ತಮುತ್ತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಸದ್ಯದ ಮುನ್ಸೂಚನೆಯ ಪ್ರಕಾರ, ಮುಂದಿನ ಸುಮಾರು 10 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಯಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಸಕಲೇಶಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಸಾಧಾರಣ ಮಳೆ ಬೀಳಬಹುದು.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಧಾರವಾಡ ಮತ್ತು ಗದಗ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗಬಹುದು. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಸದ್ಯದ ಮುನ್ಸೂಚನೆಯಂತೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 2ರಿಂದ 3 ದಿನಗಳ ಕಾಲ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ನಿರಂತರ ಗಾಳಿಯೊಂದಿಗೆ ಮಳೆಯಾಗಬಹುದು. ಗಾಳಿಯ ವೇಗವೂ ಕೆಲವೆಡೆ ಹೆಚ್ಚಾಗುವ ಸಾಧ್ಯತೆಯಿದೆ. ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?

ಈ ಬಾರಿ ರಾಜ್ಯ ರಾಜಧಾನಿ ಬೆಂಗಳೂರು ಮಳೆ ಕೊರತೆಯನ್ನು ಎದುರಿಸುತ್ತಿದೆ. ಮುಂದಿನ 48 ಗಂಟೆಗಳಲ್ಲಿ ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಕಂಡುಬರಲಿದೆ. ನಗರದ ಕೆಲ ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ.

ದೇಶಾದ್ಯಂತ ಮತ್ತೆ ಚುರುಕಾಗಲಿದೆ ಮುಂಗಾರು?

ಇದೇ ವೇಳೆ ದೇಶದ ಹಲವು ಭಾಗಗಳಲ್ಲಿ ಆಗಸ್ಟ್ ತಿಂಗಳಲ್ಲಿ ಮುಂಗಾರು ಚಟುವಟಿಕೆ ತುಸು ದುರ್ಬಲವಾಗಿದೆ. ಉತ್ತರ ಮತ್ತು ಪಶ್ಚಿಮ ಭಾರತದಲ್ಲಿ ಮಳೆಯ ಚಟುವಟಿಕೆಯಲ್ಲಿ ತಾತ್ಕಾಲಿಕ ವಿರಾಮ ಕಂಡುಬಂದಿದ್ದರೂ, ಇದೀಗ ನೈಋತ್ಯ ಮುಂಗಾರು ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದೆ.

ಆಗಸ್ಟ್ 20ರಿಂದ 24ರ ನಡುವೆ ದೇಶದ ಹಲವು ಭಾಗಗಳಲ್ಲಿ ಮುಂಗಾರು ಸಕ್ರಿಯವಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. IMD ಉಪಗ್ರಹ ಚಿತ್ರಗಳಲ್ಲಿ ಪೂರ್ವ ಮತ್ತು ಮಧ್ಯ ಭಾರತದ ಹಲವು ಭಾಗಗಳಲ್ಲಿ ವ್ಯಾಪಕ ಮೋಡ ಕವಿದ ವಾತಾವರಣ ಹಾಗೂ ಸಂವಹನ ಚಟುವಟಿಕೆ ಕಂಡುಬರುತ್ತಿದ್ದು, ಮುಂದಿನ ಹಂತದ ಮಳೆಯ ಸೂಚನೆ ನೀಡುತ್ತಿದೆ.

ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಕಡಿಮೆ ಒತ್ತಡದ ಪ್ರದೇಶವು ಒಳನಾಡಿನತ್ತ ಚಲಿಸುತ್ತಿರುವುದರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಮುಂಬರುವ ದಿನಗಳಲ್ಲಿ ಈ ತಿಂಗಳ ಪ್ರಮುಖ ಮುಂಗಾರು ಚಟುವಟಿಕೆ ಕಂಡುಬರುವ ಸಾಧ್ಯತೆಯಿದೆ. ಈ ಪ್ರದೇಶಗಳಲ್ಲಿ ಹಲವೆಡೆ ಮಧ್ಯಮದಿಂದ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+