ರಾಜ್ಯಾದ್ಯಂತ ಮುಂದುವರೆದ ವರುಣನ ಆರ್ಭಟ: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ಮೇ 29 ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಬಂಗಾಳಕೊಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗಿದ್ದು, ರಾಜ್ಯಕ್ಕೆ ಮಳೆಯಾಗಲು ಇದು ಪೂರಕ ವಾತಾವರಣ ಸೃಷ್ಟಿಸಿದೆ.

ಈ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ.

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೂಡ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿರುಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ವರೆಗೆ ಬೀಸುವ ನಿರೀಕ್ಷೆಯಿರುವುದರಿಂದ, ಸಾರ್ವಜನಿಕರು ಎಚ್ಚರದಿಂದಿರಲು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಮಳೆಯ ನಿರಂತರ ಪ್ರಭಾವದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ. ಸಾಮಾನ್ಯವಾಗಿ 34 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರುತ್ತಿದ್ದ ಗರಿಷ್ಠ ತಾಪಮಾನವು ಈಗ 32 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಅದೇ ರೀತಿ ಕನಿಷ್ಠ ತಾಪಮಾನ 22 ರಿಂದ 23 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ ಎಂದು ವರದಿಗಳು ತಿಳಿಸಿವೆ. ಇದರಿಂದಾಗಿ ಸುಡು ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ತಂಪಾದ ವಾತಾವರಣ ಭಾರಿ ನೆಮ್ಮದಿ ತಂದಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಗುಡುಗು ಮತ್ತು ಸಿಡಿಲಿನ ಅಬ್ಬರವಿರಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಲವಾದ ಗಾಳಿಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ರೈತಾಪಿ ವರ್ಗಕ್ಕೂ ಈ ಮಳೆ ಬಹುದೊಡ್ಡ ಸಂತಸ ತಂದಿದ್ದು, ಮುಂಗಾರು ಮಳೆಯ ಆಗಮನಕ್ಕೆ ಮುನ್ನವೇ ಭೂಮಿ ಹದಗೊಳ್ಳುತ್ತಿದೆ. ಬಿತ್ತನೆ ಕಾರ್ಯಗಳಿಗೆ ಸಿದ್ಧತೆ ಮಾಡಿಕೊಳ್ಳಲು ರೈತರಿಗೆ ಇದು ಸಕಾಲವಾಗಿದೆ. ಆದರೆ, ಭಾರಿ ಬಿರುಗಾಳಿಯಿಂದಾಗಿ ಅಲ್ಲಲ್ಲಿ ಮರಗಳು ಉರುಳಿ ಬೀಳುವ ಮತ್ತು ವಿದ್ಯುತ್ ಕಂಬಗಳಿಗೆ ಹಾನಿಯಾಗುವ ಸಾಧ್ಯತೆಗಳಿರುವುದರಿಂದ ಬೆಳೆ ಹಾನಿಯ ಆತಂಕವೂ ಕೆಲವು ಭಾಗಗಳಲ್ಲಿ ಮನೆಮಾಡಿದೆ.

Karnataka Weather

ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ, ಅಂದರೆ ವಾರಾಂತ್ಯದವರೆಗೂ ಇದೇ ರೀತಿಯ ಮಳೆ ಮತ್ತು ಚಳಿಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+