ಜ.28ರ ಹವಾಮಾನ; ದಕ್ಷಿಣ ಒಳನಾಡಿನಲ್ಲಿ ಹಗುರು ಮಳೆ, ಉತ್ತರ ಒಳನಾಡಿನಲ್ಲಿ ವಿಪರೀತ ಚಳಿ

ಬೆಂಗಳೂರು, ಜನವರಿ 28: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಲೇ ಇದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ 26 ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣ ಹವೆ ಇರಲಿದೆ. ಇಂದು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಬೆಳಗ್ಗೆ ಚಳಿ ಹೆಚ್ಚಾಗಿರುವ ಹಿನ್ನೆಲೆ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿನ ಚಳಿಗೆ ಜನರು ಹೈರಾಣಾಗಿದ್ದಾರೆ. ಇನ್ನು ಬದಲಾಗುತ್ತಿರುವ ಹವಾಮಾನದಿಂದಾಗಿ ಶೀತ ಸಂಬಂಧಿತ ಜ್ವರಗಳಿಂದ ಜನರು ಬಳಲುತ್ತಿದ್ದಾರೆ.

ಉತ್ತರ ಕರ್ನಾಟಕದ ಬೀದರ್, ವಿಜಯಪುರ, ಕೊಪ್ಪಳ ಜಿಲ್ಲೆಗಳಲ್ಲಿ ದಟ್ಟವಾದ ಇಬ್ಬನಿ ಬೀಳುತ್ತಿದೆ. ಬೆಳಗ್ಗೆ ಮೈನಡುಗುವ ಚಳಿಗೆ ಜನರು ಹೈರಾಣಾಗಿದ್ದರೆ, ಸಂಜೆ ಆಗುತ್ತಿದ್ದಂತೆ ಬೀಸುವ ಶೀತ ಗಾಳಿಗೆ ಜನರು ಬೆಚ್ಚಗೆ ಮನೆಯಲ್ಲಿ ಕುಳಿತುಕೊಂಡಿರುತ್ತಾರೆ. ಉತ್ತರ ಕರ್ನಾಟಕದಲ್ಲಿ ಬೆಳಗ್ಗೆ ದಟ್ಟವಾದ ಮಂಜು ಮತ್ತು ಚಳಿ ಇದ್ದರೆ ಮಧ್ಯಾಹ್ನ ಆಗುತ್ತಿದ್ದಂತೆ ಸೂರ್ಯನ ಬಿಸಿಲು ಬೇಸಿಗೆ ಕಾಲದ ಅನುಭವವನ್ನು ನೀಡುತ್ತಿದೆ.

Karnataka Weather Report on 28 January: Light rain in the Karnataka Southern Inland, Extreme Cold in the Northern Inland

ಮುಂದಿನ 24 ಗಂಟೆಗಳಲ್ಲಿ ಭಾರತದ ಈಶಾನ್ಯ ರಾಜ್ಯಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶದಲ್ಲಿ ಹಿಮಪಾತವಾಗಲಿದೆ ಎಂದು ಭಾರತೀಯ ಇಲಾಖೆ ಮಾಹಿತಿ ನೀಡಿದೆ. ಇದರೊಂದಿಗೆ ಅಂಡಮಾನ್ ನಿಕೋಬಾರ್​ನಲ್ಲಿಯೂ ಸಹ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ಬಯಲುಸೀಮೆಯ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗುರುವಾರ ಕೋಲಾರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಅಕಾಲಿಕವಾಗಿ ತುಂತುರು ಮಳೆಯಾಗಿದೆ. ಕೋಲಾರ, ಮಾಲೂರು, ಬಂಗಾರಪೇಟೆ ತಾಲೂಕಿನಲ್ಲಿ ಹಗುರ ಮಳೆಯಾದರೆ, ಮುಳಬಾಗಿಲು, ಶ್ರೀನಿವಾಸಪುರ, ಕೆಜಿಎಫ್ ತಾಲೂಕಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಹಾಗೇ, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಮೈಸೂರಿನಲ್ಲಿ ಹಗುರ ಮಳೆಯಾಗಿತ್ತು.

ಇಂದು ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಲ್ಲಿ ಶೀತಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

Karnataka Weather Report on 28 January: Light rain in the Karnataka Southern Inland, Extreme Cold in the Northern Inland

ಇಂದು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಇಂದು (ಶುಕ್ರವಾರ) ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಮುಂದಿನ 4 ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಮಳೆಯಾಗುತ್ತದೆ. ಈಶಾನ್ಯ ಭಾರತದಲ್ಲಿ ಇಂದು ಚದುರಿದ ಮಧ್ಯಮ ಮಳೆಯಾಗಲಿದೆ. ನಂತರ ಒಣ ಹವಾಮಾನ ಇರುತ್ತದೆ.

ಇನ್ನು 24 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ 2 ದಿನಗಳ ಕಾಲ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮೆ, ಕೇರಳ, ಮಾಹೆಯಲ್ಲಿ ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್​ನಲ್ಲಿ ಮಳೆಯಾಗಲಿದೆ. ಜನವರಿ 29ರಿಂದ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ ರಾಜ್ಯದಲ್ಲಿ ಇಂದು ಮಳೆಯಾಗಲಿದ್ದು, ಜನವರಿ 30ರಿಂದ ಮಳೆ ಕಡಿಮೆಯಾಗುತ್ತದೆ.

ಇದೇ ವೇಳೆ ವಿದರ್ಭ, ಮಧ್ಯ ಮಹಾರಾಷ್ಟ್ರ, ಮರಾಠವಾಡ ಮತ್ತು ಗುಜರಾತ್ ರಾಜ್ಯದಲ್ಲಿ ಶೀತ ಅಲೆಯ ನಿರ್ಮಾಣವಾಗಲಿದೆ. ಮುಂದಿನ 2-3 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ಛತ್ತೀಸ್‌ಗಢದಾದ್ಯಂತ ಮಳೆಯಾಗಲಿದೆ.

Karnataka Weather Report on 28 January: Light rain in the Karnataka Southern Inland, Extreme Cold in the Northern Inland

ಗುಜರಾತ್, ರಾಜಸ್ಥಾನದಲ್ಲಿ ಶೀತಗಾಳಿ
ಗುಜರಾತ್​ ಹಾಗೂ ರಾಜಸ್ಥಾನದಲ್ಲಿ ಮುಂದಿನ 24 ಗಂಟೆಗಳಿಂದ 48 ಗಂಟೆಗಳವರೆಗೆ ಶೀತಗಾಳಿ ಬೀಸಲಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಹಗುರ ಮಳೆಯ ಜೊತೆಗೆ ಹಿಮಪಾತ ಆಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಆಂಧ್ರಪ್ರದೇಶದ ಕರಾವಳಿ, ರಾಯಲ್​ಸೀಮಾ, ತಮಿಳುನಾಡು, ಕೇರಳ ಹಾಗೂ ಅಂಡಮಾನ್​ ಮತ್ತು ನಿಕೋಬಾರ್​​ನಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಮುಂದಿನ 5 ದಿನ ಶೀತಗಾಳಿ
ಮಧ್ಯಪ್ರದೇಶದಲ್ಲಿ ಮುಂದಿನ 5 ದಿನಗಳ ಕಾಲ ತೀವ್ರ ಶೀತಗಾಳಿ ಬೀಸಲಿದೆ. ಪಂಜಾಬ್, ಹರಿಯಾಣ, ಚಂಡೀಗರ್, ರಾಜಸ್ಥಾನದಲ್ಲಿ ಮುಂದಿನ 3-4 ದಿನ ಶೀತಗಾಳಿ ಬೀಸಿದರೆ, ಉತ್ತರ ಪ್ರದೇಶದಲ್ಲಿ ಜನವರಿ 30ರವರೆಗೆ ಶೀತಗಾಳಿ ಮುಂದುವರೆಯಲಿದೆ. ಮಹಾರಾಷ್ಟ್ರ, ಮಾರತ್​ವಾಡ, ಗುಜರಾತ್​​ನಲ್ಲಿ ಮುಂದಿನ 2 ದಿನ ಶೀತಗಾಳಿ ಬೀಸಲಿದೆ. ಒಡಿಶಾದಲ್ಲಿ ಜನವರಿ 29, 30ರಂದು ಶೀತಗಾಳಿ ಹೆಚ್ಚಾಗಲಿದೆ.

Recommended Video

      ಕರ್ನಾಟಕದ ಐವರು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಗೌರವ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+