Karnataka Weather: ಫೆಬ್ರವರಿ 28ರಂದು ರಾಜ್ಯದ ಹವಾಮಾನ ವರದಿ: ಜಿಲ್ಲಾವಾರು ಮಾಹಿತಿ ಇಲ್ಲಿದೆ

Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಚಳಿ ಕಡಿಮೆಯಾಗಿದೆ. ಬದಲಾಗಿದೆ ಬೇಸಿಗೆಗೂ ಮುನ್ನವೇ ತಾಪಮಾನ ಪ್ರಮಾಣ ಏರಿಕೆಯಾಗುತ್ತಲಿದೆ. ಹಾಗಾದರೆ ಇಂದು (ಫೆಬ್ರವರಿ 28) ಯಾವ್ಯಾವ ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಚಳಿಯ ವಾತಾವರಣ ಇದ್ದು, ಬೆಳಗ್ಗೆ 8 ಗಂಟೆ ಮೇಲೆ ರಣ ಬಿಸಿಲು ಮುಂದುವರೆದಿದೆ. ಸಂಜೆ 4 ಗಂಟೆವರೆಗೂ ನಗರದಲ್ಲಿ ಇದೇ ರೀತಿಯ ಹವಾಮಾನ ಇರಲಿದೆ ಎನ್ನುವ ಮುನ್ಸೂಚನೆ ಇದೆ.

Karnataka Weather report on February 28 know details

ಅದರಲ್ಲೂ ಕರಾವಳಿ ಕರ್ನಾಟಕದಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕರಾವಳಿ ಭಾಗದಲ್ಲಿ ಇಂದು ಸಹ ತಾಪಮಾನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಬೆಳಗ್ಗೆ 11ರಿಂದ ಮದ್ಯಾಹ್ನ 3 ಗಂಟೆವರೆಗೂ ಜನರು ಬಿಸಿಲಿಗೆ ಹೋಗದಂತೆ ಭಾರತೀಯ ಹವಾಮಾನ ಇಲಾಖೆ ತಜ್ಞರು ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ಅಲ್ಪ ಪ್ರಮಾಣದಲ್ಲಿ ವಾಯುಭಾರ ಕುಸಿತವಾಗಿದ್ದು, ಇದು ಅರಬ್ಬಿ ಸಮುದ್ರದ ಕಡೆ ಮುಖ ಮಾಡಿದೆ. ಈ ಹಿನ್ನೆಲೆ ದಕ್ಷಿಣ ಭಾರತದ ಭಾಗದಲ್ಲಿ ತಾಪಮಾನ ಹೆಚ್ಚಳವಾಗಲು ಪ್ರಮುಖ ಕಾರಣ ಆಗಿದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಇಂದು ಸಹ ಶಾಖದ ಅಲೆಗಳು ಇರಲಿದೆ ಎಂದು ಹವಾಮಾನ ಇಲಾಕೆ ಎಚ್ಚರಿಕೆ ಸಂದೇಶ ನೀಡಿದೆ. ಈ ಜಿಲ್ಲೆಗಳಲ್ಲಿ ಕೆಲವೆಡೆ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಮುಟ್ಟುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ಪ್ರತಿ ಬಾರಿಯೂ ಉತ್ತರ ಕರ್ನಾಟಕ ಭಾಗದ ಕಲಬುರಗಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ರಾಯಚೂರು, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿತ್ತು. ಆದರೆ, ಈ ಬಾರಿ ಕರಾವಳಿಯಲ್ಲಿ ಫೆಬ್ರವರಿ ಅಂತ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಕಳೆದ ಒಂದು ವಾರದಲ್ಲಿ ಈ ಭಾಗದದಲ್ಲಿ ಗರಿಷ್ಠ ಉಷ್ಣಾಂಶ 5 ಡಿಗ್ರಿ ಸೆಲ್ಸಿಯಸ್‌ ಏರಿಕೆ ಕಂಡುಬಂದಿದೆ. ಆದ್ದರಿಂದ ಈ ಭಾಗದ ಜನರಿಗೆ ಮಾರ್ಚ್ 2ರ ವರೆಗೆ ಎಚ್ಚರದಿಂದ ಇರುವಂತೆ ಹವಾಮಾನ ಇಲಾಖೆಯ ಸೂಚನೆ ನೀಡಿದೆ.

ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಬ ಹೆಚ್ಚಳ ಆಗುತ್ತಿದೆ. ಮಾರ್ಚ್ ಎರಡನೇ ವಾರದಲ್ಲಿ ತಾಪಮಾನದಲ್ಲಿ ಮತ್ತಷ್ಟು ಏರಿಕೆಆಯಗುವ ಸಾಧ್ಯತೆಯಿದೆ. ವಿಶೇಷವಾಗಿ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಸಹ ಬಿಸಿಲು ಹೆಚ್ಚಿರಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಸಹ ತಾಪಮಾನದಲ್ಲಿ ಏರಿಕೆ ಆಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿಗಳು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಬೆಂಗಳೂರು ನಗರ 20.6 ಡಿಗ್ರಿ ಸೆಲ್ಸಿಯಸ್‌, ಮಂಗಳೂರು 25 ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗ 23.2 ಡಿಗ್ರಿ ಸೆಲ್ಸಿಯಸ್, ಕಲಬುರಗಿ 25 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 26 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 33 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಗರಿಷ್ಠ ತಾಪಮಾನ ಹಾಗೂ ಕನಿಷ್ಠ ತಾಪಮಾನ ಎರಡೂ ಇಳಿಕೆಯಾಗಿದೆ. ಇನ್ನು ಇಂದು ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಗರಿಷ್ಟ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+