Karnataka Weather Report: ಕರಾವಳಿಗೆ ಇಂದು ಯೆಲ್ಲೋ ಅಲರ್ಟ್, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?

ಮುಂಗಾರು ಮುಕ್ತಾಯದ ಹಂತದಲ್ಲಿದ್ದರು ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ.

ಸೆಪ್ಟೆಂಬರ್ ತಿಂಗಳಾಂತ್ಯ ಸಮೀಪಿಸುತ್ತಿದ್ದರೂ, ವರುಣನ ಆರ್ಭಟ ಇನ್ನೂ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಹವಾಮಾನ ಇಲಾಖೆಯ ಇತ್ತೀಚಿನ ವರದಿ ಪ್ರಕಾರ ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Weather Report Sept 22 IMD Issues Yellow Alert For Coastal Districts Bengaluru Cloudy

ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಕರಾವಳಿ ಕರ್ನಾಟಕದ ಪ್ರಮುಖ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಇಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಮತ್ತು ಗಾಳಿಯ ವೇಗ ಹೆಚ್ಚಿರುವ ಕಾರಣ, ಮೀನುಗಾರರು ಮುಂದಿನ 24 ಗಂಟೆಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ನೀಡಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಅಪಾಯವಿದ್ದು, ಸಾರ್ವಜನಿಕರು ಎಚ್ಚರದಿಂದಿರಲು ಸೂಚಿಸಲಾಗಿದೆ.

ರಾಜಧಾನಿ ಬೆಂಗಳೂರು ಹವಾಮಾನ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳಗಿನಿಂದಲೇ ಜಿಟಿಜಿಟಿ ಮಳೆ ಮತ್ತು ತಂಪಾದ ಮೋಡಕವಿದ ವಾತಾವರಣ ಮುಂದುವರಿಯಲಿದೆ. ನಗರದಲ್ಲಿ ಇಂದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ.

ನಿನ್ನೆಯಂತೆ ಇಂದು ಕೂಡ ಮಧ್ಯಾಹ್ನದ ಬಳಿಕ ನಗರದ ವಿವಿಧೆಡೆ, ವಿಶೇಷವಾಗಿ ದಕ್ಷಿಣ ಮತ್ತು ಪೂರ್ವ ಬೆಂಗಳೂರಿನ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕಚೇರಿಗೆ ತೆರಳುವ ಉದ್ಯೋಗಿಗಳು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ಛತ್ರಿ ಅಥವಾ ರೇನ್‌ಕೋಟ್ ಜೊತೆಯಲ್ಲಿಟ್ಟುಕೊಳ್ಳುವುದು ಸೂಕ್ತ.

ಮಳೆಯ ಕಾರಣದಿಂದಾಗಿ ಸಂಜೆಯ ಟ್ರಾಫಿಕ್ ದಟ್ಟಣೆ ಹೆಚ್ಚಾಗುವ ಸಾಧ್ಯತೆಯೂ ಇದೆ.

ಮಲೆನಾಡು ಹಾಗೂ ಉತ್ತರ ಒಳನಾಡಿನ ವಾತಾವರಣ

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ. ನಿರಂತರ ಮಳೆಯಿಂದಾಗಿ ಕಾಫಿ ಮತ್ತು ಅಡಿಕೆ ಬೆಳೆಗಾರರಿಗೆ ಕೃಷಿ ಚಟುವಟಿಕೆಗಳಿಗೆ ಕೊಂಚ ಅಡಚಣೆಯಾಗುವ ಸಾಧ್ಯತೆ ಇದೆ.

ಮತ್ತೊಂದೆಡೆ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗದಲ್ಲಿ ಸಾಧಾರಣ ಮಳೆಯಾಗಲಿದ್ದು, ಕಲಬುರಗಿ, ರಾಯಚೂರು, ವಿಜಯಪುರದಲ್ಲಿ ಬಹುತೇಕ ಒಣ ಹವಾಮಾನ ಅಥವಾ ಅಲ್ಲಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ ಸಂಜೆ ವೇಳೆಗೆ ಮಳೆಯಾಗಬಹುದು.

ಮುಂದುವರಿದ ಮಳೆಯಿಂದಾಗಿ ಕೃಷಿ ಚಟುವಟಿಕೆಗಳ ಮೇಲೆ ಪ್ರಭಾವ ಬೀರುತ್ತಿದೆ. ಕಟಾವಿಗೆ ಬಂದಿರುವ ಬೆಳೆಗಳನ್ನ ರಕ್ಷಿಸಿಕೊಳ್ಳಲು ರೈತರು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೃಷಿ ಇಲಾಖೆ ಸಲಹೆ ನೀಡಿದೆ.

ವಿಶೇಷವಾಗಿ ಮಲೆನಾಡು ಭಾಗದಲ್ಲಿ ಭೂಕುಸಿತದ ಭೀತಿ ಇರುವ ಕಾರಣ, ಪ್ರವಾಸಿಗರು ಮತ್ತು ಪ್ರಯಾಣಿಕರು ಘಾಟ್ ಪ್ರದೇಶಗಳಲ್ಲಿ ರಾತ್ರಿ ವೇಳೆಯ ಪ್ರಯಾಣವನ್ನು ಆದಷ್ಟು ತಪ್ಪಿಸುವುದು ಒಳಿತು. ವಾಹನ ಸವಾರರು ಮಂಜು ಮುಸುಕಿದ ವಾತಾವರಣದಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+