Karnataka Weather: ರಾಜ್ಯದಲ್ಲಿಂದು ವರುಣನ ಆರ್ಭಟ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಭಾರಿ ಮಳೆಯ ಮುನ್ಸೂಚನೆ

ಇಂದು ರಾಜ್ಯದಾದ್ಯಂತ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದಕ್ಷಿಣ ಮತ್ತು ಉತ್ತರ ಒಳನಾಡಿಗೆ ಹೈ ಅಲರ್ಟ್

ಹವಾಮಾನ ಇಲಾಖೆಯ ಮಾಹಿತಿಯಂತೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋಮೀಟರ್‌ವರೆಗೆ ಇರಲಿದ್ದು, ಬಿರುಗಾಳಿಯ ಅಬ್ಬರ ಕಂಡುಬರಲಿದೆ.

Karnataka Weather Report September 30 2026 Yellow Alert Issued Heavy Rainfall Expected in State

ಅದೇ ರೀತಿ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಮತ್ತು ಬಾಗಲಕೋಟೆ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿಯೂ ಭಾರಿ ಮಳೆ ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಹಲವೆಡೆ ನಿರಂತರ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.

ಇಲ್ಲಿನ ಜನತೆ ಮಳೆ, ಮಿಂಚು ಮತ್ತು ಬಿರುಗಾಳಿಯಿಂದ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಸಾಧಾರಣ ಮಳೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಭಾಗದಲ್ಲಿ ಒಳನಾಡಿನಷ್ಟು ತೀವ್ರವಾದ ಬಿರುಗಾಳಿ ಅಥವಾ ರೆಡ್ ಅಲರ್ಟ್‌ನ ಮುನ್ಸೂಚನೆ ಇಲ್ಲದಿದ್ದರೂ, ದಿನವಿಡೀ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಆಗಿಂದಾಗ್ಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ಬೆಂಗಳೂರು ಹವಾಮಾನ ವರದಿ

ಸಿಲಿಕಾನ್ ಸಿಟಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಇಂದು ಮಳೆಯ ವಾತಾವರಣ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ ಇಂದು ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ.

ನಗರದಲ್ಲಿ ಗರಿಷ್ಠ ಉಷ್ಣಾಂಶ 28°C ಮತ್ತು ಕನಿಷ್ಠ ಉಷ್ಣಾಂಶ 20°Cನ ಆಸುಪಾಸಿನಲ್ಲಿ ಇರಲಿದೆ.ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವರೆಗೆ ಬೀಸುವ ಸಾಧ್ಯತೆಯಿದೆ. ನಗರದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಲ್ಲುವ ಅಪಾಯವಿದ್ದು, ಟ್ರಾಫಿಕ್ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಹಾಗೂ ಕಚೇರಿಗಳಿಗೆ ತೆರಳುವ ಮುನ್ನ ಹವಾಮಾನದ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

ರಾಜ್ಯದಾದ್ಯಂತ ಭಾರಿ ಮಳೆ ಹಾಗೂ ಬಿರುಗಾಳಿಯ ಅಬ್ಬರ ಹೆಚ್ಚಿರುವ ಕಾರಣ, ಗುಡುಗು ಮತ್ತು ಮಿಂಚಿನ ಸಮಯದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯದಂತೆ ಸಾರ್ವಜನಿಕರಿಗೆ ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಪ್ರಸ್ತುತ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಯೋಜಿಸಲು ಸಲಹೆ ನೀಡಲಾಗಿದೆ. ಕೊಯ್ಲಿಗೆ ಬಂದಿರುವ ಬೆಳೆಗಳನ್ನು ರಕ್ಷಿಸಿಕೊಳ್ಳಲು ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಉತ್ತಮ.ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯಲಿದ್ದು, ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+