Karnataka Weather Report: ನೈಋತ್ಯ ಮುಂಗಾರು ನಿರ್ಗಮನ, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಹವಾಮಾನದಲ್ಲಿ ಸ್ವಲ್ಪ ಬದಲಾವಣೆ ಶುರುವಾಗಿದ್ದು, ನೈಋತ್ಯ ಮುಂಗಾರು ಸಂಪೂರ್ಣವಾಗಿ ನಿರ್ಗಮನದ ಹಂತದಲ್ಲಿದೆ. ಇನ್ನೆರಡು-ಮೂರು ದಿನಗಳಲ್ಲಿ ಈಶಾನ್ಯ ಮುಂಗಾರು ಪ್ರವೇಶ ಮಾಡುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದಿನ (ಅಕ್ಟೋಬರ್ 14, 2026) ಹವಾಮಾನ ವರದಿಯ ಪ್ರಕಾರ, ರಾಜ್ಯದ ಕೆಲವು ಭಾಗಗಳಲ್ಲಿ ಒಣಹವೆ ಮುಂದುವರಿಯಲಿದ್ದರೆ, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಹಾಗೂ ಗುಡುಗು-ಸಿಡಿಲಿನ ಆರ್ಭಟ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather Report Today October 14 Bengaluru and South Interior Thunderstorms and Rain Forecast

ದಕ್ಷಿಣ ಒಳನಾಡಿನಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ, ಇಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಹಾಗೂ ಸಿಡಿಲು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ಚಾಮರಾಜನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಿರುಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ, ಹಾಗೂ ಕೆಲವು ಬಾರಿ 60 ಕಿ.ಮೀ ವರೆಗೂ ತಲುಪುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದಿನ ಹವಾಮಾನ ಹೇಗಿದೆ?

ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಯಾವುದೇ ರೀತಿಯ ಹವಾಮಾನ ಎಚ್ಚರಿಕೆ ನೀಡಲಾಗಿಲ್ಲ. ಈ ಭಾಗಗಳಲ್ಲಿ ಬಹುತೇಕ ಒಣ ಹವಾಮಾನ ಮುಂದುವರಿಯಲಿದೆ. ಆದರೆ, ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ, ನಾಳೆಯಿಂದ (ಅಕ್ಟೋಬರ್ 15) ಈ ಭಾಗಗಳಲ್ಲಿಯೂ ಹವಾಮಾನ ದಿಢೀರ್ ಬದಲಾಗಲಿದೆ.

ಅಕ್ಟೋಬರ್ 15 ರಿಂದ 18ರವರೆಗೆ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರು ಮಳೆ ಮುನ್ಸೂಚನೆ ಹಾಗೂ ತಾಪಮಾನ

ರಾಜಧಾನಿ ಬೆಂಗಳೂರಿನಲ್ಲಿ ಇಂದು ಬಹುತೇಕ ಒಣ ಹವಾಮಾನ ಕಂಡುಬರಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ಹಗಲಿನ ಗರಿಷ್ಠ ತಾಪಮಾನ 31°C ನಿಂದ 33°C ವರೆಗೆ ಹಾಗೂ ಕನಿಷ್ಠ ತಾಪಮಾನ 21°C ನಿಂದ 22°C ವರೆಗೆ ಇರಲಿದೆ. ದಿನದ ಬಹುಪಾಲು ಸಮಯ ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದರೂ, ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಭಾರಿ ಮಳೆಯ ಮುನ್ಸೂಚನೆ

ಈಶಾನ್ಯ ಮುಂಗಾರು ಆಗಮನದ ಹಿನ್ನೆಲೆಯಲ್ಲಿ ಮುಂದಿನ 5-6 ದಿನಗಳ ಕಾಲ ದಕ್ಷಿಣ ಭಾರತದಾದ್ಯಂತ ತೇವಾಂಶ ಭರಿತ ವಾತಾವರಣ ಇರಲಿದೆ. ಅಕ್ಟೋಬರ್ 15 ರಿಂದ 18 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮತ್ತು ಅಕ್ಟೋಬರ್ 16 ರಿಂದ 18 ರವರೆಗೆ ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಬಗ್ಗೆ ಮುನ್ಸೂಚನೆಗಳಿವೆ.

ಹೀಗಾಗಿ ರೈತರು, ಮೀನುಗಾರರು ಮತ್ತು ಸಾರ್ವಜನಿಕರು ಹವಾಮಾನ ಇಲಾಖೆಯ ಈ ಮುನ್ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳುವುದು ಸೂಕ್ತ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+