Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಸುಡುಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಏಪ್ರಿಲ್ 27ರ ಅಂದರೆ ಇಂದಿನ ಹವಾಮಾನ ವರದಿಯ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಸತತವಾಗಿ ಏರಿಕೆಯಾಗುತ್ತಿದ್ದ ತಾಪಮಾನ ಮತ್ತು ಬಿಸಿಲ ಬೇಗೆಗೆ ತತ್ತರಿಸಿದ್ದ ಜನರಿಗೆ ಈ ಮಳೆಯ ಮುನ್ಸೂಚನೆ ತಂಪೆರೆಯುವ ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ವರೆಗೂ ದಾಖಲಾಗಿತ್ತು, ಕನಿಷ್ಠ ತಾಪಮಾನವು 23.1 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿತ್ತು. ಆದರೆ, ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಇಂದು ಬೆಳಿಗ್ಗೆಯಿಂದಲೇ ಬಿಸಿಲಿನ ವಾತಾವರಣವಿದ್ದರೂ, ಮಧ್ಯಾಹ್ನದ ವೇಳೆಗೆ ಆಕಾಶವು ಭಾಗಶಃ ಮೋಡ ಕವಿದಿರಲಿದ್ದು, ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Weather Report

ಕರಾವಳಿ ಮತ್ತು ಮಲೆನಾಡು ಭಾಗದ ಹವಾಮಾನ ವರದಿ

ಕರ್ನಾಟಕದ ಇತರ ಭಾಗಗಳಲ್ಲಿ ಹವಾಮಾನಗಳು ತುಂಬ ವಿಭಿನ್ನವಾಗಿರಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ವಾತಾವರಣದಲ್ಲಿ ಬದಲಾವಣೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲೂ ಗುಡುಗು ಮತ್ತು ಬಿರುಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದ ಹವಾಮಾನದ ಸ್ಥಿತಿಗತಿ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳದಲ್ಲಿ ಕೆಲವು ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಆದರೆ, ಈ ಭಾಗದ ಹೆಚ್ಚಿನ ಪ್ರದೇಶಗಳಲ್ಲಿ ಒಣ ಹವಾಮಾನವೇ ಮುಂದುವರಿಯಲಿದ್ದು, ಬಿಸಿಲಿನ ತಾಪಮಾನ ಗರಿಷ್ಠ ಮಟ್ಟದಲ್ಲಿಯೇ ಇರಲಿದೆ. ವಿಶೇಷವಾಗಿ ಹಗಲಿನ ವೇಳೆ ಬಿಸಿಲು ಮತ್ತು ಸೆಕೆ ಮುಂದುವರೆಯಲಿರುವ ಕಾರಣ, ಮಧ್ಯಾಹ್ನದ ವೇಳೆ ಜನರು ಎಚ್ಚರಿಕೆ ವಹಿಸುವುದು, ಸಾಕಷ್ಟು ನೀರು ಕುಡಿಯುವುದು ಮತ್ತು ನೇರ ಬಿಸಿಲಿಗೆ ಮೈಯೊಡ್ಡುವುದನ್ನು ತಪ್ಪಿಸುವುದು ಅತ್ಯಂತ ಅವಶ್ಯಕವಾಗಿದೆ.

ಒಟ್ಟಾರೆಯಾಗಿ, ರಾಜ್ಯದಲ್ಲಿ ಏಪ್ರಿಲ್ ತಿಂಗಳ ಅಂತ್ಯದ ವೇಳೆಗೆ ಪೂರ್ವ ಮುಂಗಾರು ಚಟುವಟಿಕೆಗಳು ನಿಧಾನವಾಗಿ ಚುರುಕುಗೊಳ್ಳುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಈ ಮಳೆಯಿಂದಾಗಿ ರೈತಾಪಿ ವರ್ಗಕ್ಕೂ ಹಾಗೂ ಸೆಕೆಯಿಂದ ಹೈರಾಣಾಗಿದ್ದ ಸಾಮಾನ್ಯ ಜನರಿಗೂ ದೊಡ್ಡ ರಿಲೀಫ್ ಸಿಗಲಿದೆ. ಮುಂದಿನ ಒಂದೆರಡು ದಿನಗಳ ಕಾಲ ರಾಜ್ಯದ ಹಲವೆಡೆ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+