• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ಹವಾಮಾನ ವರದಿ,ಎಲ್ಲಿ ಹೆಚ್ಚು ಚಳಿ, ಎಲ್ಲೆಲ್ಲಿ ಸೆಕೆ?

|
Google Oneindia Kannada News

ಬೆಂಗಳೂರು,ಜನವರಿ 19: ಜನವರಿ ಮೊದಲ ವಾರದಿಂದ ಸತತವಾಗಿ ಎರಡು ವಾರಗಳ ಕಾಲ ಮಳೆ ಕಂಡಿದ್ದ ಕರ್ನಾಟಕಕ್ಕೆ ಇದೀಗ ಸೆಕೆಯ ಸರದಿ ಆರಂಭವಾಗಿದೆ.
ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇಷ್ಟು ದಿನಗಳ ಕಾಲ ಮಳೆ ಇದ್ದ ಪರಿಣಾಮ ರಾಜ್ಯದಲ್ಲಿ ಚಳಿ ಕಡಿಮೆಯಾಗಿತ್ತು. ಬೀದರ್‌ನಲ್ಲಿ 14 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 48ಗಂಟೆಗಳ ಕಾಲ ಒಣಹವೆ ಮುಂದುವರೆಯಲಿದೆ.

ಬೆಂಗಳೂರು ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಜನವರಿ ತಿಂಗಳ ಮಳೆಬೆಂಗಳೂರಿನಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಜನವರಿ ತಿಂಗಳ ಮಳೆ

ಕಾಶ್ಮೀರದಲ್ಲಿ ಎಲ್ಲಾ ನದಿಗಳು ಹೆಪ್ಪುಗಟ್ಟಿವೆ. ಜನರು ಚಳಿಯಲ್ಲಿ ಉಸಿರು ಬಿಗಿಹಿಡಿದುಕೊಂಡು ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಶ್ಮೀರದಲ್ಲಿ ಇಂದು ಮೈನಸ್ 7.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಜನವರಿ ತಿಂಗಳ ಮೊದಲ ವಾರದಿಂದಲೇ ಶೀತ ಅಲೆ ಬೀಸುತ್ತದೆ. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯ ಮುನ್ಸೂಚನೆ ಅಲ್ಲದೆ ಭಾರೀ ಹಿಮಪಾತದಿಂದ ವಿಮಾನಯಾನ ಮತ್ತು ಸಾರಿಗೆ ಸಂಪರ್ಕಕ್ಕೆ ತೊಂದರೆ ಉಂಟಾಗಿತ್ತು, ಜನವರಿ 13 ಮತ್ತು 14ರ ಮಧ್ಯರಾತ್ರಿ ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

   ಇದನ್ನ ನಾವು ಒಪ್ಪಲ್ಲ ಯಡಿಯೂರಪ್ಪ & ದಿನೇಶ್ ಗುಂಡು ರಾವ್ ಟ್ವೀಟ್ !! | Oneindia Kannada

   1983ರಲ್ಲಿ ಕನಿಷ್ಠ ತಾಪಮಾನ ಮೈನಸ್ 14.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದು ಈವರೆಗಿನ ಅತಿ ಕನಿಷ್ಠ ಉಷ್ಣಾಂಶವಾಗಿದೆ.ಕಾಶ್ಮೀರದಲ್ಲಿ ಜನವರಿ 21ರವರೆಗೆ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

   English summary
   Meteorological department predicted that Dry weather prevailed over state, Karnataka Weather Report, Which Is The Coldest Place Of The State.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X