Karnataka Heat Wave: ರಾಜ್ಯದಲ್ಲಿ ಫೆಬ್ರವರಿ ಅಂತ್ಯಕ್ಕೆ ಶಾಖದ ಅಲೆ ವಾತಾವರಣ ನಿರೀಕ್ಷೆ, 7 ದಿನದ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಹವಾಮಾನ ಬದಲಾಗುತ್ತಿದೆ. ತೀವ್ರ ಸ್ವರೂಪದ ಚಳಿಯಿಂದ ಅಧಿಕ ಬಿಸಿಲಿನ ವಾತಾವರಣ ನಿಧಾನವಾಗಿ ಸೃಷ್ಟಿಯಾಗುತ್ತಿದೆ. ಹೀಗಿದ್ದರೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಚಳಿ ವಾತಾವರಣ, ಬೆಳಗ್ಗೆ ದಟ್ಟ ಮಂಜು ಕಂಡು ಬರುತ್ತಿದೆ. ಉಳಿದಂತೆ ಕರಾವಳಿ ಹಾಗೂ ಉತ್ತರ ಒಳನಾಡು ಸೇರಿದಂತೆ ಬಹುತೇಕ ಕಡೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಒಂದು ವಾರದ ಕರ್ನಾಟಕದಲ್ಲಿ ತಾಪಮಾನ ಹೇಗಿರಲಿದೆ ಎಂಬ ವಿವರ ಇಲ್ಲಿದೆ.
ದಕ್ಷಿಣ ಒಳನಾಡಿನ ಕೆಲವೆಡೆ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ (-5.1 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲೂ ವಾಡಿಕೆ ಕನಿಷ್ಠ ತಾಪಮಾನಕ್ಕಿಂತ (-3.1 ಡಿಗ್ರಿ ಸೆಲ್ಸಿಯಸ್) ಕುಸಿದಿದೆ. ಇದಕ್ಕೆ ವಿರುದ್ಧವಾಗಿ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳು ಮತ್ತು ಕರಾವಳಿ ಕರ್ನಾಟಕ ಭಾಗದಲ್ಲಿ ಅತ್ಯಧಿಕ ಗರಿಷ್ಠ ತಾಪಮಾನ ಕಂಡು ಬಂದಿದೆ. ಮುಂದಿನ ಒಂದು ವಾರ ಇದೇ ರೀತಿಯ ವಾತಾವರಣ, ಕೊಂಚ ತಂಪು ಹಾಗೂ ಅಧಿಕ ಬಿಸಿಲು ನಿರ್ಮಾಣವಾಗಲಿದೆ. ರಾಜ್ಯದ ಜನರಿಗೆ ಕ್ರಮೇಣ ಶಾಖದ ಅಲೆಯ ಅನುಭವ ಆಗಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ.

ರಾಜ್ಯದಾದ್ಯಂತ ಫೆಬ್ರವರಿ ಅಂತ್ಯದ ಹೊತ್ತಿಗೆ ಒಣಹವೆ ಪ್ರಮಾಣದಲ್ಲಿ ಏರಿಕೆ ಕಂಡು ಬರಲಿದೆ. ಗರಿಷ್ಠ ತಾಪಮಾನ ಹೆಚ್ಚಾಗಲಿದೆ. ಬೆಂಗಳೂರು ನಗರ, ಕೋಲಾರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮಂಡ್ಯ, ಮೈಸೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಬೆಳಗ್ಗೆ ತಂಪು ಗಾಳಿ ಬೀಸಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ
ಹವಾಮಾನ ವೈಪರೀತ್ಯ ಪ್ರಭಾವ
ಆಗ್ನೆಯ ಅರೇಬಿಯನ್ ಸಮುದ್ರ ಭಾಗದಲ್ಲಿ, ಲಕ್ಷದ್ವೀಪ ಪ್ರದೇಶ ಮತ್ತು ಕೇರಳ ಕರಾವಳಿಯಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಸೃಷ್ಟಿಯಾಗಿದೆ. ಅದು ಶನಿವಾರ ಲಕ್ಷದ್ವೀಪ ಮತ್ತು ನೆರೆಹೊರೆಯಲ್ಲಿ ಕೇಂದ್ರೀಕೃತವಾಗಿದೆ. ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಲೋ ಮಿಟರ್‌ವರೆಗೆ ವಿಸ್ತರಣೆಗೊಂಡಿದ್ದು, ಮತ್ತಷ್ಟು ತೀವ್ರಗೊಳ್ಳುವ ನಿರೀಕ್ಷೆ ಇದೆ. ಅದೇ ರೀತಿ ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಯಲ್ಲೂ ಸಹ ಸಮುದ್ರ ಮಟ್ಟದಿಂದ 1.5 ಕಿಲೋ ಮೀಟರ್ ಎತ್ತರದಲ್ಲಿ ಪ್ರತ್ಯೇಕವಾಗಿ ಚಂಡಮಾರುತದ ಪರಿಚಲನೆಯ ವಾತಾವರಣ ನಿರ್ಮಾಣವಾಗಿದೆ.
ಈ ವಾತಾವರಣದಿಂದ ಮಳೆಯ ಎಚ್ಚರಿಕೆ ಇಲ್ಲ. ಬದಲಾಗಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ತಂಪು ವಾತಾವರಣಕ್ಕೆ, ದಿಢೀರ್ ಹವಾಮಾನ ಬದಲಾವಣೆಗೆ ಕಾರಣವಾಗುವ ಸಾಧ್ಯತೆ ಇದೆ. ಇದರ ಹೊರತಾಗಿ ಸದ್ಯಕ್ಕೆ ಈ ಹವಾಮಾನ ಬದಲಾವಣೆಯಿಂದ ಗಂಭೀರ ಮುನ್ಸೂಚನೆಗಳು ಇಲ್ಲ ಎಂದು ಐಎಂಡಿ ವರದಿ ತಿಳಿಸಿದೆ.
ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ
ಶುಕ್ರವಾರ (ಜ.06) ಕಡಿಮೆ ತಾಪಮಾನ ದಾಖಲಾಗಿದೆ. ತುಮಕೂರಲ್ಲಿ 8.3 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರು 8.6 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ನಗರ 9.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಗ್ರಾಮಾಂತರ 9.9 ಡಿಗ್ರಿ ಸೆಲ್ಸಿಯಸ್, ಕೋಲಾರ 9.8 ಡಿಗ್ರಿ ಸೆಲ್ಸಿಯಸ್, ಹಾಸನ 10.5 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗ 11.4 ಡಿಗ್ರಿ ಸೆಲ್ಸಿಯಸ್, ಬೆಂಗಳೂರು ಉತ್ತರ 11.8 ಡಿಗ್ರಿ ಸೆಲ್ಸಿಯಸ್, ಮಂಡ್ಯ 12.1 ಡಿಗ್ರಿ ಸೆಲ್ಸಿಯಸ್, ಬೀದರ್ 12.5 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 12.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಭಾಗಗಳಲ್ಲಿ ಬೆಳಗ್ಗೆ ಕೊಂಚ ತಂಪು ವಾತಾವರಣ, ಗಾಳಿ ಬೀಸಿದ್ದು, ಇಡೀ ದಿನ ಒಣಹವೆ ನಿರ್ಮಾಣವಾಗಿದೆ. ಅದೇ ಗರಿಷ್ಠ ಬಿಸಿಲು ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
---------
ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್' ವೆಬ್‌ಸೈಟ್‌ನಲ್ಲಿದೆ
ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್‌ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್‌ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್, 'ಮೈಖೇಲ್' ವೆಬ್‌ಸೈಟ್ ಬೆಸ್ಟ್.
ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲೂ ಮೈಖೇಲ್ ಫಾಲೊ ಮಾಡಿ.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications