Karnataka weather: ಈ ಜಿಲ್ಲೆಗಳಲ್ಲಿ ಸಾಮಾನ್ಯ ದಿನಗಳಿಗಿಂತ ಮುಂದಿನ ಮೂರು ದಿನ ತಾಪಮಾನ ಪ್ರಮಾಣ ಹೆಚ್ಚಳ
Karnataka weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಸಾಮಾನ್ಯ ದಿನಗಳಿಗಿಂತ ತುಸು ಹೆಚ್ಚಾಗಿಯೇ ಇರಲಿದೆ. ಮತ್ತೊಂದೆಡೆ ಇದರ ನಡುವೆಯೂ ಕೆಲವು ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ತಾಪಮಾನ ಹೆಚ್ಚಿರಲಿದೆ ಹಾಗೂ ಮಳೆ ಯಾವೆಲ್ಲ ಭಾಗಗಳಲ್ಲಿ ಆಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮುಂದಿನ 3 ದಿನಗಳಲ್ಲಿ ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನದ ಪ್ರಮಾಣ ಸಾಮಾನ್ಯ ದಿನಗಳಿಗಿಂತ 2 ರಿಂದ 3˚Cವರೆಗೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನ ನೀಡಿದೆ. ಇದರ ನಡುವೆಯೂ ಮೈಸೂರು, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆ ಸುರಿಯುವ ಮುನ್ಸೂಚನೆ ಇದೆ.

ಅಲ್ಲದೆ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ 3 ದಿನಗಳ ಕಾಲ ತಾಪಮಾನದಲ್ಲಿ ಏರಿಕೆಯಾಗಲಿದ್ದು, ಬಿಸಿಗಾಳಿ ಇರಲಿದೆ ಎಂದು ಮುನ್ಸೂಚನೆ ನೀಡಿದೆ.
ಹೆಚ್ಚಿನ ಸ್ಥಳಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರುತ್ತದೆ. ಆದರೆ ಉತ್ತರ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ 4ರಿಂದ 5 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಾಗುತ್ತವೆ ಎಂದು IMD ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಂದಿನ 3 ದಿನಗಳ ಕಾಲ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುವ ಮುನ್ಸೂಚನೆಯನ್ನು ಅಧಿಕಾರಿಗಳು ನೀಡಿದ್ದಾರೆ. ಅಲ್ಲದೆ ಜನರು ಹಗಲಿನ ವೇಳೆ ಮನೆಯೊಳಗೆ ಇರುವಂತೆ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ. ಒಂದು ವೇಳೆ ಜನರು ಹೊರಗಡೆ ಹೋಗುವಾಗ ನೀರು ಅಥವಾ ತಂಪು ಪಾನೀಯಗಳನ್ನು ತೆಗೆದುಕೊಂಡು ಹೋಗುವಂತೆ ಸಲಹೆ ನೀಡಿದ್ದಾರೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕಲಬುರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯ ದಿನಗಳಿಗಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ಇನ್ನು ತುಮಕೂರು, ಬಾಗಲಕೋಟೆ ಮತ್ತು ಚಿತ್ರದುರ್ಗದ ಕೆಲವು ಭಾಗಗಳಲ್ಲಿ ತಾಪಮಾನವು 3.1-5 ಡಿಗ್ರಿ ಸೆಲ್ಸಿಯಸ್ ಮತ್ತು ಮಂಡ್ಯ, ದಾವಣಗೆರೆ, ಬಳ್ಳಾರಿ ಮತ್ತು ಕೊಪ್ಪಳದಲ್ಲಿ 1.6-6 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಏಪ್ರಿಲ್‌ನಲ್ಲಿ ತಾಪಮಾನವು ಮಾರ್ಚ್‌ಗಿಂತ ಹೆಚ್ಚಾಗಿರುತ್ತದೆ ಎಂದು ತಿಳಿಸಿದೆ.












Click it and Unblock the Notifications