Karnataka Weather Today: ಇಂದು ಈ ಜಿಲ್ಲೆಗಳಿಗೆ ಗುಡುಗು-ಸಿಡಿಲು ಸಹಿತ ಮಳೆ ಎಚ್ಚರಿಕೆ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್ಸ್

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅಂತ್ಯದತ್ತ ಸಾಗುತ್ತಿದ್ದರೂ, ಈ ಸಂದರ್ಭದಲ್ಲಿ ವರುಣದೇವನ ಕೃಪೆ ಇನ್ನೂ ರಾಜ್ಯದ ಮೇಲೆ ಇದ್ದಂತೆ ಕಾಣುತ್ತಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ವರದಿಯ ಪ್ರಕಾರ, ಶನಿವಾರ, ಸೆಪ್ಟೆಂಬರ್ 19, 2026ರಂದು ಕರ್ನಾಟಕದಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಹಾಗೂ ಕೆಲವು ಕಡೆ ಭಾರಿ ಪ್ರಮಾಣದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಲೋಮೀಟರ್ ಇರುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳ ಜನರಿಗೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Karnataka Weather Today IMD Forecasts Heavy Rain and Thunderstorms Across State on September 19

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಮುನ್ಸೂಚನೆ

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ (ಸೆಪ್ಟೆಂಬರ್ 19) ಮುಂದಿನ ಕೆಲವು ದಿನಗಳ ಕಾಲ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಇಂದು ಕರಾವಳಿಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆದರೆ, ಮುಂದಿನ ದಿನಗಳಲ್ಲಿ ಅಂದರೆ ಸೆಪ್ಟೆಂಬರ್ 20 ರಿಂದ 24ರವರೆಗೆ ಕರಾವಳಿಯುದ್ದಕ್ಕೂ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ವ್ಯಾಪಕವಾಗಿ ಮಳೆಯಾಗುವ ಲಕ್ಷಣಗಳಿವೆ. ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಹಾಗೂ ಮಣ್ಣು ಕುಸಿಯುವ ಭೀತಿ ಇರುವುದರಿಂದ ಪ್ರಯಾಣಿಕರು ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಹೇಗಿರಲಿದೆ ಹವಾಮಾನ?

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಮುಂದುವರಿಯಲಿದೆ. ಬೆಳಗಾವಿ, ಧಾರವಾಡ, ಗದಗ, ಹಾಗೂ ಹಾವೇರಿ ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. ಇನ್ನುಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡು ಹವಾಮಾನ ವರದಿ

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ದಿನವಿಡೀ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಮಧ್ಯಾಹ್ನದ ನಂತರ ಅಥವಾ ಸಂಜೆಯ ವೇಳೆಗೆ ಹಗುರದಿಂದ ಸಾಧಾರಣ ಮಟ್ಟದ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಇನ್ನೂ ತಾಪಮಾನದ ವಿಚಾರಕ್ಕೆ ಬಂದರೆ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 21°C ರಷ್ಟು ದಾಖಲಾಗುವ ಸಾಧ್ಯತೆಯಿದೆ.

ರಾಜ್ಯದ ಹಲವು ಕಡೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಟ್ರಾಫಿಕ್ ಪೊಲೀಸರು ಹಾಗೂ ಹವಾಮಾನ ಇಲಾಖೆ ಸೂಚಿಸಿದೆ. ತಗ್ಗು ಪ್ರದೇಶಗಳಲ್ಲಿ ಮತ್ತು ರಸ್ತೆಗಳಲ್ಲಿ ನೀರು ನಿಲ್ಲುವ ಅಪಾಯವಿದ್ದು, ಮಳೆಗಾಲದ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಬಿಎ ಸೇರಿದಂತೆ ಸ್ಥಳೀಯ ಆಡಳಿತಗಳು ಜನರಿಗೆ ಮನವಿ ಮಾಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+