Karnataka Weather: ರಾಜ್ಯದ ಯಾವೆಲ್ಲಾ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ? ಹವಾಮಾನ ಇಲಾಖೆ ಮುನ್ಸೂಚನೆ ಏನಿದೆ?
Karnataka Weather: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆರಾಯನ ಆರ್ಭಟ ಇದೀಗ ಸದ್ಯ ತಗ್ಗಿದೆ. ಈ ನಡುವೆಯೇ ಬುಧವಾರ (ಅಕ್ಟೋಬರ್ 28) ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಇಂದು (ಅಕ್ಟೋಬರ್ 27) ಎಲ್ಲೆಲ್ಲಿ ವಾತಾವರಣ ಹೇಗರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿದ್ದ ಮಳೆಯ ಪ್ರಮಾಣದಲ್ಲಿ ಇದೀಗ ಗಣನೀಯವಾಗಿ ಇಳಿಮುಖ ಕಂಡುಬಂದಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದು, ಮುಂಬರುವ ದಿನಗಳಲ್ಲಿ ಒಣ ಹವೆಯೇ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ನಡುವೆಯೂ ಬಿಸಿಲು ಇರಲಿದೆ ಎಂದು ಮುನ್ಸೂಚನೆ ನೀಡಿದೆ.

30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ
ಆದರೂ ರಾಜ್ಯದ ಕೆಲವೇ ಕೆಲವು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಕೆಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಎಲ್ಲೆಲ್ಲಿ ಮಳೆ ಮುನ್ಸೂಚನೆ?
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಮಂಗಳವಾರ (ಅಕ್ಟೋಬರ್ 27) ಒಣ ಹವೆ ಕಂಡುಬರಲಿದೆ. ಈ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಮಾತ್ರ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ, ದಕ್ಷಿಣ ಒಳನಾಡಿನ ಹವಾಮಾನದ ವಿವರ
ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಗಂಟೆಗೆ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿಯೂ ಸಹ ಒಣ ಹವೆಯ ವಾತಾವರಣವೇ ಇರಲಿದೆ. ಈ ನಡುವೆಯೇ ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಜೊತೆಗೆ, ಗಂಟೆಗೆ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಬಹುದು ಎಂದು ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕೋಲಾರ, ಚಾಮರಾಜನಗರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ವಿಜಯನಗರ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಟ್ಟಿನಲ್ಲಿ ಹೇಳುವುದಾದರೆ ಕರ್ನಾಟಕದಲ್ಲಿ ಮಳೆಯ ಚಟುವಟಿಕೆಗಳು ಸಂಪೂರ್ಣವಾಗಿ ನಿಂತು ಹೋಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರೆಯಲಿದೆ. ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ನಿರಂತರ ಗಾಳಿ ಬೀಸುವುದರಿಂದ ವಾತಾವರಣದಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆ ಕಂಡುಬರಬಹುದು. ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವೇ ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಟ್ಟಿನಲ್ಲಿ ಹೇಳುವುದಾದರೆ ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚುರುಕು ಪಡೆದಿದ್ದ ಮಳೆರಾಯನ ಆರ್ಭಟ ಇದೀಗ ಸಂಪೂರ್ಣ ತಗ್ಗಿದೆ. ಮುಂದಿನ ದಿನಗಳಲ್ಲಾದರೂ ಮಳೆಯಾಗಿ ಜಲಮೂಲಗಳಿಗೆ ಜೀವಕಳೆ ಬರಲಿದೆ ಎನ್ನುವ ಭರವಸೆಯಲ್ಲಿ ರಾಜ್ಯದ ಜನರಿದ್ದಾರೆ.


Click it and Unblock the Notifications
