Karnataka Weather Updates: ವಾಯುಭಾರ ಕುಸಿತ: ಬೆಂಗಳೂರು ಸೇರಿ ಕರ್ನಾಟಕದ ಈ ಭಾಗಗಳಲ್ಲಿ ಚಳಿ ಹೆಚ್ಚಳ, ಮಳೆ ಸಾಧ್ಯತೆ
Karnataka Weather Updates: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕದ ಹವಾಮಾನದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಚಳಿ ಹೆಚ್ಚಳವಾಗಿದೆ. ಇದರೊಂದಿಗೆ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಜನವರಿ 27ರ ಮಂಗಳವಾರದಂದು ಸಹ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಉತ್ತರ- ದಕ್ಷಿಣ ದುರ್ಬಲ ಟ್ರಫ್ ಹಾದುಹೋಗುವ ಸಾಧ್ಯತೆ ಇದೆ. ಈ ಕೊಮೊರಿನ್ ಪ್ರದೇಶದಿಂದ ಉತ್ತರ ಕೇರಳ ಕರಾವಳಿಯವರೆಗೆ ಆಗ್ನೇಯ ಅರೇಬಿಯನ್ ಸಮುದ್ರದಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಟ್ರಫ್ ಕಡಿಮೆ ಗುರುತಿಸಲ್ಪಟ್ಟಿದೆ ಎಂದು ಐಎಂಡಿ ವರದಿ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗುತ್ತಿರುವುದರಿಂದ ರಾಜ್ಯದಲ್ಲಿ ಮಂಗಳವಾರ ಹಾಗೂ ಮುಂದಿನ ಎರಡು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಮಂಗಳವಾರವೂ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಚಳಿ ಪ್ರಮಾಣವು ಇನ್ನೂ ಎರಡರಿಂದ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಬೆಂಗಳೂರಿನಲ್ಲಿ ಚಳಿ ವಾತಾವರಣ ಮುಂದುವರಿದಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಸಾಮಾನ್ಯವಾಗ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚಾಗಿದೆ. ಇನ್ನು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಡಿಗ್ರಿ ಸೆಲ್ಸಿಯಸ್ ಹಾಗೂ 18 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ರಾಜ್ಯದ ಸಮತಟ್ಟಾದ ಪ್ರದೇಶ ದಾವಣಗೆರೆಯಲ್ಲಿ ಕನಿಷ್ಠ ತಾಪಮಾನವು 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರ್ನಾಟಕದ ದಕ್ಷಿಣದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಂಜು ಕವಿದಿತ್ತು.
ಮುಂದಿನ 24 ಗಂಟೆಗಳ ಹವಾಮಾನ ವರದಿ
ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6-3°C /ಡಿಗ್ರಿ ಸೆಲ್ಸಿಯಸ್ ತಾಪಮಾನ ಕಡಿಮೆ ಆಗಲಿದೆ. ಕರಾವಳಿ ಕರ್ನಾಟಕದ ಮೇಲೆ ಮತ್ತು ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6°-3.0°C ಹೆಚ್ಚು. ದಕ್ಷಿಣ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 3.1°-5.0°C ಹೆಚ್ಚಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.












Click it and Unblock the Notifications