Get Updates
Get notified of breaking news, exclusive insights, and must-see stories!

Karnataka Weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ - ಚಳಿ: ಐಎಂಡಿ ರಿಪೋರ್ಟ್

Karnataka Weather: ಕರ್ನಾಟಕದ ವಿವಿಧ ಭಾಗದಲ್ಲಿ ಚಳಿ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ರಾಜ್ಯದ ಯಾವ ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಿದೆ ಹಾಗೂ ಎಲ್ಲೆಲ್ಲಿ ಮಳೆ ಇದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1.6-3°C ಕಡಿಮೆ ಆಗಿದ್ದು. ದಕ್ಷಿಣ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6°-3.0°C ಹೆಚ್ಚಾಗಲಿದೆ. ದಕ್ಷಿಣ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ 3.1°-5.0°C ಹೆಚ್ಚಾಗಲಿದೆ. ಇನ್ನು ಕರ್ನಾಟಕದ ದಕ್ಷಿಣದ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಂಜು ಕವಿದಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Karnataka Weather Update Bay of Bengal Low Pressure Triggers Rain and Cold Wave Across Several Districts Says IMD

ಇನ್ನು ತಮಿಳುನಾಡಿನಿಂದ ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಮತ್ತು ಶ್ರೀಲಂಕಾಕ್ಕೆ ಹೊಂದಿಕೊಂಡಿರುವ ಪೂರ್ವ ದಿಕ್ಕಿನಲ್ಲಿರುವ ವಾಯುಭಾರ ಕುಸಿತವು ಈಗ ಕೊಮೊರಿನ್ ಪ್ರದೇಶದಿಂದ ಉತ್ತರ ಕೇರಳ ಕರಾವಳಿಯವರೆಗೆ ಅರೇಬಿಯನ್ ಸಮುದ್ರದಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಮಳೆ ಬರುವ ಸಾಧ್ಯತೆಯೂ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಉಲ್ಲೇಖಿಸಿದೆ.

ಈ ಪ್ರದೇಶಗಳಲ್ಲಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರಗಳಲ್ಲಿ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ. ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮೀಣ ಪ್ರದೇಶ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯ ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಇರುವ ಸಾಧ್ಯತೆ ಇದೆ. ಉಳಿದಂತೆ ಈ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.

ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ

ಇನ್ನು ರಾಜ್ಯದ ಸಮತಟ್ಟಾದ ಪ್ರದೇಶ ದಾವಣಗೆರೆ ಯಲ್ಲಿ ಕನಿಷ್ಠ 11.0°C ತಾಪಮಾನ ದಾಖಲಾಗಿದೆ ನೈಜ ಸಮಯದ ಅಂಕಿಅಂಶಗಳ ಆಧಾರದ ಮೇಲೆ, ಉತ್ತರ ಒಳನಾಡಿನ ಬೀದರ್, ಧಾರವಾಡ, ಬೆಳಗಾವಿ ವಿಮಾನ ನಿಲ್ದಾಣ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ದಾವಣಗೆರೆ, ಹಾಸನ ಮತ್ತು ಮೈಸೂರಿನಲ್ಲಿ ಕನಿಷ್ಠ ತಾಪಮಾನವು 11.0-14.0 ° C ವ್ಯಾಪ್ತಿಯಲ್ಲಿದೆ. ವಿಜಯಪುರ, ಗದಗ, ಹಾವೇರಿ, ಕೊಪ್ಪಳ, ಕಲಬುರ್ಗಿ ಮತ್ತು ರಾಯಚೂರು ಮತ್ತು ಚಿಂತಾಮಣಿ ಮತ್ತು ಚಿತ್ರದುರ್ಗದ ಮೇಲೆ 14.1-18.0 ° C. ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣ ಮತ್ತು ಶಕ್ತಿನಗರ ಮತ್ತು ಬೆಂಗಳೂರು ಹೆಚ್‌ಎಎಲ್ ಪ್ರದೇಶಗಳಲ್ಲಿ 18.1-22.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇನ್ನು ಉತ್ತರ ಒಳನಾಡಿನ ಕರ್ನಾಟಕದ ಬೀದರ್ ಮತ್ತು ದಕ್ಷಿಣ ಒಳನಾಡಿನ ದಾವಣಗೆರೆ ಮತ್ತು ಮೈಸೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಆಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕರಾವಳಿ ಕರ್ನಾಟಕದ ಮಂಗಳೂರು ವಿಮಾನ ನಿಲ್ದಾಣ, ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣ, ಗದಗ, ಹಾವೇರಿ ಮತ್ತು ರಾಯಚೂರು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+