Karnataka Weather Updates: ಕರ್ನಾಟಕದಲ್ಲಿ ಚಳಿ ಅಲ್ಪ ಇಳಿಕೆ: 5 ದಿನಗಳ ಹವಾಮಾನ ವರದಿ
Karnataka Weather Updates: ಕರ್ನಾಟಕದ ವಿವಿಧ ಭಾಗದಲ್ಲಿ ಚಳಿ ಮುಂದುವರಿದಿದೆ. ಇನ್ನು ಮುಂದಿನ ಐದು ದಿನಗಳ ವರೆಗೆ ಹವಾಮಾನದಲ್ಲಿ ದೊಡ್ಡ ವ್ಯತ್ಯಾಸವಿಲ್ಲ. ಆದರೆ ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗುತ್ತಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ಮಧ್ಯಾಹ್ನದ ವೇಳೆ ಬಿಸಿಲು ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಉಳಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ.
ಉತ್ತರ ಕೇರಳ ಮತ್ತು ನೆರೆಹೊರೆ ಪ್ರದೇಶಗಳ ಮೇಲ್ಭಾಗದ ವಾಯು ಚಂಡಮಾರುತ ಪರಿಚಲನೆ ಇದ್ದು, ಇದೀಗ ಸರಾಸರಿ ಸಮುದ್ರ ಮಟ್ಟದಿಂದ 15 ರಿಂದ 3.1 ಕಿ.ಮೀ ಎತ್ತರದಲ್ಲಿ ಕಂಡುಬಂದಿದೆ. ಕೇರಳ - ಕರ್ನಾಟಕ ಕರಾವಳಿಯಲ್ಲಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಟ್ರಫ್ ಕಡಿಮೆ ಗುರುತಿಸಲ್ಪಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ಸಮತಟ್ಟಾದ ಪ್ರದೇಶ ಮಂಡ್ಯ ಎಡ್ಬ್ಯೂಎಸ್‌ನಲ್ಲಿ ಕನಿಷ್ಠ 13.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

5 ದಿನಗಳ ಹವಾಮಾನ ಹೇಗಿದೆ
ಇನ್ನು ಮುಂದಿನ 5 ದಿನಗಳ ವರೆಗೆ ಹವಾಮಾನದಲ್ಲಿ ಹೆಚ್ಚಿನ ವ್ಯತ್ಯಾಸ ಇಲ್ಲ. ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ ?
ಇನ್ನು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನವು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮುಂದಿನ 48 ಗಂಟೆಯ ಅವಧಿಯಲ್ಲಿ ಶುಭ್ರ ಆಕಾಶ ಇರಲಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿ ಬೆಳಿಗ್ಗೆ ದಟ್ಟವಾದ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆ ಆಗಿದ್ದು, 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ಆಗಿದೆ. ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3.0 ಡಿಗ್ರಿ ಸೆಲ್ಸಿಯಸ್ ಇತ್ತು. ಇನ್ನು ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಧಾರವಾಡ, ಬೀದರ್, ಬಾಗಲಕೋಟೆ, ಗದಗ ಮತ್ತು ವಿಜಯಪುರ ಮತ್ತು ಹಾಸನ, ಮಂಡ್ಯ ಎಡಬ್ಲ್ಯೂಎಸ್, ಬೆಂಗಳೂರು ಕೆಐಎಎಲ್ ಎಪಿ, ಬೆಂಗಳೂರು ಹೆಚ್‌ಎಎಲ್ ಇಂಟರ್ ಎಪಿ, ದಾವಣಗೆರೆ ಮತ್ತು ಶಿವಮೊಗ್ಗದ ಭಾಗದಲ್ಲಿ ಕನಿಷ್ಠ ತಾಪಮಾನವು 13.1 ಡಿಗ್ರಿ ಸೆಲ್ಸಿಯಸ್‌ನಿಂದ 15.5 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ.
ಉತ್ತರ ಒಳ ಕರ್ನಾಟಕದ ಹಾವೇರಿ, ಬೆಳಗಾವಿ ವಿಮಾನ ನಿಲ್ದಾಣ, ರಾಯಚೂರು, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆ. ದಕ್ಷಿಣ ಒಳ ಕರ್ನಾಟಕದ ಬೆಂಗಳೂರು ನಗರ, ಮೈಸೂರು, ಚಿತ್ರದುರ್ಗ ಸೇರಿದಂತೆ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನವು 15.6 ಡಿಗ್ರಿ ಸೆಲ್ಸಿಯಸ್‌ನಿಂದ 19.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಒಳ ಕರ್ನಾಟಕದ ಚಿಂತಾಮಣಿ ಭಾಗದಲ್ಲಿ 9.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕರಾವಳಿ ಕರ್ನಾಟಕದ ಹೊನ್ನಾವರ, ಮಂಗಳೂರು ವಿಮಾನ ನಿಲ್ದಾಣ, ಕಾರವಾರ, ಶಕ್ತಿನಗರದ ಭಾಗದಲ್ಲಿ 21.1ರಿಂದ 24.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ












Click it and Unblock the Notifications