Karnataka Weather: ಕರ್ನಾಟಕದಲ್ಲಿ ಚಳಿ ಇಳಿಕೆ, ಈಶಾನ್ಯ ಮುಂಗಾರು ಮಳೆ ಬಗ್ಗೆ ಐಎಂಡಿ ವರದಿ
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಚಳಿ ಪ್ರಮಾಣ ಇಳಿಕೆಯಾಗಿದ್ದು, ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿದಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಆಗಿದೆ. ರಾಜ್ಯದ ವಿವಿಧ ಭಾಗದಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿದೆಯಾದರೂ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಮುಂದಿನ 2 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ, ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ ಮತ್ತು ಕರ್ನಾಟಕದ ಒಳನಾಡಿನ ಪಕ್ಕದ ಪ್ರದೇಶಗಳಲ್ಲಿ ಈಶಾನ್ಯ ಮಾನ್ಸೂನ್ ಮಳೆ ನಿಲ್ಲಲು ಪರಿಸ್ಥಿತಿಗಳು ಅನುಕೂಲಕರವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂದಿನ ಮೂರು ದಿನಗಳ ವರೆಗೆ ಕರ್ನಾಟಕದ ವಿವಿಧ ಭಾಗದಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿದಿದೆ.
5 ದಿನ ಮಹತ್ವದ ಬದಲಾವಣೆ ಇಲ್ಲ
ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಬಹುತೇಕ ಒಣಹವೆ ಇರಲಿದೆ. ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಇನ್ನು ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಚಳಿ ಪ್ರಮಾಣ ತುಸು ಇಳಿಕೆ ಕಂಡಿದೆ. ಕಳೆದ 15 ದಿನಗಳಿಂದಲೂ ಬೆಂಗಳೂರಿನಲ್ಲಿ ಮೈಕೊರೆಯುವ ಚಳಿ ಇತ್ತು. ಇನ್ನು ಮುಂದಿನ 24 ಗಂಟೆ ಹಾಗೂ 48 ಗಂಟೆಯ ಅವಧಿಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳವರೆಗೆ: ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಸಮಯದಲ್ಲಿ ಮಂಜು ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮುಂದಿನ 48 ಗಂಟೆಗಳವರೆಗೆ: ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಕವಿದಿರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಾಮಾನ್ಯವಾಗಿತ್ತು. ರಾಜ್ಯದಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ 5 ಸೆಂ.ಮೀ ಮಳೆಯಾಗಿದೆ. ತರೀಕೆರೆ 4 ಸೆಂ.ಮೀ, ಬೆಳಗಾವಿಯ ಹಿಡಕಲ್ ಅಣೆಕಟ್ಟು ಭಾಗದಲ್ಲಿ 4 ಸೆಂ.ಮೀ ಹಾಗೂ ಅಜ್ಜಂಪುರದಲ್ಲಿ 2 ಸೆಂ.ಮೀ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.












Click it and Unblock the Notifications