Karnataka Weather: ಶೀತಗಾಳಿ ನಡುವೆ ಬೆಂಗಳೂರು ಸೇರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ
Karnataka Weather: ರಾಜ್ಯದ ಬಹುತೇಕ ಭಾಗಗಲ್ಲಿ ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಈ ನಡುವೆಯೇ ಎಡರು ದಿನ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 10) ಬೆಳಗ್ಗೆ ಸೂರ್ಯ ಬೇಗ ಎಂಟ್ರಿ ಕೊಟ್ಟಿದ್ದರೂ ಸಹ ಚಳಿ ಮಾತ್ರ ಚಳಿ ಮಾತ್ರ ಮುಂದುವರೆದಿದೆ. ಆದರೆ, ನಿನ್ನೆಗೆ ಹೋಲಿಕೆ ಮಾಡಿದ್ರೆ ನಗರದಲ್ಲಿಂದು ಚಳಿ ಪ್ರಮಾಣ ಕಡಿಮೆಯಾಗಿದೆ. ಇನ್ನೂ ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಹೆಚ್ಚು ಚಳಿ?: ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಂದು ಶೀತಗಾಳಿ ಸಾಧ್ಯತೆಯಿದೆ. ಅದರಲ್ಲೂ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ತೀವ್ರವಾದ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಳಿದಂತೆ ಬೆಳಗಾವಿ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಂಜು ಕವಿದ ವಾತಾವರಣ ಇರಲಿದ್ದು, ಜೊತೆತೆ ಶೀತಗಾಳಿ ಬೀಸಲಿದೆ ಎಂದು ತಿಳಿಸಿದೆ. ಬೆಳಗ್ಗ ಹಾಗೂ ಸಂಜೆ ವೇಳೆ ಮಂಜು ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಎರಡು ದಿನ ಮಳೆ ಸಾಧ್ಯತೆ: ಭೀಕರ ಚಳಿ ನಡುವೆಯೇ ಜನವರಿ 10 ಹಾಗೂ 11ರಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಉಳಿದಂತೆ ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಮತ್ತು ಕೊಡಗು ಜಿಲ್ಲೆಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜು ಕವಿಯಲಿದ್ದು, ಜೊತೆಗೆ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಗಮನಾರ್ಹ ಇಳಿಕೆಯಾಗಿರುವ ಬಗ್ಗೆ ವರದಿಯಾಗಿದೆ. ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ತಗ್ಗಲಿದ್ದು, ಹಲವು ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಸದ್ಯ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಚಳಿಗಾಳಿ ಬೀಸುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಕೆಲವೆಡೆ ಬೆಳಗ್ಗೆ ಹಾಗೂ ಸಂಜೆ ವೇಳೆ ಮನೆಯಿಂದ ಹೊರಬರಲು ಭಯ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗ್ಗೆ 9 ಗಂಟೆಯಾದರೂ ಭೀಕರ ಚಳಿ ವಾತಾವರಣ ಮುಂದುವರೆಯುತ್ತಿದ್ದು, ಇದರಿಂದ ಕೆಲವು ಭಾಗಗಳ ಜನರು ದಂಗಾಗಿದ್ದಾರೆ. ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ.
ಪ್ರಮುಖ ಸಲಹೆ: ಇದೀಗ ಭಾರೀ ಚಳಿ ಇರುವ ಹಿನ್ನೆಲೆ ಜನರು ಮನೆಯಿಂದ ಹೊರಗಡೆ ಹೋಗುವ ಮುನ್ನ ಹತ್ತಿ ಬಟ್ಟೆಯಿಂದ ತಯಾರಿಸಲಾದ ಉಡುಪುಗಳನ್ನು ಧರಿಸುವುದು ಉತ್ತಮ. ಅದರಲ್ಲೂ ಬೆಳಗ್ಗೆ ಹಾಗೂ ಸಂಜೆ ವೇಳೆ ಚಿಕ್ಕ ಮಕ್ಕಳನ್ನು ಮನೆಯಿಂದ ಹೊರಗಡೆ ಕಳುಹಿಸದಿರುವುದು ಉತ್ತಮ. ಈ ಸಮಯದಲ್ಲಿ ಚಳಿ ಪ್ರಮಾಣ ಹೆಚ್ಚಿರಲಿದ್ದು, ಮುಂಜಾಗ್ರತಾ ಕ್ರಮ ವಹಿಸುವುದು ಅತ್ಯಗತ್ಯವಾಗಿದೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications