Karnataka Weather: ಕರ್ನಾಟಕದಲ್ಲಿ ಹವಾಮಾನ ಹೇಗಿದೆ, ಚಳಿ ಇನ್ನೆಷ್ಟು ದಿನ ಇರಲಿದೆ ಇಲ್ಲಿದೆ ಮಾಹಿತಿ
Karnataka Weather: ಕಳೆದ ಎರಡು ವಾರಗಳಿಂದಲೂ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಚಳಿ ವಾತಾವರಣವಿತ್ತು. ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಒಣಹವೆ ಮುಂದುವರಿದಿದೆ. ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ರಾಜ್ಯದ ವಿವಿಧ ಭಾಗ ಸಾಧಾರಣ ಮಳೆ ಆಗಿದೆ. ಜನವರಿ 28ರಿಂದ ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಉತ್ತರ-ದಕ್ಷಿಣ ದುರ್ಬಲ ವಾಯುಭಾರ ಕುಸಿತವು ಸಮುದ್ರ ಮಟ್ಟದಿಂದ ಸರಾಸರಿ 0.9 ಕಿ.ಮೀ ಎತ್ತರದಲ್ಲಿದೆ ಮತ್ತು ಕಡಿಮೆ ಗುರುತಿಸಲ್ಪಟ್ಟಿದೆ. ರಾಜ್ಯದಾದ್ಯಂತ ಉತ್ತರ-ಪೂರ್ವ ದಿಕ್ಕಿನಿಂದ ಪೂರ್ವ ದಿಕ್ಕಿನ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ
ಇನ್ನು ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ಪ್ರಮುಖವಾಗಿ ಸ್ವಚ್ಛ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಸಮಯದಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮುಂದಿನ 48 ಗಂಟೆಯಲ್ಲೂ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಇನ್ನು ಬೀದರ್, ಧಾರವಾಡ, ಬೆಳಗಾವಿ ವಿಮಾನ ನಿಲ್ದಾಣ, ಉತ್ತರ ಒಳನಾಡಿನ ಗದಗ ಮತ್ತು ದಾವಣಗೆರೆ, ಚಿಂತಾಮಣಿ, ಬೆಂಗಳೂರು ಎಚ್ಎಎಲ್, ಬೆಂಗಳೂರು ಕೆಐಎಎಲ್, ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ಮಂಡ್ಯ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು 14.5-19.0 ಡಿಗ್ರಿ ವ್ಯಾಪ್ತಿಯಲ್ಲಿದೆ. ದಕ್ಷಿಣ ಒಳನಾಡಿನ ಹಾಸನದಲ್ಲಿ 12.80C ಇದೆ. ಉತ್ತರ ಒಳನಾಡಿನ ಕೊಪ್ಪಳ, ವಿಜಯಪುರ, ಹಾವೇರಿ, ಕಲಬುರಗಿ ಮತ್ತು ರಾಯಚೂರು ಮತ್ತು ದಕ್ಷಿಣ ಒಳ ಕರ್ನಾಟಕದ ಶಿವಮೊಗ್ಗದ ಪ್ರದೇಶದಲ್ಲಿ 19.1-20.0 ° C ಇದೆ. ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣ ಮತ್ತು ಶಕ್ತಿನಗರದಲ್ಲಿ 20.1-23.8°C ತಾಪಮಾನ ಇದೆ.
ಉತ್ತರ ಒಳನಾಡಿನ ಬೀದರ್‌ನಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಕರಾವಳಿ ಕರ್ನಾಟಕದ ಕಾರವಾರ, ಮಂಗಳೂರು ವಿಮಾನ ನಿಲ್ದಾಣ; ಉತ್ತರ ಒಳನಾಡಿನ ಗದಗ, ರಾಯಚೂರು, ಕೊಪ್ಪಳ, ಕಲಬುರ್ಗಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಎಚ್‌ಎಎಲ್, ಮಂಡ್ಯ, ಬೆಂಗಳೂರು , ಚಿತ್ರದುರ್ಗದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು. ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಧಾರವಾಡ, ಉತ್ತರ ಒಳನಾಡಿನ ಹಾವೇರಿ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗದಲ್ಲಿ ಸಾಮಾನ್ಯಕ್ಕಿಂತ ಅತಿ ಹೆಚ್ಚು. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯವಾಗಿದೆ. ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಧಾರವಾಡ ಮತ್ತು ದಕ್ಷಿಣ ಒಳನಾಡಿನ ಮೈಸೂರುಗಳಲ್ಲಿ ತಾಪಮಾನದಲ್ಲಿ ಭಾರಿ ಹೆಚ್ಚಳವಾಗಿದೆ. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಒಣಹವೆ ಇತ್ತು. ಕರ್ನಾಟಕದ ಸಮತಟ್ಟಾದ ಪ್ರದೇಶಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನವು 14.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ (1.6-30C) ಕಡಿಮೆಯಾಗಿದೆ. ಕರಾವಳಿ ಕರ್ನಾಟಕದ ಹಲವು ಸ್ಥಳಗಳಲ್ಲಿ, ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ (1.6°C ನಿಂದ 3.0°C) ಹೆಚ್ಚಾಗಿದೆ; ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ (3.1°C ನಿಂದ 5.0°C) ಗಮನಾರ್ಹವಾಗಿ ಹೆಚ್ಚಾಗಿದೆ ಮತ್ತು ಉಳಿದ ಸ್ಥಳಗಳಲ್ಲಿ ಒಣಹವೆ ಇತ್ತು ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.












Click it and Unblock the Notifications