Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ದಟ್ಟ ಮಂಜು, ಭಾರೀ ಶೀತಗಾಳಿ ಮುಂದುವರೆಯುವ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಟ್ಟ ಮಂಜಿನ ಜೊತೆ ಭಾರೀ ಶೀತಗಾಳಿ ಮುಂದುವರೆದಿದೆ. ಪರಿಣಾಮ ಜನರು ತತ್ತರಿಸಿ ಹೋಗಿದ್ದಾರೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 19) ಬೆಳಗ್ಗೆ ದಟ್ಟ ಮಂಜಿನ ಜೊತೆ ಭೀಕರ ಚಳಿ ಇದ್ದು, ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಮುಂದಿನ ಹಲವು ದಿನಗಳವರೆಗೆ ನಗರದಲ್ಲಿ ಇದೇ ರಿತೀಯ ವಾತಾವರಣ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ. ಇನ್ನೂ ಬೆಂಗಳೂರಿನಲ್ಲಿಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇದ್ದು, ಚಳಿಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಲ್ಲೇ ಗಮನಾರ್ಹ ಶೀತಗಾಳಿ ಇರಲಿದ್ದು, ಉಳಿದ ಭಾಗಗಳಲ್ಲಿ ಸಾಮಾನ್ಯವಾಗಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಶೀತಗಾಳಿ ಹೆಚ್ಚಳ?: ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ದಟ್ಟ ಮಂಜಿನ ಜೊತೆ ಅತೀ ಹೆಚ್ಚು ಚಳಿ ಇರಲಿದೆ. ಉಳಿದಂತೆ ಬೆಳಗಾವಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ವಾತಾವರಣ ಇರಲಿದೆ. ಇನ್ನೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗಗಳಲ್ಲೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಕೂಡ ಚಳಿ ಜೊತೆ ಒಣಹವೆ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರೀ ಚಳಿ ಗಾಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಚಳಿ ಪ್ರಮಾಣ ಇಳಿಕೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಅಂದರೆ ಫೆಬ್ರವರಿ ಎಂಟ್ರಿ ಆಗುತ್ತಿದ್ದಂತೆ ಚಳಿಗಾಳಿ ಕಡಿಮೆಯಾಗಲಿದೆ ಎಂದು ತಿಳಿಸಿದೆ.












Click it and Unblock the Notifications