Karnataka Weather: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಚಳಿ ಮುನ್ಸೂಚನೆ
Karnataka Weather: ಪ್ರಸ್ತುತ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಒಣಹವೆ ಮುಂದುವರೆದಿದೆ. ಹಗಲು ವೇಳೆಯಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಿದ್ದು, ಬೆಳಗ್ಗೆ ಹಾಗೂ ರಾತ್ರಿ ವೇಳೆ ಶೀತಗಾಳಿ ಬೀಸುತ್ತಿದೆ. ಇನ್ನೂ ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 21) ಬೆಳ್ಳಂಬೆಳ್ಳಗ್ಗೆ ದಟ್ಟ ಮಂಜು, ಭಾರೀ ಶೀತಗಾಳಿ ವಾತಾವರಣ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಕಡಿಮೆಯಾಗಿದ್ದ ಚಳಿ ಪ್ರಮಾಣ ಮತ್ತೆ ಹೆಚ್ಚಳವಾಗಿದೆ. ಮುಂದಿನ ಹಲವು ದಿನಗಳವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎನ್ನುವ ಮುನ್ಸೂಚನೆ ಇದೆ. ನಗರದಲ್ಲಿಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ತೀವ್ರ ಚಳಿಯ ಜೊತೆಗೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಮುಂದಿನ ಹಲವು ದಿನಗಳವರೆಗೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಚಳಿ?: ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆ ವಾತಾವರಣ ಮುಂದುವರೆದಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಹಲವು ಜಿಲ್ಲೆಗಳ ಜನರು ಭೀಕರ ಚಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ.
ಶೀತಗಾಳಿ ಮುಂದುವರೆಯುವ ಮುನ್ಸೂಚನೆ: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸುಮಾರು 30-34 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 15-20 ಡಿಗ್ರಿ ಸೆಲ್ಸಿಯಸ್ ನಡುವೆಯೇ ದಾಖಲಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳಗ್ಗಿನ ವೇಳೆ ಮಂಜು ಕಾಣಿಸಿಕೊಳ್ಳುತ್ತಿದ್ದು, ಚಳಿಯ ಪ್ರಮಾಣವೂ ಸ್ವಲ್ಪ ಹೆಚ್ಚಾಗಿದೆ.
ಕರಾವಳಿ ಕರ್ನಾಟಕದಲ್ಲಿ ಒಣಹಲವೆ ಮುಂದುವರೆದಿದೆ. ಇನ್ನೂ ಮುಂದಿನ ಕೆಲವು ದಿನಗಳವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಇದೇ ರೀತಿಯ ಒಣ ಮತ್ತು ಚಳಿ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಳಿಕ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಕ್ರಮೇಣ ಕಡಿಮೆ ಆಗಲಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಬೇಸಿಗೆ ಎಂಟ್ರಿ ಕೊಡಲಿದೆ. ನಂತರ ಜೂನ್ ಆರಂಭ ಆಗುತ್ತಿದ್ದಂತೆ ವಾಡಿಕೆಯಂತೆ ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ಕೊಡಲಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಬಾರಿ ಮುಂಗಾರು ವೇಳೆ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಅತೀವೃಷ್ಟಿಯಿಂದ ರೈತರು ಬೆಳೆದ ಬೆಳೆಗಳು ಜವಾವೃತವಾಗಿರು ಘಟನೆಗಳು ನಡೆದಿವೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ











Click it and Unblock the Notifications