Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಲಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಮಾರ್ಚ್ 6ರ ವರೆಗೂ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮಾರ್ಚ್ 6) ಒಣಹವೆ ಮುಂದುವರೆದಿದ್ದು, ಇಲ್ಲಿ ಮುಂದಿನ ಹಲವು ದಿನಗಳವರೆಗೆ ಬಿಸಿಲಿನ ಪ್ರಮಾಣ ಹೆಚ್ಚಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಇನ್ನೂ ಕೆಲವು ಜಿಲ್ಲೆಗಳಲ್ಲೂ ಸಹ ಇದೇ ರೀತಿಯ ವಾತಾವರಣ ಇರಲಿದೆ ಅಂತಲೂ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಮಾರ್ಚ್ 12ರ ವರೆಗೂ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಹ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದುವರೆದ ರಣಭೀಕರ ಬಿಸಿಲು
ಸಾಮಾನ್ಯವಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಂಡುಬರುವ ರಣಭೀಕರ ಬಿಸಿಲು, ಈ ವರ್ಷ ಮಾರ್ಚ್ ಆರಂಭದಲ್ಲೇ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರಭಾವ ಬೀರಲು ಪ್ರಾರಂಭಿಸಿದೆ. ತಾಪಮಾನವು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಮಾರ್ಚ್ ತಿಂಗಳಲ್ಲೇ ಇಷ್ಟೊಂದು ಬಿಸಿಲು ಇದೆ. ಇನ್ನೂ ಏಪ್ರಿಲ್‌ನಲ್ಲಿ ಇನ್ನೇನು ಗತಿ ಕಾದಿದೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ.
ಉತ್ತರ ಭಾರತದ ಕೆಲವೆಡೆ ಮಳೆ ಸಾಧ್ಯತೆ
ಮುಂಬರುವ ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆ ಆಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಇದರಿಂದ ತಾತ್ಕಾಲಿಕವಾಗಿ ತಾಪಮಾನದಲ್ಲಿ ಇಳಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಜನರಿಗೆ ಪ್ರಮುಖ ಸಲಹೆ
ಹೆಚ್ಚುತ್ತಿರುವ ಬಿಸಿಲಿನ ತೀವ್ರತೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು. ಹೀಗಾಗಿ, ಮಧ್ಯಾಹ್ನ ಬಿಸಿಲಿನಲ್ಲಿ ಓಡಾಡುವಾಗ ಎಚ್ಚರ ವಹಿಸುವುದು, ಸಾಕಷ್ಟು ನೀರು ಕುಡಿಯುವುದು ಸೇರಿದಂತೆ ಆರೋಗ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಹಾಗೂ ಹವಾಮಾನ ತಜ್ಞರು ಜನರಿಗೆ ಸಲಹೆ ನೀಡಿದ್ದಾರೆ.












Click it and Unblock the Notifications