Karnataka Weather: ಚಂಡಮಾರುತದ ಪರಿಚಲನೆ; ರಾಜ್ಯದ ಈ ಜಿಲ್ಲೆಗಳಲ್ಲಿ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ

Karnataka Rains: ರಾಜ್ಯದಲ್ಲಿ ಈಗಾಗಲೇ ಮುಂಗಾರು ಮುಕ್ತಾಯದ ಹಂತಕ್ಕೆ ಬಂದು ತಲುಪಿದೆ. ಈ ಹೊತ್ತಲೇ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಇದೀಗ ಅರಬ್ಬಿ ಸಮುದ್ರ ಹಾಗೂ ತಮಿಳುನಾಡು ಕರಾವಳಿ ತೀರದಲ್ಲಿ ಚಂಡಮಾರುತದ ಪರಿಚಲನೆ ಪರಿಣಾಮ ಒಂದು ವಾರ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಈಗಾಗಲೇ ಶನಿವಾರ (ಅಕ್ಟೋಬರ್ 17) ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಹಾಗೆಯೆ ಮುಂದಿನ ಒಂದು ವಾರ ಹಲವು ಭಾಗಗಳಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

Karnataka Weather Update Heavy Rain Alert for Bengaluru and Several Districts Until October 25

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎಲ್ಲೆಲ್ಲಿ ಮಳೆ?

ದಕ್ಷಿಣ ಒಳನಾಡು ಜಿಲ್ಲೆಗಳಾದ ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು ಸೇರಿ ಬಹುತೇಕ ಕಡೆಗಳಲ್ಲಿ ಇಂದು (ಅಕ್ಟೋಬರ್ 18) ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನದ ಸಕಲೇಶಪುರ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿಯ ಸಮಯದಲ್ಲಿ ಗುಡುಗು, ಸಿಡಿಲು ಸಹಿತ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಲಿದ್ದು, ಇಲ್ಲಿ ಅಕ್ಟೋಬರ್ 24ರ ವರೆಗೆ ಇದೇ ರೀತಿಯ ವಾತಾವಾರಣ ಮುಂದುವರೆಯಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ದಕ್ಷಿಣ ಹಾಗೂ ಕರಾವಳಿ ಜಿಲ್ಲೆಗಳ ಹವಾಮಾನದ ವಿವರ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಅಕ್ಟೋಬರ್ 24 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಅಲ್ಲಲ್ಲಿ ಸಿಡಿಲು, ಗುಡುಗು ಸಹಿತ ಜೋರು ಮಳೆಯಾಗುವ ನಿರೀಕ್ಷೆಯಿದೆ. ಈ ಪ್ರದೇಶಗಳಲ್ಲಿ ಅಕ್ಟೋಬರ್ 25ರ ವರೆಗೆ ಮಳೆಯ ಆರ್ಭಟ ಹೆಚ್ಚಿರಲಿದೆ ಎಂದು ಮುನ್ಸೂಚನೆ ನೀಡಿದೆ.

ಹಿಂಗಾರು ಮಳೆಯ ಆಗಮನ ಯಾವಾಗ?

ತಮಿಳುನಾಡು ಕರಾವಳಿ ಹಾಗೂ ಅರಬ್ಬಿ ಸಮುದ್ರದ ಉತ್ತರ ಕೇರಳ ಕರಾವಳಿಯಲ್ಲಿ ಚಂಡಮಾರುತ ಸಕ್ರಿಯವಾಗಿರುವುದರಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಅಕ್ಟೋಬರ್ 20ರ ನಂತರ ಬಂಗಾಳಕೊಲ್ಲಿಯಲ್ಲಿ ಯಾವುದೇ ಹೊಸ ವಾಯುಭಾರ ಕುಸಿತ ಅಥವಾ ಚಂಡಮಾರುತದ ಲಕ್ಷಣಗಳು ಉಂಟಾಗದಿದ್ದರೆ, ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಸಾರ್ವಜನಿಕರು ಮತ್ತು ರೈತರಿಗೆ ಮಹತ್ವದ ಸಲಹೆ

ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಸಿಡಿಲು ಮತ್ತು ಬಲವಾದ ಗಾಳಿಯೊಂದಿಗೆ ಮಳೆ ಬರುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಹಾಗೂ ರೈತರು ಹೊರಗಡೆ ಸಂಚರಿಸುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯದಂತೆ ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಸಲಹೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+