Karnataka Weather: ವಾಡಿಕೆ ಮಳೆ ಆಸೆ ಬಿಟ್ಟು ಬಿಡಿ, ಮುಂಗಾರು ಚೇತರಿಕೆ ಆಗೋದು ಇನ್ನು ಕಷ್ಟ ಎಂದ ಹವಾಮಾನ ಇಲಾಖೆ

Karnataka Weather: ರಾಜ್ಯದಲ್ಲಿ ಸದ್ಯಕ್ಕೆ ಮುಂಗಾರು ಕೈಕೊಟ್ಟಿದ್ದು, ಕೆಲವೆಡೆ ಮಾತ್ರ ವರುಣನ ಆರ್ಭಟ ಮುಂದುವರೆದಿದೆ. ಇನ್ನು ಶುಕ್ರವಾರ (ಜೂನ್ 19) ಕೆಲವು ಜಿಲ್ಲೆಗಳಲ್ಲಿ ಮಾತ್ರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಸಾಧಾರಣ ಮಳೆ ಮುಂದುವರೆದರೆ, ಇನ್ನೂ ಕೆಲವೇ ಕೆಲವು ಭಾಗಗಳಲ್ಲಿ ಮಾತ್ರ ರಣ ಮಳೆಯಾಗುತ್ತಿದೆ.

Karnataka Weather Update Heavy Rain Alert Issued For Several Districts Yellow Alert Declared

ರಾಜ್ಯದ ತಾಪಮಾನದ ವಿವರ

ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಶುಕ್ರವಾರ ವರುಣನ ಅಬ್ಬರ ಜೋರಾಗುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಕೆಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದ ತಾಪಮಾನದ ಬಗ್ಗೆ ಹೇಳುವುದಾದರೆ, ಇಂದು ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನವು 23 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಲಿದೆ ಎಂದು ಅಂದಾಜಿಸಲಾಗಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಇಂದಿನಿಂದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಪ್ರಮುಖವಾಗಿ ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು ಈ ಐದು ಜಿಲ್ಲೆಗಳಲ್ಲಿಂದು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.

ಮಲೆನಾಡು ಭಾಗದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಮಲೆನಾಡು ಭಾಗದಲ್ಲಿ ಇಂದು ಪ್ರಕೃತಿಯ ಮುನಿಸು ಮುಂದುವರಿಯಲಿದೆ. ಈ ನಡುವೆ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಅದರಲ್ಲೂ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆಯು ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಪ್ರವಾಸಿಗರಿಗೆ ಪ್ರಮುಖ ಸೂಚನೆ

ಘಾಟ್‌ ಸೆಕ್ಷನ್‌ ಹಾಗೂ ಮಲೆನಾಡಿನ ಗುಡ್ಡಗಾಡು ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಅತ್ಯಂತ ಜಾಗರೂಕರಾಗಿರಬೇಕು. ದಾರಿಯುದ್ದಕ್ಕೂ ಮಂಜು ಕವಿಯುವಿಕೆ ಅಥವಾ ಭೂಕುಸಿತದ ಸಾಧ್ಯತೆಗಳು ಇರುವುದರಿಂದ ನಿಧಾನವಾಗಿ ಸಂಚಾರ ಮಾಡುವಂತೆ ಸೂಚನೆ ನೀಡಲಾಗಿದೆ.

ಕರಾವಳಿ ತೀರದ ಮೀನುಗಾರರಿಗೆ ಎಚ್ಚರಿಕೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಕರಾವಳಿ ಭಾಗದಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಇಲ್ಲಿ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಬಹುದು. ತೀರ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದೆ. ಆದ್ದರಿಂದ ಮೀನುಗಾರರು ಸದ್ಯಕ್ಕೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಜೂನ್ 22ರ ನಂತರ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಚುರುಕುಗೊಳ್ಳಲಿದ್ದು, ಮುಂದಿನ ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಮುಂದುವರೆದ ಒಣಹವೆ

ಮಲೆನಾಡು ಮತ್ತು ದಕ್ಷಿಣ ಒಳನಾಡಿಗೆ ಹೋಲಿಸಿದರೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಾನ್ಸೂನ್ ಸಂಪೂರ್ಣ ಕ್ಷೀಣಿಸಿದೆ. ಕಲಬುರಗಿ, ಬೆಳಗಾವಿ, ಬೀದರ್, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಇಂದು ಯಾವುದೇ ಭಾರಿ ಮಳೆಯ ಮುನ್ಸೂಚನೆ ಇಲ್ಲ. ಬದಲಿಗೆ ಒಣಹವೆ ವಾತಾವರವೇ ಮುಂದುವರೆಯಲಿದೆ ಎಂದು ತಿಳಿಸಿದೆ. ಕಲಬುರಗಿ ಸೇರಿದಂತೆ ಈ ಭಾಗದ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 33ರಿಂದ 35 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆಯಿದೆ. ಪರಿಣಾಮ ಸೆಖೆಯ ವಾತಾವರಣ ಹೆಚ್ಚಿರಲಿದೆ. ಕೆಲವು ಕಡೆಗಳಲ್ಲಿ ಹಗುರವಾದ ತುಂತುರು ಮಳೆಯಾದರೂ, ಅದು ಸೆಖೆಯಿಂದ ಮುಕ್ತಿ ನೀಡುವಷ್ಟು ಇರುವುದಿಲ್ಲ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+