Karnataka Weather Update: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ, ಐಎಂಡಿ ಮುನ್ಸೂಚನೆ ಏನಿದೆ ?

Karnataka Weather Update: ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರದ ಅವಧಿಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ಹಿಮ್ಮೆಟ್ಟುವಿಕೆಯು 27.5°N/86.5°E, ಸುಪೌಲ್, ರಾಂಚಿ, ರಾಯಪುರ, ಬ್ರಹ್ಮಪುರಿ, ಪರಭಣಿ, ಬಾರಾಮತಿ, ಹರ್ನೈ ಮತ್ತು 17.5°N/71.8°E ಮೂಲಕ ಹಾದುಹೋಗುವುದನ್ನು ಮುಂದುವರಿಸಿದೆ. ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ, ಉತ್ತರ ಉಪ-ಹಿಮಾಲಯದ ಪಶ್ಚಿಮ ಬಂಗಾಳದಿಂದ ಬಿಹಾರ, ಜಾರ್ಖಂಡ್, ವಿದರ್ಭ ಮತ್ತು ಮರಾಠವಾಡದ ಮೂಲಕ ಮಧ್ಯ ಮಹಾರಾಷ್ಟ್ರದವರೆಗೆ ವಿಸ್ತರಿಸಿರುವ 'ಟ್ರಫ್' (ಕಡಿಮೆ ಒತ್ತಡದ ವಲಯದ ಪಟ್ಟಿ) ಮುಂದುವರಿದಿದೆ.

Karnataka Weather Update Heavy Rain Bengaluru Several Parts of State What IMD Forecast Say

ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ, ದಕ್ಷಿಣ ಕೇರಳ ಕರಾವಳಿಯ ಆಚೆಗಿನ ಆಗ್ನೆಯ ಅರೇಬಿಯನ್ ಸಮುದ್ರದ ಮೇಲೆ ಮೇಲ್ಮ ವಾಯುಭಾರ ಕುಸಿತದ ಸುಳಿಗಾಳಿ (cyclonic circulation) ಮುಂದುವರಿದಿದೆ. ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ, ಉತ್ತರ ತಮಿಳುನಾಡಿನ ಮೇಲೆ ಮೇಲೆ ವಾಯುಭಾರ ಕುಸಿತದ ಸುಳಿಗಾಳಿ ಮುಂದುವರಿದಿದೆ. ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ, ಮನ್ನಾರ್ ಕೊಲ್ಲಿಯಿಂದ ತಮಿಳುನಾಡು ಮತ್ತು ಕರ್ನಾಟಕದ ಒಳನಾಡಿನ ಮೂಲಕ ಮಧ್ಯ ಮಹಾರಾಷ್ಟ್ರದವರೆಗೆ ವಿಸ್ತರಿಸಿರುವ ಟ್ರಫ್ ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಸೇರಿದಂತೆ ವಿವಿಧೆಡೆ ಮಳೆ ಆಗುತ್ತಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇನ್ನು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಮಿಂಚು - ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೆಲವೆಡೆ ಮಿಂಚು - ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Karnataka Weather Update: ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ ?

ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಕರ್ನಾಟಕದ ಕಲಬುರಗಿಯಲ್ಲಿ 36.6 ಡಿಗ್ರಿ ಸೆಲ್ಸಿಯಸ್‌ನಷ್ಟು ಗರಿಷ್ಠ ತಾಪಮಾನವನ್ನು ದಾಖಲಿಸಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ವಿಜಯಪುರ ಮತ್ತು ಬೆಳಗಾವಿ ವಿಮಾನ ನಿಲ್ದಾಣ ಪ್ರದೇಶದಲ್ಲಿ 19 ಡಿಗ್ರಿ ಸೆಲ್ಸಿಯಸ್‌ನಷ್ಟು ಅತ್ಯಂತ ಕಡಿಮೆ / ಕನಿಷ್ಠ ತಾಪಮಾನ ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+