Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

Karnataka Weather: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಎರಡು ದಿನಕಾಲ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ರಾಜ್ಯಾದ್ಯಂತ ಒಂದೇ ರೀತಿಯ ಹವಾಮಾನ ವಾತಾವರಣ ಕಂಡುಬರುತ್ತಿಲ್ಲ. ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 25ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವು ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

Karnataka Weather Update Heavy Rain Forecast In These districts for including Bengaluru for 2 Days

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳ ಹವಾಮಾನದ ವಿವರ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಲಘುವಾಗಿ ಮಳೆ ಸುರಿಯಬಹುದು. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆಯೇ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಹವಾಮಾನ ಹೇಗಿರಲಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಉತ್ತರ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?

ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣಹವೆ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಸೋಮವಾರ ಈ ಭಾಗಗಳಲ್ಲಿ ಮಳೆ ಮುನ್ಸೂಚನೆ

ಅದರಲ್ಲೂ ಸೋಮವಾರ (ಅಕ್ಟೋಬರ್ 26) ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಕೋಲಾರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲೂ ಇದೇ ರೀತಿಯ ವಾತಾವರಣ ಇರಲಿದೆ. ಆದರೆ ಒಳನಾಡಿನಲ್ಲಿ ಒಣಹವೆ ಇರಲಿದ್ದು, ಕೆಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಜೋರು ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಸಾರ್ವಜನಿಕರಿಗೆ ಮಹತ್ವದ ಸಲಹೆಗಳು

ಮಳೆಯ ಜೊತೆಗೆ ಗುಡುಗು ಮತ್ತು ಸಿಡಿಲು ಇರುವುದರಿಂದ ಸಾರ್ವಜನಿಕರು ಮರಗಳ ಕೆಳಗೆ ನಿಲ್ಲದೆ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ವಾಹನ ಸವಾರರು ಜಾರುವ ರಸ್ತೆಗಳ ಮೇಲೆ ಎಚ್ಚರಿಕೆಯಿಂದ ವಾಹನ ಚಲಾಯಿಸುವುದು ಅಗತ್ಯ. ಹವಾಮಾನ ವೈಪರೀತ್ಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸ್ಥಳೀಯ ಹವಾಮಾನ ವರದಿಗಳನ್ನು ಗಮನಿಸುವುದು ಸೂಕ್ತ ಎಂದು ಹೇಳಲಾಗಿದೆ.

ಅಲ್ಲದೆ ಭಾರಿ ಮಳೆಯಾಗುವ ಸಂದರ್ಭದಲ್ಲಿ ಸಾಧ್ಯವಾದಷ್ಟು ಮನೆಯಲ್ಲೇ ಇರಿ. ಅನಿವಾರ್ಯವಾಗಿ ಹೊರಗೆ ಹೋಗಬೇಕಾದರೆ ರಸ್ತೆ ಪರಿಸ್ಥಿತಿ ಹಾಗೂ ಹವಾಮಾನ ಮುನ್ಸೂಚನೆಯನ್ನು ಪರಿಶೀಲಿಸಿ. ನೀರು ತುಂಬಿರುವ ರಸ್ತೆಗಳು ಮತ್ತು ಸೇತುವೆಗಳ ಮೇಲೆ ಸಂಚರಿಸಬೇಡಿ.

ಮನೆಗೆ ನೀರು ನುಗ್ಗುವ ಸಾಧ್ಯತೆಯಿದ್ದರೆ ಸುರಕ್ಷಿತವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ. ಒದ್ದೆಯಾದ ಕೈಗಳಿಂದ ಸ್ವಿಚ್‌ಗಳು, ಪ್ಲಗ್‌ಗಳು ಅಥವಾ ವಿದ್ಯುತ್ ಉಪಕರಣಗಳನ್ನು ಮುಟ್ಟಬೇಡಿ. ವಿದ್ಯುತ್ ತಂತಿಗಳು ಬಿದ್ದಿರುವುದನ್ನು ಕಂಡರೆ ಅವುಗಳ ಸಮೀಪ ಹೋಗದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ.

ಮಿಂಚು, ಗುಡುಗು ಸಂದರ್ಭದಲ್ಲಿ ಬಯಲು ಪ್ರದೇಶ, ಎತ್ತರದ ಮರಗಳು, ವಿದ್ಯುತ್ ಕಂಬಗಳು ಹಾಗೂ ಲೋಹದ ರಚನೆಗಳ ಕೆಳಗೆ ಆಶ್ರಯ ಪಡೆಯಬೇಡಿ. ಸಾಧ್ಯವಾದಷ್ಟು ಗಟ್ಟಿಯಾದ ಕಟ್ಟಡದ ಒಳಗೆ ಇರಿ. ತೆರೆದ ಮೈದಾನದಲ್ಲಿದ್ದರೆ ತಕ್ಷಣ ಸುರಕ್ಷಿತ ಆಶ್ರಯ ಪಡೆಯಲು ಪ್ರಯತ್ನಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+