Karnataka Weather Update: ಭಾರೀ ಮಳೆ: ಈ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ, ಅ.28ರ ವರೆಗೆ ವರ್ಷಧಾರೆ
Karnataka Weather Update: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಹಿಂಗಾರು ಮಳೆಯ ಪ್ರಭಾವ ಹಾಗೂ ವಾಯುವ್ಯ ಚಂಡಮಾರುತ ಪರಿಚಲನೆಯ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಅಕ್ಟೋಬರ್ 28ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮೈಸೂರು ಸೇರಿದಂತೆ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಅಂಡಮಾನ್ ದ್ವೀಪಗಳ ಬಳಿಯ ಉತ್ತರ ಅಂಡಮಾನ್ ಸಮುದ್ರದ ಮೇಲೆ ಉಂಟಾದ ಮೇಲ್ಭಾಗದ ವಾಯುವ್ಯ ಚಂಡಮಾರುತವು ಪಶ್ಚಿಮಕ್ಕೆ ವಾಯುವ್ಯಕ್ಕೆ ಚಲಿಸಿ ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ದ್ವೀಪಗಳ ಮೇಲೆ ನೆಲೆಸಿದೆ. ಇದು ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಮತ್ತು ಅದರ ಪ್ರಭಾವದ ಅಡಿಯಲ್ಲಿ ಅಕ್ಟೋಬರ್ 23ರ ಶುಕ್ರವಾರದಂದು ಆಗ್ನೇಯ ಮತ್ತು ಪಕ್ಕದ ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ನಂತರ ಅದು ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಮತ್ತು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.

ಸೊಮಾಲಿಯಾ ಕರಾವಳಿಯ ನೈಋತ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ಮುಂದುವರೆದಿದೆ. ಸಂಬಂಧಿತ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿ.ಮೀ ವರೆಗೆ ವಿಸ್ತರಿಸಿದ್ದು, ಇದು ಸೊಮಾಲಿಯಾ ಕರಾವಳಿಯ ಕಡೆಗೆ ಕಡಿಮೆ ಒತ್ತಡದ ಪ್ರದೇಶವಾಗಿ ಪಶ್ಚಿಮಕ್ಕೆ ಚಲಿಸುವ ಸಾಧ್ಯತೆಯಿದೆ.
ನೈಋತ್ಯ ಬಂಗಾಳ ಕೊಲ್ಲಿ ಮತ್ತು ತಮಿಳುನಾಡು, ಉತ್ತರ ಶ್ರೀಲಂಕಾ ಮತ್ತು ಮನ್ನಾರ್ ಕೊಲ್ಲಿಯ ಪಕ್ಕದ ಪ್ರದೇಶಗಳ ಮೇಲೆ ಇರುವ ಕಡಿಮೆ ಒತ್ತಡದ ಪ್ರದೇಶವು ಕೊಮೊರಿನ್ ಪ್ರದೇಶ ಮತ್ತು ದಕ್ಷಿಣ ತಮಿಳುನಾಡು ಮತ್ತು ಕೇರಳದ ಪಕ್ಕದ ಪ್ರದೇಶಗಳಲ್ಲಿ ನೆಲೆಸಿದೆ. ಸಂಬಂಧಿತ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟಕ್ಕಿಂತ 5.8 ಕಿ.ಮೀ ವರೆಗೆ ವಿಸ್ತರಿಸಿದೆ. ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 1.5 ಕಿ.ಮೀ ವರೆಗೆ ವಿಸ್ತರಿಸಿರುವ ಮೇಲ್ಬಾಗದ ವಾಯು ಚಂಡಮಾರುತದ ಪರಿಚಲನೆಯು ಮೇಲಿನ ವ್ಯವಸ್ಥೆಯೊಂದಿಗೆ ವಿಲೀನಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
Karnataka Weather Update:5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮಳೆ ಆರ್ಭಟ ಇರಲಿದೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಾದ್ಯಂತ ಅಕ್ಟೋಬರ್ 28ರ ವರೆಗೆ ಅಂದರೆ ಮುಂದಿನ ಐದು ದಿನಗಳ ವರೆಗೆ ಮಳೆ ಆರ್ಭಟ ಇರಲಿದೆ. ಅಕ್ಟೋಬರ್ 25ರ ನಂತರ ಮಳೆ ಆರ್ಭಟ ಇನ್ನಷ್ಟು ಜೋರಾಗಲಿದೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಶುಕ್ರವಾರ ಮಳೆ ಆಗಲಿದೆ. ಆದರೆ, ಅಕ್ಟೋಬರ್ 25ರ ನಂತರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಇರಲಿದೆ. ಇದರೊಂದಿಗೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆ ಆಗಲಿದ್ದು, ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 28ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಮುಖ್ಯವಾಗಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ತುಮಕೂರು ಭಾಗದಲ್ಲೂ ಮಳೆ ಇರಲಿದೆ.


Click it and Unblock the Notifications
