ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದ ಈ ಜಿಲ್ಲೆಗಳಲ್ಲಿ ಗಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ
Karnataka Rains: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದಲ್ಲಿ ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆ ಆಗಿದೆ. ಬಹುತೇಕ ಕಡೆಗಳಲ್ಲಿ ಬಿಸಿಲು ಮತ್ತು ಮೋಡ ಮುಸುಕಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ಅಥವಾ ರಾತ್ರಿ ವೇಳೆ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅಕ್ಟೋಬರ್ ಕೊನೆಯ ವೇಳೆಗೆ ರಾಜ್ಯಾದ್ಯಂತ ಒಣಹವೆ ಹೆಚ್ಚಾಗಲಿದ್ದು, ನವೆಂಬರ್ ಆರಂಭದಲ್ಲಿ ಮತ್ತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡು ಭಾಗದ ಹವಾಮಾನದ ವಿವರ
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಗಡಿ ಪ್ರದೇಶಗಳಲ್ಲಿ ಬಿಸಿಲು ಮತ್ತು ಮೋಡ ವಾತಾವರಣ ನಿರ್ಮಾಣವಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಕೆಲವು ದಿನ ಸಂಪೂರ್ಣ ಒಣಹವೆ ಇರಲಿದೆ. ಕರಾವಳಿಯಲ್ಲಿ ಮಳೆ ತಗ್ಗಿರುವ ಕಾರಣ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಮಲೆನಾಡಿನ ಭಾಗದಲ್ಲಿ ಎಲ್ಲೆಲ್ಲಿ ಮಳೆ?
ಮಲೆನಾಡಿನ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲ ಜೊತೆಗೆ ಮೋಡ ಕವಿದ ವಾತಾವರಣ ಇರಲಿದೆ. ಕೊಡಗಿನ ಗಡಿ ಭಾಗಗಳಲ್ಲಿ ಒಂದೆರಡು ಕಡೆ ಸಂಜೆ ಮಳೆಯಾಗಬಹುದು. ಈ ಭಾಗಗಳಲ್ಲಿ ಅಕ್ಟೋಬರ್ ಅಂತ್ಯದವರೆಗೆ ಒಣಹವೆಯೇ ಹೆಚ್ಚಿರಲಿದ್ದು, ನವೆಂಬರ್ ಮೊದಲ ವಾರದಲ್ಲಿ ಮಳೆ ಮತ್ತೆ ಚುರುಕಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲ ದಿನ ಒಣಹವೆ ಇರಲಿದೆ. ಆದರೆ ಬಾಗಲಕೋಟೆ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ತಿಂಗಳ ಕೊನೆಯ ದಿನಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮೈಸೂರು, ಚಾಮರಾಜನಗರ ಹಾಗೂ ರಾಮನಗರ, ಬೆಂಗಳೂರು ಮತ್ತು ಕೋಲಾರದ ತಮಿಳುನಾಡು ಗಡಿ ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಚದುರಿದಂತೆ ಅಲ್ಲಲ್ಲಿ ಮಳೆಯಾಗಬಹುದು. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಮತ್ತು ಕೋಲಾರದಲ್ಲಿ ಅಕ್ಟೋಬರ್ 27ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 28ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ನವೆಂಬರ್ 1ರಂದು ಮತ್ತೆ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ಚಂಡಮಾರುತವಾಗಿ ಮಾರ್ಪಡುವ ಲಕ್ಷಣಗಳಿವೆ. ಅಕ್ಟೋಬರ್ 27ರ ವೇಳೆಗೆ ಚಂಡಮಾರುತವಾಗಿ ಮಾರ್ಪಟ್ಟು, ಅಕ್ಟೋಬರ್ 28ರ ಸುಮಾರಿಗೆ ಆಂಧ್ರಪ್ರದೇಶದ ಕರಾವಳಿ ತಲುಪುವ ಅಂದಾಜಿದೆ. ಇದರಿಂದಾಗಿ ಆಂಧ್ರಪ್ರದೇಶ ಹಾಗೂ ಗಡಿ ಭಾಗಗಳಲ್ಲಿ ಭಾರಿ ಮಳೆ ಮತ್ತು ಗಾಳಿ ಬೀಸಲಿದೆ. ಆದರೆ ಇದರಿಂದ ಕರ್ನಾಟಕದ ಮೇಲೆ ನವೆಂಬರ್ ಆರಂಭದಲ್ಲಿ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬ ಮಾಹಿತಿ ತಿಳಿದುಬರಬೇಕಿದೆ. ಪ್ರಸ್ತುತ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ದಕ್ಷಿಣ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆಯ ಮುನ್ಸೂಚನೆ ಇದೆ.


Click it and Unblock the Notifications
