Karnataka Weather: ಚುಮುಚುಮು ಚಳಿ ನಡುವೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ
Karnataka Weather: ರಾಜ್ಯದ ಬಹುತೇಕ ಭಾಗಗಳಲ್ಲಿ ಶೀತಗಾಳಿ ಬೀಸುತ್ತಿದೆ. ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತ ಪರಿಣಾಮ ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಜನವರಿ 12) ಬೆಳಗ್ಗೆ ದಟ್ಟ ಮಂಜು, ಚಳಿ ವಾತಾವರಣ ಇದೆ. ಆದರೆ, ಭಾನುವಾರಕ್ಕೆ ಹೋಲಿಕೆ ಮಾಡಿದರೆ, ನಗರದಲ್ಲಿಂದು ಚಳಿ ಪ್ರಮಾಣ ಕಡಿಮೆಯಾಗಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಇಲ್ಲಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?: ವಾಯುಭಾರತ ಕುಸಿತ ಪರಿಣಾಮ ಜನವರಿ 14ರ ವರೆಗೂ ಚುಮುಚುಮು ಚಳಿ ನಡುವೆಯೂ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡು ಜಿಲ್ಲೆಗಳ ಹವಾಮಾನ: ಮಂಡ್ಯ, ಮೈಸೂರು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಚಳಿ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ದಟ್ಟ ಮಂಜಿನ ಜೊತೆ ಭಾರೀ ಶೀತಗಾಳಿ ಮುಂದುವರೆಯಲಿದೆ. ಉಳಿದಂತೆ ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಮಾನ್ಯ ಶೀತಗಾಳಿ ಬೀಸಲಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ಈ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ಇನ್ನೂ ಕರವಾಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲೂ ಸಹ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಭಾರೀ ಚಳಿಗಾಳಿ ಜೊತೆ ಬೆಂಗಳೂರಿನ ಹಲವೆಡೆ ಮಳೆ ಸುರಿದಿರುವ ಬಗ್ಗೆ ವರದಿ ಆಗಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಇಳಿಕೆಯಾಗಿದೆ. ಹಗಲಿನ ವೇಳೆಯಲ್ಲೂ ತಾಪಮಾನ ಕುಸಿತ ಆಗದ್ದು, ಮೋಡ ಮುಸಕಿದ ವಾತಾವರಣ ನಿರ್ಮಾಣ ಮುಂದುವರೆದಿದೆ.
ಬಂಗಾಳಕೊಲ್ಲಿಯ ನೈಋತ್ಯ ಭಾಗ ಮತ್ತು ಅದಕ್ಕೆ ಹೊಂದಿಕೊಂಡ ಹಿಂದೂ ಮಹಾಸಾಗರ ಪ್ರದೇಶಗಳಲ್ಲಿ ಅಬ್ಧಿಯ ಪರಿಸ್ಥಿತಿ ಅತಿ ಪ್ರಕ್ಷುಬ್ಧವಾಗುವ ಸಾಧ್ಯತೆ ಇದ್ದು, ತಮಿಳುನಾಡಿನ ಕೆಲ ಕಡೆಗಳಲ್ಲಿ ಗಾಳಿ ಗಂಟೆಗೆ 35-45 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಇದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇನ್ನೂ ಇದರ ಪರಿಣಾಮ ಕರ್ನಾಟಕ ದಹಲವು ಜಿಲ್ಲೆಗಳ ಮೇಳೆ ಬೀರುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications