Karnataka Weather: ಕರ್ನಾಟಕದಲ್ಲಿ ಮುಂದಿನ 3 ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಅಲ್ಪ ಇಳಿಕೆ: ಐಎಂಡಿ
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬುಧವಾರವೂ ಬಹುತೇಕ ಒಣಹವೆ ಮುಂದುವರಿದಿದೆ. ಇನ್ನು ಮೂರರಿಂದ ಐದು ದಿನಗಳ ವರೆಗೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ದಕ್ಷಿಣ ಕೇರಳದಿಂದ ದಕ್ಷಿಣ ಕರ್ನಾಟಕದ ಕರಾವಳಿಯ ಪೂರ್ವಕ್ಕೆ ಇರುವ ಟ್ರಫ್ ಪ್ರದೇಶವು ಈಗ ಲಕ್ಷದ್ವೀಪ ಮತ್ತು ಅದಕ್ಕೆ ಹೊಂದಿಕೊಂಡ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆಯಾಗಿ ಬದಲಾಗಿದೆ. ದಕ್ಷಿಣ ಕೇರಳದಿಂದ ಕರ್ನಾಟಕದ ಕರಾವಳಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 15 ಕಿ.ಮೀ ಎತ್ತರದಲ್ಲಿ ಒಂದು ಟ್ರಫ್ ಸಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ. ಇನ್ನು ಕಳೆದ 24 ಗಂಟೆಗಳಲ್ಲಿ, ಉತ್ತರ ಒಳನಾಡಿನ ಧಾರವಾಡ ಮತ್ತು ದಕ್ಷಿಣ ಒಳನಾಡಿನ ಚಿಂತಾಮಣಿಯಲ್ಲಿ ತಾಪಮಾನವು ಗಮನಾರ್ಹವಾಗಿ ಏರಿಕೆಯಾಗಿದೆ. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿಲ್ಲ.

3 ದಿನ ಹವಾಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ
ಇನ್ನು ಮುಂದಿನ ಮೂರು ದಿನಗಳ ಅವಧಿಯ ವರೆಗೆ ರಾಜ್ಯದ ಹವಾಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ. ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬಹುತೇಕ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
Karnataka Weather: ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ
ಮುಂದಿನ 24 ಗಂಟೆ ಅವಧಿ: ಮುಂದಿನ 24 ಗಂಟೆ ಅವಧಿಯಲ್ಲಿ ಬೆಂಗಳೂರಿನಲ್ಲಿ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು. ಕೆಲವು ಪ್ರದೇಶಗಳಲ್ಲಿ ಮುಂಜಾನೆ ಸಮಯದಲ್ಲಿ ದಟ್ಟವಾದ ಮಂಜು / ಮಂಜು ಕವಿದಿರುವ ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆ ಅವಧಿ: ಇನ್ನು ಮುಂದಿನ 48 ಗಂಟೆಯ ಅವಧಿಯಲ್ಲಿ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಮುಂಜಾನೆ ಸಮಯದಲ್ಲಿ ದಟ್ಟವಾದ ಮಂಜು ಕವಿಯುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದ ಸಮತಟ್ಟಾದ ಪ್ರದೇಶ ವಿಜಯಪುರದಲ್ಲಿ ಕನಿಷ್ಠ ತಾಪಮಾನವು 14ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ (-1.6 ಡಿಗ್ರಿ ಸೆಲ್ಸಿಯಸ್‌ನಿಂದ 3ಡಿಗ್ರಿ ಸೆಲ್ಸಿಯಸ್) ಇತ್ತು. ಆದರೆ ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ (3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ನಿಂದ) ಹೆಚ್ಚಾಗಿತ್ತು. ಕರಾವಳಿ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3.0 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿತ್ತು. ಇನ್ನುಳಿದ ಸ್ಥಳಗಳಲ್ಲಿ ಹವಾಮಾನ ಸಾಮಾನ್ಯವಾಗಿತ್ತು.
ದಕ್ಷಿಣ ಒಳನಾಡಿನ ಹಾಸನದಲ್ಲಿ ಕನಿಷ್ಠ ತಾಪಮಾನ 12.3 ಡಿಗ್ರಿ ಸೆಲ್ಸಿಯಸ್ ಇತ್ತು. ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ವಿಜಯಪುರ, ಹಾವೇರಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಬೆಂಗಳೂರು ನಗರ, ದಾವಣಗೆರೆ, ಚಿಂತಾಮಣಿ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು 14ರಿಂದ 17 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿತ್ತು. ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣ, ಕಲಬುರಗಿ, ಕೊಪ್ಪಳ, ರಾಯಚೂರು, ದಕ್ಷಿಣ ಒಳನಾಡಿನ ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣ, ಕರಾವಳಿ ಕರ್ನಾಟಕದ ಶಕ್ತಿನಗರದಲ್ಲಿ 21.8 ಡಿಗ್ರಿ ಸೆಲ್ಸಿಯಸ್‌ನಿಂದ 23.5 ಡಿಗ್ರಿ ಸೆಲ್ಸಿಯಸ್ ಹವಾಮಾನ ದಾಖಲಾಗಿದೆ.












Click it and Unblock the Notifications