Karnataka Weather: ಕರ್ನಾಟಕಕ್ಕೆ ಸದ್ಯ ಯಾವ್ ಚಂಡಮಾರುತದ ಎಫೆಕ್ಟೂ ಇಲ್ಲ, ಮಳೆಯೂ ಇಲ್ಲ: ಹವಾಮಾನ ಇಲಾಖೆ ಹೇಳೋದೇನು?

Karnataka Weather: ರಾಜ್ಯದ ಕೆಳದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಪ್ರಮಾಣ ಸಂಪೂರ್ಣ ತಗ್ಗಿದೆ. ಮುರುಸು ಚಂಡಮಾರುತದ ಪರಿಣಾಮ ಹಲವು ದಿನಗಳವರೆಗೆ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲಿ ವಾತಾವರಣ ಹೇಗಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಪ್ರಮಾಣದಲ್ಲಿ ಈಗ ಗಮನಾರ್ಹ ಇಳಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಒಣ ಹವಾಮಾನವೇ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ವಾರದಿಂದ ವಾತಾವರಣದಲ್ಲಿ ಸ್ಪಷ್ಟ ಬದಲಾವಣೆಗಳು ಕಂಡುಬರಲಿದ್ದು, ರಾಜ್ಯಾದ್ಯಂತ ಚಳಿಯ ವಾತಾವರಣ ಆವರಿಸಿಕೊಳ್ಳುವ ಲಕ್ಷಣಗಳಿವೆ. ಈ ನಡುವೆಯೇ ಮುರುಸು ಚಂಡಮಾರುತದ ಪರಿಣಾಮದಿಂದಾಗಿ ಕೆಲವೇ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Karnataka Weather Update Rain to Ease Dry Conditions Likely Cyclone Murusu May Bring Light Shower

ರಾಜ್ಯದ ನವೆಂಬರ್ ಹವಾಮಾನದ ವಿವರ

ಸಾಮಾನ್ಯವಾಗಿ ರಾಜ್ಯದ ಹಲವು ಭಾಗಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಬೆಳಗಿನ ಜಾವ ಸಾಧಾರಣ ಪ್ರಮಾಣದ ಮಂಜು ಮುಸುಕಲಿದ್ದು, ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 20 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಹವಾಮಾನ

ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಸ್ವಲ್ಪ ಮಟ್ಟಿಗೆ ಏರಿಕೆಯಾಗಲಿದ್ದು, ಒಣಹವೆ ವಾತಾವರಣ ಮುಂದುವರೆಯಲಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಕೊಂಚ ಹೆಚ್ಚಾಗಿದ್ದರೂ, ಮೀನುಗಾರರಿಗೆ ಯಾವುದೇ ವಿಶೇಷ ಮುನ್ನೆಚ್ಚರಿಕೆ ಅಥವಾ ನಿಷೇಧ ವಿಧಿಸಲಾಗಿಲ್ಲ.

ಮಲೆನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಸಂಜೆಯ ವೇಳೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮದಿಂದ ಮಳೆಯಾಗಬಹುದು. ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಒಣಹವೆ ಮುಂದುವರೆಯಲಿದೆ. ಹವಾಮಾನ ಇಲಾಖೆ ವರದಿಯ ಪ್ರಕಾರ, ನವೆಂಬರ್ 9ರ ನಂತರ ರಾಜ್ಯದ ಬಹುತೇಕ ಭಾಗಗಳಲ್ಲಿ ಯಾವುದೇ ಮಳೆಯ ಇರುವುದಿಲ್ಲ, ಬದಲಾಗಿ ಭೀಕರ ಚಳಿ ವಾತವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+