Karnataka Weather: ಮುಂಗಾರು ವೇಳೆಯೇ ನೆತ್ತಿ ಸುಡುತ್ತಿದೆ ಬಿಸಿಲು, ಕರ್ನಾಟಕದ ಜನತೆಗೆ ಹವಾಮಾನ ಇಲಾಖೆ ಎಚ್ಚರಿಕೆ ಮುನ್ಸೂಚನೆ

Karnataka Weather: ಇದು ಮುಂಗಾರು ಸಮಯ ಆಗಿದ್ದರೂ ಸಹ ರಾಜ್ಯದಲ್ಲಿ ಮಳೆ ಕ್ಷೀಣಿಸಿದೆ. ಹಾಗೆಯೇ ಮುಂದಿನ ಕೆಲವು ದಿನಗಳವರೆಗೆ ಬಹುತೇಕ ಜಿಲ್ಲೆಗಳಿಗೆ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ. ಬದಲಿಗೆ ಬಿಸಿಲಿನ ಪ್ರಮಾಣ ಹೆಚ್ಚಾಗಲಿದೆ. ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನ ಕೆಲವೆಡೆ ಸೋಮವಾರ (ಜುಲೈ 14) ಬೆಳಗ್ಗೆಯೇ ಸೂರ್ಯ ದರ್ಶನ ಕೊಟ್ಟಿದ್ದಾನೆ. ನಗರದಲ್ಲಿ ಇಡೀ ದಿನ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲವು ದಿನಗಳಿಂದ ಇಲ್ಲಿ ಮಳೆಯೇ ಇಲ್ಲದಂತಾಗಿದೆ. ತಾಪಮಾನ ಪ್ರಮಾಣ ಮಾತ್ರ ಏರಿಕೆಯಾಗುತ್ತಲಿದೆ.

Karnataka Weather Update Rain Weakens Across State IMD Predicts Dry Spell and Rising Temperatures

ಬೆಂಗಳೂರಿನಲ್ಲಿ ಬಿಸಿಲಿನ ವಾತಾವರಣ ಕಂಟಿನ್ಯೂ

ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆಯೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಮುನ್ಸೂಚನೆ ಇದೆ.

ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ

ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿತ್ತು. ಆದರೆ ಒಂದು ವಾರದಿಂದ ಕೆಲವೆಡೆ ಅಲ್ಲಲ್ಲಿ ಮಾತ್ರ ತುಂತುರು ಮಳೆಯಾಗುತ್ತಿದೆ. ಮುಂದಿನ ಕೆಲ ದಿನಗಳ ಕಾಲ ಇದು ಕೂಡ ಇರುವುದಿಲ್ಲ, ಒಳಹವೆ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿತ್ತು. ಆದರೆ ಇದೀಗ ಇಲ್ಲಿನ ಬಹುತೇಕ ಭಾಗಗಳಲ್ಲಿ ಕೆಲವು ದಿನಗಳವರೆಗೆ ಯಾವುದೇ ಮಳೆಯ ಮುನ್ಸೂಚನೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಳಿದಂತೆ ದಕ್ಷಿಣ ಒಳನಾಡಿದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ರಾಮನಗರ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಗದಗ, ಧಾರವಾಡ ಜಿಲ್ಲೆಗಳಲ್ಲೂ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಈಗಾಗಲೇ ಕೆಲವೆಡೆ ಸುರಿದ ಭಾರಿ ಮಳೆಯಿಂದಾಗಿ ಪ್ರಮುಖ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿತ್ತು. ಆದರೆ ಇದೀಗ ಮತ್ತೆ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಡ್ಯಾಂಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಲಿದೆ. ಇದರಿಂದ ಜನರಲ್ಲಿ ಆತಂಕ ಶುರುವಾಗಿದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮತ್ತೆ ಕೈಕೊಟ್ಟಿದ್ದು, ಕೃಷಿಕರು, ಜನರಲ್ಲಿ ಆತಂಕ ಮನೆ ಮಾಡಿದೆ. ಈಗಲೇ ಹೀಗೆ ಆದ್ರೆ ಇನ್ನೂ ಮುಂಗಾರು ಅವಧಿ ಮುಗಿದ ಮೇಲೆ ಇನ್ನೇನು ಗತಿ ಕಾದಿದೆಯೋ ಎನ್ನುವ ಆತಂಕದಲ್ಲಿದ್ದಾರೆ. ಈ ನಡುವೆಯೇ ಹವಾಮಾನ ಇಲಾಖೆ ಆತಂಕದ ವಿಚಾರ ಹೊರಹಾಕಿದ್ದು, ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಮಳೆಯ ಪ್ರಮಾಣ ಕಡಿಮೆ ಇರಲಿದೆ ಎಂದು ಮುನ್ಸೂಚನೆ ನೀಡಿದೆ.

ಇಷ್ಟೊತ್ತಿಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಬೇಕಿತ್ತು. ಆದರೆ ಈ ವಾಡಿಕೆಯಷ್ಟು ಕೂಡ ಮಳೆ ಸುರಿಯುತ್ತಿಲ್ಲ. ಇದು ಚಿಂತೆಗೆ ಒಳಗಾಗುವಂತೆ ಮಾಡಿದೆ. ಒಟ್ಟಿನಲ್ಲಿ ಹೇಳುವುದಾದರೆ ಮಳೆರಾಯನ ಆರ್ಭಟ ಮತ್ತೆ ಯಾವಾಗ ಶುರುವಾಗಲಿದೆಯೋ ಎಂದು ರಾಜ್ಯದ ರೈತರು ಹಾಗೂ ಜನ ಮೋಡದ ಕಡೆ ಮುಖ ಮಾಡಿ ಕಾದು ಕುಳಿತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+