Get Updates
Get notified of breaking news, exclusive insights, and must-see stories!

Karnataka Weather Updates: ಜನವರಿ 30: ಕರ್ನಾಟಕದ ಹವಾಮಾನ ಹೇಗಿದೆ ಇಲ್ಲಿದೆ ಐಎಂಡಿ ರಿಪೋರ್ಟ್

Karnataka Weather Updates: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ರಾಜ್ಯದಲ್ಲಿ ಮುಂಜಾನೆ ಸಮಯದಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಬಿಸಿಲು ಸಣ್ಣಗೆ ಪ್ರಾರಂಭವಾಗಿದೆ. ವಾಯು ಚಂಡಮಾರುತದ ಪರಿಚಲನೆ ಹಾಗೂ ವಾಯುಭಾರ ಕುಸಿತ ಇರುವುದರಿಂದ ಎರಡು ಮೂರು ದಿನಗಳ ನಂತರ ಹವಾಮಾನದಲ್ಲಿ ಬದಲಾವಣೆ ಆಗುವ ಸಾಧ್ಯತೆಯೂ ಇದೆ. ಜನವರಿ 30ರ ಹವಾಮಾನ ವರದಿ ಇಲ್ಲಿದೆ.

ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಇದೆ. ಆಗ್ನೇಯ ಉತ್ತರ ಪ್ರದೇಶದಿಂದ ಕರ್ನಾಟಕದ ಉತ್ತರ ಒಳನಾಡಿನವರೆಗೆ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತ ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿಯು ಉಲ್ಲೇಖಿಸಿದೆ.

Karnataka Weather Updates

ಇನ್ನು ಕಳೆದ 24 ಗಂಟೆಯ ಅವಧಿಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಇತ್ತು. ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು, ಉತ್ತರ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 3.1 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್ ಹೆಚ್ಚು. ಕರ್ನಾಟಕದ ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಂಜು ಕವಿದಿತ್ತು.

ಮುಂದಿನ ಮೂರು ದಿನಗಳ ಹವಾಮಾನ

ಇನ್ನು ಮುಂದಿನ ಮೂರು ದಿನಗಳಲ್ಲಿ ಬೆಂಗಳೂರು ಹಾಗೂ ಕರ್ನಾಟಕದ ಹವಾಮಾನದಲ್ಲಿ ದೊಡ್ಡ ಬದಲಾವಣೆಗಳು ಇಲ್ಲ. ತಾಪಮಾನದ ಪರಿಸ್ಥಿತಿ: ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳು ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಹೇಗಿತ್ತು ಹವಾಮಾನ

ಬೆಂಗಳೂರಿನಲ್ಲಿ ಚಳಿ ಪ್ರಮಾಣವು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಹಾಗೂ 48 ಗಂಟೆಗಳಲ್ಲಿ ಮಹತ್ವದ ಬದಲಾವಣೆಗಳು ಇಲ್ಲ.

ಮುಂದಿನ 24 ಗಂಟೆಗಳ ವರೆಗೆ: ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಅವಧಿಗೆ ಪ್ರಮುಖವಾಗಿ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳ ವರೆಗೆ: ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಅವಧಿಗೆ ಪ್ರಮುಖವಾಗಿ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಇನ್ನು ನೈಜ ಸಮಯದ ದತ್ತಾಂಶದ ಆಧಾರದ ಮೇಲೆ ಕನಿಷ್ಠ ತಾಪಮಾನ, ದಕ್ಷಿಣ ಒಳನಾಡಿನ ಚಿಂತಾಮಣಿಯಲ್ಲಿ ಸಾಮಾನ್ಯಕ್ಕಿಂತ ಕಡಿಮೆ. ಕರಾವಳಿ ಕರ್ನಾಟಕದ ಕಾರವಾರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು. ಉತ್ತರ ಒಳನಾಡಿನ ಕಲಬುರಗಿಯಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚು. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯವಾಗಿತ್ತು ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣದ ಮೇಲೆ ಗಮನಾರ್ಹ ಕುಸಿತ ಕಂಡುಬಂದಿದೆ. ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿಲ್ಲ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಮಂಡ್ಯದ ಎ.ಡಬ್ಲ್ಯೂ.ಎಸ್‌ನಲ್ಲಿ ಕನಿಷ್ಠ ತಾಪಮಾನವು 15.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+