Karnataka Rain: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಬಾರ್ಯದಲ್ಲಿ 106 ಮಿಮೀ ಮಳೆಯಾಗಿದ್ದು ಕಳೆದ 24 ಗಂಟೆಯಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ.

karnataka-weather

ದಕ್ಷಿಣ ಕನ್ನಡ 106 ಮಿಮೀ, ಉಡುಪಿ 68 ಮಿಮೀ, ಚಿಕ್ಕಮಗಳೂರು 57.5 ಮಿಮೀ, ಧಾರವಾಡ 55.5 ಮಿಮೀ, ಉತ್ತರ ಕನ್ನಡ 36.5 ಮಿಮೀ, ಹಾಸನ 31 ಮಿಮೀ, ಚಾಮರಾಜನಗರ 25.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಾರ್ಯದಲ್ಲಿ 106 ಮಿಮೀ, ಉಲಿ 98.5 ಮಿಮೀ, ಬಾಲಿಲ 83.5, ಚೆನ್ನೈತ್ತೋಡಿ 83.5, ಪಿಲಾತಬೆಟ್ಟುವಿನಲ್ಲಿ 79 ಮಿಮೀ ಮಳೆಯಾಗಿದೆ.

ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಉಡುಪಿ, ಬೆಳಗಾವಿ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ತುಮಕೂರು, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ವಿಜಯನಗರದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆ

ಮುಂದಿನ 2 ದಿನ ದೇಶದ ಹಲವು ರಾಜ್ಯಗಲ್ಲಿ ಕೂಡ ಉತ್ತಮ ಮಳೆಯಾಗಲಿದೆ. ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಗಂಗಾನದಿ ಪಶ್ಚಿಮ ಬಂಗಾಳದ ಕೆಲವು ಭಾಗಗಳು, ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಚದುರಿದಂತೆ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ.

ತಮಿಳುನಾಡು, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕೇರಳದ ಮೇಲೆ ಗುಡುಗು ಮತ್ತು ಮಿಂಚಿನ ಜೊತೆಗೆ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

ಅಕ್ಟೋಬರ್ 13ರ ರಾತ್ರಿ ವಾಯುಭಾರ ಕುಸಿತದ ಪರಿಣಾಮ ಪಶ್ಚಿಮ ಭಾಗದಿಂದ ಹಿಮಾಲಯದ ಕಡೆಗೆ ಮತ್ತು ಅಕ್ಟೋಬರ್ 14ರಿಂದ ವಾಯವ್ಯ ಬಾರತದ ಕಡೆಗೆ ಮುಂಗಾರು ಮಳೆ ಪಸರಿಸಲಿದೆ. ಪಶ್ಚಿಮ ಬಂಗಾಳದ ಗಂಗಾ ತಟ, ಒಡಿಶಾದ ಕೆಲವು ಪ್ರದೇಶಗಳಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+