Karnataka Weather: ಈ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ!

ರಾಜ್ಯಾದ್ಯಂತ ಮಳೆ ಕೊರತೆ ಮುಂದುವರೆದಿದ್ದು ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

ಆಗಸ್ಟ್ 22ರಂದು ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆಗಳಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ 54.44 ಮಿಮೀ ಮಳೆಯಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ.

 Karnataka Weather: Widespread Rains Likely Over Many Districts

ರಾಜ್ಯದ ಜಿಲ್ಲಾವಾರು ಮಳೆ ಮುನ್ಸೂಚನೆ

ಚಾಮರಾಜನಗರ, ಕೋಲಾರ, ಹಾಸನ, ಉಡುಪಿ, ತುಮಕೂರು, ಉತ್ತರ ಕನ್ನಡ, ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಹಾವೇರಿ, ಕಲಬುರಗಿ, ರಾಯಚೂರು, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

ದಕ್ಷಿಣ ಕನ್ನಡ, ಬಳ್ಳಾರಿ, ಬೀದರ್, ಗದಗ, ವಿಜಯಪುರ, ಯಾದಗಿರಿ, ದಾವಣಗೆರೆ, ಮಂಡ್ಯ, ಬಾಗಲಕೋಟೆ, ಕೊಪ್ಪಳ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

ಮಂಗಳವಾರ ಸಂಜೆ ರಾಜ್ಯದ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ 54.44 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಾಮರಾಜನಗರ ಜಿಲ್ಲೆಯ

ಚಾಮರಾಜನಗರ ಜಿಲ್ಲೆಯ ವಡ್ಡಗೆರೆ, ಹುಂಡಿಪುರ, ಶಿವಪುರ, ಗುಂಡ್ಲುಪೇಟೆ, ಕೋಲಾರ ಜಿಲ್ಲೆಯ ಕಾಮಸಮುದ್ರೆ, ತೊಪ್ಪನಹಳ್ಳಿ, ಸೋಮಯಾಜಪಲ್ಲಿ, ತಾಡಿಗೋಲು ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಹಾಸನ ಜಿಲ್ಲೆಯ ದುಮ್ಮೇನಹಳ್ಳಿ, ನರಸೀಪುರ, ಅರಕೆರೆ, ಅಗ್ಗುಂದ, ಡಿ.ಎಂ.ಕುರ್ಕೆ, ಉಡುಪಿ ಜಿಲ್ಲೆಯ ಗಂಗೊಳ್ಳಿ, ಗುಜ್ಜಾಡಿ, ತ್ರಾಸಿ, ಅನೇಗಳ್ಳಿ, ಹಾಕ್ಲಾಡಿ, ತುಮಕೂರು ಜಿಲ್ಲೆಯ ತುಮಕೂರು ನಗರ, ಊರ್ಡಿಗೆರೆ, ಮೈದಾಳ, ಪಾಲಸಂದ್ರದಲ್ಲಿ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಡಗಿ, ಬಚನಕಿ, ದೊಡ್ನಳ್ಳಿ, ಬಂಕನಾಳ್, ಇಂದೂರ್ ನಲ್ಲಿ ಉತ್ತಮ ಮಳೆಯಾಗಿರುವುದಾಗಿ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದುವರೆದ ಒಣಹವೆ

ರಾಜಧಾನಿ ಬೆಂಗಳೂರಿನಲ್ಲಿ ಒಣಹವೆ ಮುಂದುವರೆದಿದ್ದು ಹೆಚ್ಚು ತಾಪಮಾನದಿಂದ ಜನ ಕಂಗಾಲಾಗಿದ್ದಾರೆ. ಜುಲೈನಲ್ಲಿ ಸಾಧಾರಣ ಮಳೆಯಾಗಿದ್ದರೆ, ಆಗಸ್ಟ್‌ನಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟಿದೆ. ಗುರುವಾರ ನಗರದಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+