Karnataka Weather: ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಉಳಿದ ಜಿಲ್ಲೆಗಳ ಮಳೆ ಮುನ್ಸೂಚನೆ ವಿವರ

ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ವರುಣನ ಕೃಪೆ ಮುಂದುವರೆದಿದೆ. ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ.

ಜುಲೈ 20ರವರೆಗೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಹಲವು ಕಡೆಗಳಲ್ಲಿ ರೈತರು ಭತ್ತ ನಾಟಿ ಮಾಡಲು ಆರಂಭಿಸಿದ್ದಾರೆ.

 Karnataka Weather: Yellow Alert Issued For Karavali Districts, Other Districts Rain Prediction

ಭಾನುವಾರ ಕೂಡ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಶೃಂಗೇರಿ, ಹೊರನಾಡು, ಕೊಪ್ಪ, ಮೂಡಿಗೆರೆ, ಮಾವಿನಕಾಡು, ಕಾರವಾರ, ಗೋಕರ್ಣ, ಧರ್ಮಸ್ಥಳ, ಉಡುಪಿ, ಮಲ್ಪೆ, ಪಣಂಬೂರು, ಕಾಪು, ಶಿರಸಿ, ಸಾಗರ, ಶಿವಮೊಗ್ಗ, ಕಾರ್ಗಲ್ ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.

ನಾಲ್ಕು ದಿನಗಳ ಕಾಲ ಗುಡುಗು ಮಿಂಚಿನೊಂದಿಗೆ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಭಾರಿ ಅಲೆಗಳು ತೀರಕ್ಕೆ ಅಪ್ಪಳಿಸಲಿವೆ ಎಂದು ಹೇಳಿದ್ದು, ಪ್ರವಾಸಿಗರು ಮತ್ತು ಸ್ಥಳೀಯರಿಗೆ ಸಮುದ್ರದ ತೀರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ.

ಇತರ ಜಿಲ್ಲೆಗಳ ಮಳೆ ಮುನ್ಸೂಚನೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿ ಜಿಲ್ಲೆಗಳಲ್ಲಿ ಮಳೆ ಕೊರತೆ ಮುಂದುವರೆಯಲಿದ್ದು ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ದಾವಣಗೆರೆ, ವಿಜಯನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ. ಬೀದರ್ ಜಿಲ್ಲೆಯ ಹಲವು ಭಾಗಗಳಲ್ಲಿ ಮಾತ್ರ ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಅದನ್ನು ಹೊರತುಪಡಿಸಿದರೆ ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಹವಾಮಾನ

ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು ಸಂಜೆ ವೇಳೆಗೆ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜರಾಜೇಶ್ವರಿ ನಗರ ಮತ್ತು ಮಹದೇವಪುರ ವಲಯಗಳ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+