Karnataka wetaher: ಬಹುತೇಕ ಜಿಲ್ಲೆಗಳಲ್ಲಿ ಇನ್ನು ಶುರುವಾಯ್ತು ಚುಮು..ಚುಮು ಚಳಿ, ಹಲವೆಡೆ ಮಾತ್ರ ಜಿನುಗು ಮಳೆ ಮುನ್ಸೂಚನೆ
ಕರ್ನಾಟಕ, ಡಿಸೆಂಬರ್, 19: ಈಗಾಲೇ ಮಳೆಗಾಲ ಮುಗಿದಿದ್ದು, ಚಳಿಗಾಲ ಆರಂಭವಾಗಿದೆ. ಅಲ್ಲಲ್ಲಿ ಆಗಾಗ ಮಾತ್ರ ಜಿನುಗು ಮಳೆಯಾಗುತ್ತಿರುತ್ತದೆ. ಹಾಗೆಯೇ ರಾಜ್ಯದ ಮಲೆನಾಡು ಭಾಗದಲ್ಲಿ ಕಳೆದ ಎರಡು ದಿನಗಳಿಂದ ಚಳಿ ಪ್ರಮಾಣ ಹೆಚ್ಚಾಗಿದೆ. ಆದರೂ ರಾಜ್ಯದ ಈ ಭಾಗದಲ್ಲಿ ಸಾಧಾರಣ ಮಳೆ ಬೀಳಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು, ಮೈಸೂರು ಭಾಗದಲ್ಲೂ ಗರಿಷ್ಠ ಉಷ್ಣಾಂಶದಲ್ಲಿ ಏರಿಳಿತ ಕಂಡು ಬಂದಿದ್ದು, ಚುಮು.. ಚುಮು.. ಚಳಿಯ ವಾತಾವರಣ ಹೆಚ್ಚಾಗಿದೆ. ಕೊರೆಯುವ ಚಳಿಯ ಅನುಭವ ರಾಜ್ಯದ ಹಲವು ಭಾಗದಲ್ಲಿ, ವಿಶೇಷವಾಗಿ ದಕ್ಷಿಣ ಭಾಗದ ಹಲವು ಜಿಲ್ಲೆಗಳಲ್ಲಿ ಸೋಮವಾರದಿಂದ ಹೆಚ್ಚಾಗುತ್ತಲೇ ಇದೆ.

ಇನ್ನು ಇಂದು (ಡಿಸೆಂಬರ್ 19) ಕರಾವಳಿಯ ಮೂರು ಜಿಲ್ಲೆಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆ ಅಲ್ಲಲ್ಲಿ ಮಳೆ ಸುರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ತನ್ನ ದೈನಂದಿನ ಹವಾಮಾನ ವರದಿಯಲ್ಲಿ ಮಾಹಿತಿ ನೀಡಿದೆ.
ಉತ್ತರ ಕರ್ನಾಟಕದ ವಿಜಯಪುರದಲ್ಲಿ ಕಳೆದ ಒಂದು ತಿಂಗಳಿಗೂ ಅಧಿಕ ಕಾಲದಿಂದ ಕರ್ನಾಟಕದ ಸಮತಟ್ಟಾದ ಪ್ರದೇಶದಲ್ಲಿನ ಕನಿಷ್ಠ ಉಷ್ಣಾಂಶ ದಾಖಲು ಆಗುತ್ತಿತ್ತು. ಕಳೆದ ವಾರ ಅಲ್ಲಿ 6 ಡಿಗ್ರಿ ಸೆಲ್ಸಿಯಸ್‌ಗೂ ಇಳಿದಿತ್ತು. ಸೋಮವಾರ ವಿಜಯಪುರದಲ್ಲಿ 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿತ್ತು. ಈಗ ಅಲ್ಲಿ ಏರಿಕೆ ಆಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೀದರ್, ದಾವಣಗೆರೆಯಲ್ಲೂ ಒಂದೆರಡು ಬಾರಿ ಕನಿಷ್ಠ ಉಷ್ಣಾಂಶದ ವಾತಾವರಣ ಇತ್ತು. ನಂತರ ಏರಿಕೆ ಕಂಡುಬಂದಿದೆ. ಸೋಮವಾರ (ಡಿಸೆಂಬರ್ 18) ಬೀದರ್‌ನಲ್ಲಿ 16 ಡಿಗ್ರಿ ಸೆಲ್ಸಿಯಸ್ ಹಾಗೂ ದಾವಣಗೆರೆಯಲ್ಲಿ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು ಆಗಿತ್ತು.ಇನ್ನು ಇದೀಗ ಮಲೆನಾಡು ಭಾಗದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದೆ.
ಸೋಮವಾರ (ಡಿಸೆಂಬರ್ 18) ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿದೆ. ಶಿವಮೊಗ್ಗದಲ್ಲಿ 15.8 ಡಿಗ್ರಿ ಸೆಲ್ಸಿಯಸ್‌ನಷ್ಟು ಕಂಡು ಬಂದಿದೆ. ಇನ್ನು ಇಂದು (ಡಿಸೆಂಬರ್ 19) ಬೆಳಗ್ಗೆಯೂ ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿತ್ತು. ಹಾಗೆಯೇ ಕಣಿವೆ ಜಿಲ್ಲೆ ಮತ್ತು ಚಿಕ್ಕಮಗಳೂರಿನಲ್ಲಿ ಶಿವಮೊಗ್ಗಕ್ಕಿಂತ ಹೆಚ್ಚಿನ ಚಳಿ ಇದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸೋಮವಾರ 14.6 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಯಿತು. ಮಂಗಳವಾರವೂ ಚಿಕ್ಕಮಗಳೂರಿನಲ್ಲಿ ಚಳಿಯ ವಾತಾವರಣ ಹೆಚ್ಚಿರಲಿದೆ. ಮೈಸೂರು ಭಾಗದಲ್ಲಿ ಚಳಿ ಪ್ರಮಾಣ ಹೆಚ್ಚಿದೆ. ಮಂಗಳವಾರ ಬೆಳಗ್ಗಿನ ವೇಳೆ ಕೊರೆವ ಚಳಿಯ ವಾತಾವರಣ ಕಂಡುಬಂದಿತು.
ಇದರಿಂದ ಬೆಳಗ್ಗೆಯೇ ಕೆಸಲ ಆರಂಭಿಸುವವರು ಬಿಸಿ ಕಾಯಿಸಿಕೊಳ್ಳಲು ಮುಂದಾಗಿದ್ದು ಕಂಡು ಬಂದಿತು. ಇನ್ನು ಕೆಲವರು ಬಿಸಿ ಕಾಫಿ ಸೇವಿಸಿ ಮೈಬೆಚ್ಚಗೆ ಮಾಡಿಕೊಂಡಿದ್ದಾರೆ. ಮುಂದಿನ ಎರಡು ದಿನಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಯಾವುದೇ ಮುನ್ಸೂಚನೆ ಇಲ್ಲ. ಆದರೆ ಉಷ್ಣಾಂಶದಲ್ಲಿ ಏರಿಳಿತ ಇರಲಿದ್ದು, ಚಳಿಯ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶದ ಜೊತೆಗೆ ಕನಿಷ್ಠ ಉಷ್ಣಾಂಶದಲ್ಲೂ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆಗಲಿದೆ.
ಇನ್ನು ಮುಂದಿನ 24 ಗಂಟೆಗಳ ಕಾಲ ಮಂಗಳವಾರ (ಡಿಸೆಂಬರ್ 19) ಬೆಳಗ್ಗೆಯಿಂದ ಬುಧವಾರ (ಡಿಸೆಂಬರ್ 20) ಬೆಳಗ್ಗೆವರೆಗೂ ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಬೆಂಗಳೂರಿನ ಗರಿಷ್ಠ ಉಷ್ಣಾಂಶದಲ್ಲಿ ಸ್ವಲ್ಪ ಕುಸಿತ ಕಂಡುಬರಲಿದೆ. ಗರಿಷ್ಠ ಉಷ್ಣಾಂಶದ ಪ್ರಮಾಣ 24 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದ್ದು, ಕನಿಷ್ಠ ಉಷ್ಣಾಂಶವು 19 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲು ಆಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗೆಯೇ ಗುರುವಾರ (ಡಿಸೆಂಬರ್ 21) ಬೆಳಗ್ಗೆಯೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡ ಕವಿದ ವಾತಾರಣ ಇರುವ ಸಾಧ್ಯತೆಯಿದೆ. ಮಂಜು ಮುಸುಕಿದ ವಾತಾವರಣವೂ ಕೆಲವು ಭಾಗದಲ್ಲಿ ಇರಲಿದೆ. ಬುಧವಾರ ಬೆಂಗಳೂರಿನ ಗರಿಷ್ಠ ಉಷ್ಣಾಂಶವು 25 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆದರೆ, ಕನಿಷ್ಠ ಉಷ್ಣಾಂಶವು 18 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆ ಆಗುವ ಸಾಧ್ಯೆತೆಯಿದೆ. ಇದರಿಂದ ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಇನ್ನಷ್ಟು ಅಧಿಕ ಆಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನಿನ್ನೆ (ಡಿಸೆಂಬರ್ 18) ರಾಜ್ಯದ ಒಂದೆರಡು ಕಡೆ ಸಾಧಾರಣ ಮಳೆ ಆಗಿದೆ. ಮಂಗಳವಾರವೂ (ಡಿಸೆಂಬರ್ 19) ಕೂಡ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿಯ ಒಂದೆರಡು ಕಡೆಗಳಲ್ಲಿ ಮಳೆ ಬೀಳಬಹುದು ಎಂದು ಮುನ್ಸೂಚನೆ ನೀಡಿದೆ. ಅಲ್ಲದೆ ದಕ್ಷಿಣ ಒಳನಾಡಿನ ಒಂದೆರಡು ಭಾಗಗಲ್ಲೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ತಿಳಿಸಿದೆ.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications