Karnataka weather: ರಾಜ್ಯದ ಈ ಜಿಲ್ಲೆಗಳಲ್ಲಿ ಜಿನುಗು ಮಳೆ ಮುನ್ಸೂಚನೆ, ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಕೆ
ಕರ್ನಾಟಕ, ಡಿಸೆಂಬರ್, 20: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಚಳಿಯ ವಾತಾವರಣ ಮುಂದುವರೆದಿದ್ದು, ಕೆಲವೇ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಆಗಾಗ ಜಿನುಗು ಮಳೆಯಾಗುತ್ತಿದೆ ಅಷ್ಟೆ. ಹಾಗಾದರೆ ಇಂದು ಯಾವೆಲ್ಲ ಕಡೆ ಹೆಚ್ಚಿನ ಪ್ರಮಾಣದಲ್ಲಿ ಚಳಿ ಇರಲಿದೆ ಹಾಗೂ ಎಲ್ಲೆಲ್ಲಿ ಮಂಜು ಸಹಿತ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಂಪೂರ್ಣವಾಗಿ ನಿಂತು ಹೋಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಜಿ ಕವಿದ ವಾತಾವರಣ ಇದ್ದರೂ ಆಗಾಗ ಜಿನುಗು ರೀತಿಯಲ್ಲಿ ಮಳೆಯಾಗುತ್ತಿರುತ್ತದೆ. ಇನ್ನು ಬಿಸಿಲಿನ ತಾಪಮಾನ ಮಾತ್ರ ದಿನದಿಂದ ದಿನಕ್ಕೆ ನಗರಲ್ಲಿ ಕಡಿಮೆಯಾಗುತ್ತಿದೆ.

ಇನ್ನು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರೆದಿದೆ. ಎರಡು ದಿನಗಳಿಂದ ಕನಿಷ್ಠ ಉಷ್ಣಾಂಶ ಕುಸಿತದದಿಂದಾಗಿ ಈ ಭಾಗದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಿದೆ. ಕನಿಷ್ಠ ಉಷ್ಣಾಂಶ 20 ಡಿಗ್ರಿಗಿಂತ ಕಡಿಮೆಯಿರುವುದು ಚಳಿಯ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ರಾಜ್ಯದ ದಕ್ಷಿಣ ಭಾಗದ ಕೆಲವೆಡೆ ಗುರುವಾರ (ಡಿಸೆಂಬರ್ 21) ಮಳೆ ಬೀಳುವ ಮುನ್ಸೂಚನೆಯನ್ನು ನೀಡಿದೆ. ಇನ್ನುಳಿದ ಕಡೆ ಮುಂದಿನ 5 ದಿನಗಳ ಕಾಲ ಬೆಂಗಳೂರು, ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಕರ್ನಾಟಕದ ಯಾವ ಭಾಗದಲ್ಲೂ ಮಳೆಯ ಸೂಚನೆ ಇಲ್ಲ ಎಂದು ತಿಳಿಸಿದೆ.
ಎಲ್ಲೆಲ್ಲಿ ಕನಿಷ್ಠ ಉಷ್ಣಾಂಶ ದಾಖಲು?
ಉತ್ತರ ಕರ್ನಾಟಕ ಭಾಗದ ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಂಗಳವಾರ (ಡಿಸೆಂಬರ್ 19) ವಿಜಯಪುರದಲ್ಲಿ 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾದರೆ, ಬೀದರ್‌ನಲ್ಲಿ 15 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು. ಬಾಗಲಕೋಟೆಯಲ್ಲಿ 17.9 ಡಿಗ್ರಿ ಸೆಲ್ಸಿಯಸ್, ಗದಗ ಹಾಗೂ ಧಾರವಾಡದಲ್ಲಿ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಇನ್ನು ಬೆಳಗಾವಿಯಲ್ಲಿ 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ದಾಖಲಾದರೆ, ಕಲಬುರಗಿಯಲ್ಲಿ 18.8 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 19.2 ಡಿಗ್ರಿ ಸೆಲ್ಸಿಯಸ್, ಬೆಳಗಾವಿ ನಗರದಲ್ಲಿ 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು ಆಗಿದೆ. ರಾಯಚೂರಿನಲ್ಲಿ 20 ಡಿಗ್ರಿ, ಹಾವೇರಿಯಲ್ಲಿ 20.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಒಳನಾಡಿನಲ್ಲೂ ಕೆಲ ದಿನಗಳಿಂದ ಚಳಿಯ ವಾತಾರಣವೇ ಮುಂದುವರೆದಿದೆ. ಬೆಂಗಳೂರಿನಲ್ಲಿ 17.7 ಡಿಗ್ರಿ ಸೆಲ್ಸಿಯಸ್, ಬೆಂಗಳೂರು KIA ವಿಮಾನ ನಿಲ್ದಾಣ ಸುತ್ತಮುತ್ತ 17.1 ಡಿಗ್ರಿ ಸೆಲ್ಸಿಯಸ್, ಚಿಕ್ಕಮಗಳೂರಿನಲ್ಲಿ 14.4 ಡಿಗ್ರಿ, ಚಿತ್ರದುರ್ಗದಲ್ಲಿ 17.8 ಡಿಗ್ರಿ ಸೆಲ್ಸಿಯಸ್, ಶಿವಮೊಗ್ಗದಲ್ಲಿ 19.6 ಡಿಗ್ರಿ, ಮಡಿಕೇರಿಯಲ್ಲಿ18.9 ಡಿಗ್ರಿ, ಚಾಮರಾಜನಗರದಲ್ಲಿ 18.7 ಡಿಗ್ರಿ, ದಾವಣಗೆರೆಯಲ್ಲಿ 19 ಡಿಗ್ರಿ, ಮಂಡ್ಯದಲ್ಲಿ 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲು ಆಗಿದೆ.
ಕರಾವಳಿಯಲ್ಲಿ ಭಿನ್ನ ವಾತಾವರಣ. ಇಲ್ಲಿ ಕನಿಷ್ಠ ಉಷ್ಣಾಂಶ ಕೊಂಚ ಹೆಚ್ಚೇ ಇದೆ. ಅಂದರೆ ಉತ್ತರ ಕನ್ನಡದ ಶಿರಾಲಿಯಲ್ಲಿ21 ಡಿಗ್ರಿ ಸೆಲ್ಸಿಯಸ್, ಹೊನ್ನಾವರದಲ್ಲಿ 25.4 ಡಿಗ್ರಿ, ಕಾರವಾರದಲ್ಲಿ 25.7 ಡಿಗ್ರಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ 24.9 ಡಿಗ್ರಿ ಹಾಗೂ ಪಣಂಬೂರಿನಲ್ಲಿ 24.1 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಡಿಸೆಂಬರ್ 20, 22, 23, 24ರಂದು ಕರ್ನಾಟಕದ ರಾಜ್ಯದ ಬಹುತೇಖ ಭಾಗಗಳಲ್ಲಿ ಒಣ ಹವೆಯ ವಾತಾವರಣ ಮುಂದುವರೆಯಲಿದೆ. ಕರಾವಳಿ ಭಾಗದ ಮೂರು ಜಿಲ್ಲೆಗಳು, ಉತ್ತರ ಕರ್ನಾಟಕದ ಹಲವು ಭಾಗಗಳು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಒಣ ಹವೆ ಇರಲಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಮಳೆ?
ಇನ್ನು ಗುರುವಾರ (ಡಿಸೆಂಬರ್ 21ರ) ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರವಾಗಿ ಮಳೆ ಬೀಳುವ ಸಾಧ್ಯತೆಯಿದೆ. ಆದರೆ ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದಲ್ಲಿ ಒಣ ಹವೆಯಿರಲಿದ್ದು, ಮಳೆಯಾಗುವ ಸೂಚನೆಗಳಿಲ್ಲ ಎಂದು ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಹಾಗೂ ಗುರುವಾರ (ಡಿಸೆಂಬರ್ 20, 21) ಮಳೆ ಬೀಳುವ ವಾತಾವರಣ ಇಲ್ಲ. ಈ ಭಾಗದಲ್ಲಿ ಮೋಡ ಕವಿದ ವಾತಾವರಣವೇ ಹೆಚ್ಚು ಕಂಡುಬರಲಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯೇ ಮಂಜು ಮುಸುಕುವ ಸಾಧ್ಯತೆಗಳು ಅಧಿಕವಾಗಿವೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದರೆ, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಬಹುದು ಎಂದು ಮುನ್ಸೂಚನೆ ನೀಡಿದೆ.
-
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ











Click it and Unblock the Notifications